ದಾಂಡೇಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೯ ನೇ ಸಾಲು:
==ಪ್ರವಾಸಿಗರು ಬರಲು ಕಾರಣ==
ದಾಂಡೇಲಿಯು ರಾಜ್ಯದಲ್ಲಿಯೇ ಎರಡನೇ ದೊಡ್ಡ ವನ್ಯಜೀವಿಧಾಮವೆಂದು ಹೆಸರಾಗಿದೆ. ಅದಕ್ಕೆಂದೇ ಭಾರೀ ಸಂಖ್ಯೆಯ ಪ್ರವಾಸಿಗರು ದಾಂಡೇಲಿಗೆ ಭೇಟಿ ನೀಡುತ್ತಾರೆ. 2007 ರಲ್ಲಿ ದಾಂಡೇಲಿ ವನ್ಯಜೀವಿ ಧಾಮವನ್ನು ಹುಲಿಗಳ ಸಂರಕ್ಷಿತ ಪ್ರದೇಶವೆಂದು ಘೋಷಿಸಲಾಯಿತು. ದಾಂಡೇಲಿ ವನ್ಯಜೀವಿಧಾಮವು ಕಾಳಿ ನದಿಯ ಉಪನದಿಗಳಾದ ಕನೇರಿ ಮತ್ತು ನಾಗಝರಿಯೊಂದಿಗೆ ದಟ್ಟವಾದ ಅರಣ್ಯದಿಂದ ಕೂಡಿದೆ.
ಈ ವನ್ಯಜೀವಿ ಧಾಮವು ಹುಲಿ, ಚಿರತೆ, ಕಾಡಾನೆ, ಜಿಂಕೆ, ಕಾಡೆಮ್ಮೆ, ಕಾಡುಕೋಡಣಕಾಡುಕೋಣ, ಕರಡಿ, ನರಿ, ಜೋಳ, ಲಂಗೂರ ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಪಕ್ಷಿಗಳಿಗೆ ಆಶ್ರಯ ನೀಡಿದೆ. ಇಲ್ಲಿನ ಕಾಳಿ ನದಿಯಲ್ಲಿ ಸಾಹಸ ಜಲಕ್ರೀಡೆಗಳಾದ ರಾಫ್ಟಿಂಗ್, ಕೇಯಕಿಂಗ್, ಕನೋಯಿಂಗ್ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಆನಂದಿಸಬಹುದು. ಅಲ್ಲದೇ ಗುಡ್ಡಗಾಡು ಸೈಕಲ್ ಸವಾರಿ, ಚಾರಣ, ಹಾಗೂ ಮೊಸಳೆಗಳ ಪಾರ್ಕ್, ಬೋಟಿಂಗ್, ಮೀನುಗಾರಿಕೆ, ಪಕ್ಷಿ ವೀಕ್ಷಣೆ ಈ ವನ್ಯಜೀವಿ ಧಾಮದಲ್ಲಿ ಪ್ರವಾಸಿಗರು ಆನಂದಿಸಬಹುದು.
ಪ್ರಖ್ಯಾತ ಧಾರ್ಮಿಕ ಸ್ಥಳ ಉಳವಿ, ಸೈಕ್ಸ್ ಪಾಯಿಂಟ್, ಸುಪಾ ಡ್ಯಾಮ್, ಸಿಂಥೇರಿ ರಾಕ್ಸ್, ಕವಲ ಗುಹೆ ದಾಂಡೇಲಿಗೆ ಹತ್ತಿರದಲ್ಲಿರುವ ಇತರೆ ಪ್ರೇಕ್ಷಣೀಯ ಸ್ಥಳಗಳು. ಪಶ್ಚಿಮ ಘಟ್ಟಗಳ ಸರಹದ್ದಿನ ಕಾಳಿ ನದಿ ದಂಡೆಯಲ್ಲಿರುವ ದಾಂಡೇಲಿ ನಗರವು ಸಮುದ್ರ ಮಟ್ಟದಿಂದ 1551 ಅಡಿಗಳಷ್ಟು ಎತ್ತರವಿದೆ. ಗೋವಾದಿಂದ 125 ಕಿ.ಮೀ. ದೂರದಲ್ಲಿರುವು ದಾಂಡೇಲಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿಗಳಿಂದ ರಸ್ತೆ ಮೂಲಕ ಬರಬಹುದಾಗಿದೆ.
 
"https://kn.wikipedia.org/wiki/ದಾಂಡೇಲಿ" ಇಂದ ಪಡೆಯಲ್ಪಟ್ಟಿದೆ