ಕನ್ನಡದಲ್ಲಿ ಅಂಕಣ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Orphan page, add template
೧ ನೇ ಸಾಲು:
{{Orphan|date=ಮಾರ್ಚ್ ೨೦೧೯}}
==ಇತಿಹಾಸ==
ಇದೊಂದು ವಿಶಿಷ್ಟ ಬಗೆಯ ಪತ್ರಿಕಾಸಾಹಿತ್ಯ. ಪತ್ರಿಕೆಗಳಲ್ಲಿ ನಿಯತವಾಗಿ ಬರೆಯುವ ನಿರ್ದಿಷ್ಟ ಲೇಖನಕ್ಕೆ ಅಂಕಣ ಬರೆಹವೆಂದು ಹೆಸರು. ಕನ್ನಡದಲ್ಲಿ ಅಂಕಣ ಹಾಗೂ ಅಂಕಣ ಸಾಹಿತ್ಯದ ಪರಿಕಲ್ಪನೆ ಇಂಗ್ಲಿಷ್ ಪತ್ರಿಕೋದ್ಯಮದಿಂದ ಬಂದಿದ್ದು. ಇಂಗ್ಲಿಷಿನ ಕಾಲಂ ಎಂಬ ಪದ ಹಾಗೂ ಪರಿಕಲ್ಪನೆಗೆ ಸಂವಾದಿಯಾಗಿ ಕನ್ನಡದಲ್ಲಿ ಅಂಕಣ ಎಂಬ ಪದ ಬಳಕೆಯಾಗುತ್ತಿದೆ. ಯಾವುದೇ ವಸ್ತು ವಿಷಯವನ್ನು ಕುರಿತು ಒಂದು ನಿರ್ದಿಷ್ಟ ಪತ್ರಿಕೆ ಅಥವಾ ನಿಯತಕಾಲಿಕೆಗೆ ತಮ್ಮ ವೈಯಕ್ತಿಕ ಚಿಂತನೆಯನ್ನು ಸೇರಿಸಿ ನಿಯತವಾಗಿ ಬರೆಯುವವನೇ ಅಂಕಣಕಾರ. ಅಂಕಣ ಬರೆಹದಲ್ಲಿ ಅಂಕಣಕಾರ ಸಮಕಾಲೀನ ವಸ್ತು ವಿಷಯಗಳಿಗೆ ಸ್ವಂತಿಕೆಯ ಲೇಪ ಹಾಗೂ ಛಾಪನ್ನು ನೀಡಬೇಕಾಗುತ್ತದೆ. -ಇದು ಅಂಕಣ ಬರೆಹದ ಒಂದು ಮುಖ್ಯಲಕ್ಷಣವಾಗಿದೆ.