ಕನ್ನಡದಲ್ಲಿ ಮಹಿಳಾ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Orphan page, add template
೧ ನೇ ಸಾಲು:
{{Orphan|date=ಮಾರ್ಚ್ ೨೦೧೯}}
'''ಕನ್ನಡದಲ್ಲಿ ಮಹಿಳಾ ಸಾಹಿತ್ಯ'''ದ ಸಾವಿರದೈನೂರು ವರ್ಷಗಳ [[ಕನ್ನಡ]] ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ [[ಸಾಹಿತ್ಯ]], ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ [[ಮಹಿಳೆ]] [[ಕನ್ನಡ]] ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು. ಗುರುತಿಸುವಂಥ ಸೃಜನಶೀಲತೆ ನಮಗೆ ಕಾಣುವುದು 20ನೆಯ ಶತಮಾನದಲ್ಲಿಯೇ ಎನ್ನಬಹುದು.