ಆಯುರ್ವೇದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫ ನೇ ಸಾಲು:
==ಸೂಕ್ಷ್ಮಪರಿಚಯ==
ಆಯುರ್ವೇದ ಭಾರತೀಯ ವೈದ್ಯಶಾಸ್ತ್ರ. ನಮಗೆ ಗೋಚರವಾಗುವ ಎಲ್ಲ ದ್ರವ್ಯಗಳೂ ಪಂಚಮಹಾಭೂತಗಳ ಸಂಘಟನೆಯಿಂದಾಗಿವೆ. ಚೇತನಾದ್ರವ್ಯವೆನಿಸಿದ [[ಆತ್ಮ]]ನ ಸಂಯೋಗದಿಂದ ಜೀವರಾಶಿಗಳೇರ್ಪಡುತ್ತವೆ. ಈ ತತ್ವಕ್ಕನುಸಾರವಾಗಿ ಮನುಷ್ಯ, ಪಂಚಭೂತ ಮತ್ತು ಆತ್ಮ ಸೇರಿ ಆಗಿರುವ [[ಪ್ರಾಣಿ]]. ಇತರ ಪ್ರಾಣಿ, [[ಸಸ್ಯ]], [[ಖನಿಜ]], [[ಗಾಳಿ]], [[ನೀರು]] ಮುಂತಾದುವುಗಳನ್ನು ಯುಕ್ತಿಯಿಂದ ಉಪಯೋಗಿಸಿಕೊಳ್ಳುತ್ತ ಮನುಷ್ಯ ತನ್ನ ಜೀವನವನ್ನು ಸಾಗಿಸುತ್ತಾನೆ. ಸಾಧನ ಚತುಷ್ಟಯಗಳಾದ [[ಧರ್ಮ]], [[ಅರ್ಥ]], [[ಕಾಮ]] ಮತ್ತು [[ಮೋಕ್ಷ]]ಗಳಿಗೆ ಇವನ ಶರೀರವೇ ಆಧಾರವಾದುದರಿಂದ ಇದನ್ನು ಯಾವ ಬಾಧೆಯೂ ಇಲ್ಲದಂತೆ ಬಹುಕಾಲ ಕಾಪಾಡಲು ಪ್ರಯತ್ನಪಡುತ್ತಾನೆ. ಇದೇ ಆರೋಗ್ಯರಕ್ಷಣೆ.
ಆರೋಗ್ಯ ಆಹಾರ, ದೇಶ, ಕಾಲ, ನಿದ್ರೆ, ಬ್ರಹ್ಮಚರ್ಯೆ, ನಡವಳಿಕೆ ಮುಂತಾದವುಗಳನ್ನವಲಂಬಿಸಿದೆ. ಇವುಗಳಲ್ಲಿ ಹೆಚ್ಚು ಕಡಿಮೆಯಾಗುವುದರಿಂದ ಆರೋಗ್ಯ ಕೆಡುವುದು. ಈ ಅವಸ್ಥೆಯೇ [[ರೋಗ]]. [[ಆರೋಗ್ಯ]]ದಲ್ಲೂ [[ಶರೀರ]] ಮತ್ತು [[ಮನಸ್ಸು]]ಗಳ ಸ್ಥಿತಿಗೆ ಪಂಚಭೂತಗಳೇ ಕಾರಣ. ಪಂಚೀಕೃತವಾದ ಭೌತಿಕ ದ್ರವ್ಯಗಳಲ್ಲಿ ಪ್ರಧಾನವಾದುವು. [[ವಾಯು]], [[ಆಗ್ನಿಅಗ್ನಿ]] ಮತ್ತು ಉದಕ. ಇವು ಶರೀರದಲ್ಲಿ ವಾಯು, [[ಪಿತ್ತ]] ಮತ್ತು [[ಕಫ]] ರೂಪದಲ್ಲಿವೆ. ಇವುಗಳ ಗುಣಕರ್ಮಗಳು ಶರೀರಾವಯವಗಳಿಗೆ (ಧಾತುಗಳಿಗೆ) ಸಮಾನವಾಗಿದ್ದರೆ ದೇಹಪೋಷಣೆಯನ್ನೂ ವಿಷಮವಾಗಿದ್ದರೆ ರೋಗ ಮತ್ತು ಮರಣವನ್ನೂ ಉಂಟುಮಾಡುವುವು. ನಿತ್ಯಜೀವನದಲ್ಲಿ ಆಹಾರಾದಿಗಳ ವ್ಯತ್ಯಾಸವಾಗುತ್ತಿದ್ದು ವಾತ, ಪಿತ್ತ ಮತ್ತು ಕಫಗಳು ಹೆಚ್ಚುಕಡಿಮೆಯಾಗಿ ಧಾತುಗಳನ್ನು ದೂಷಿಸುವುದರಿಂದ ಇವುಗಳಿಗೆ ದೋಷಗಳೆಂದು ಹೆಸರು ಬಂದಿದೆ. ಧಾತುಗಳು ಬಲಿಷ್ಠವಾಗುವವರೆಗೂ ಆಹಾರಾದಿಗಳ ಹೆಚ್ಚು ಕಡಿಮೆಯಿಂದ ಯಾವ ಬಾಧೆಯೂ ತೋರುವುದಿಲ್ಲ. ಆಗ ದೋಷಗಳ ಬಲ ಕಡಿಮೆಯಾಗಿರುವುದು. ಇದಕ್ಕೆ ವಿರುದ್ಧವಾಗಿದ್ದರೆ ದುಷ್ಟದೋಷಗಳು ರೋಗಕ್ಕೆ ಕಾರಣವಾಗುತ್ತವೆ. ಸರಿಯಾದ ವ್ಯಾಯಾಮ, ಸ್ನಿಗ್ಧಾಹಾರ ಮತ್ತು ಹಸಿವು ಇರುವ ಮನುಷ್ಯನಿಗೆ ವಿರುದ್ಧವಾದುವು ಪೀಡಿಸುವುದಿಲ್ಲ. ಆದರೂ ಅಭ್ಯಾಸವಿರುವ ಆಹಾರವನ್ನು ಮಿತವಾಗಿಯೇ ಸೇವಿಸಬೇಕು.
ರೋಗಕ್ಕೆ ಕಾರಣವಾದುದನ್ನು (ರೋಗಹೇತು) ವರ್ಜಿಸುವುದು, ರೋಗಲಕ್ಷಣಗಳಿಂದ (ಲಿಂಗ) ವಿಷಮ ದೋಷಗಳ ವೃದ್ಧಿಕ್ಷಯಗಳನ್ನು ಕಂಡುಹಿಡಿದು, ಅವುಗಳನ್ನು ಸಮಸ್ಥಿತಿಯಲ್ಲಿರಿಸಿ ಧಾತುಗಳ ಬಲವನ್ನು ಹೆಚ್ಚಿಸುವುದು(ಔಷಧ)-ಈ ವೈದ್ಯಪದ್ಧತಿಯ ತತ್ತ್ವಗಳು. ಹೇತುಲಿಂಗೌಷಧ ಜ್ಞಾನವನ್ನನುಸರಿಸಿ ಆರೋಗ್ಯವನ್ನು ರಕ್ಷಿಸಿಕೊಳ್ಳುವುದು ಎಲ್ಲ ಕಾಲಕ್ಕೂ ವಿಹಿತವಾಗಿದೆ. ಶರೀರದಲ್ಲಿ ಉತ್ಪತ್ತಿಯಾಗುವ ವಾತವಿಣ್ಮೂತ್ರಾದಿಗಳ ವೇಗಗಳನ್ನು ತಡೆಯುವುದು. ವೇಗವಿಲ್ಲದಿರುವಾಗ ಅದನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸುವುದು ಎಲ್ಲ ರೋಗಗಳಿಗೂ ಸಾಮಾನ್ಯ ಕಾರಣವಾಗುವುವು. ಶಾರೀರಿಕ ಕ್ರಿಯೆಯಲ್ಲಿ ವ್ಯತ್ಯಾಸವಾಗಿ ಉಂಟಾಗುವ ರೋಗಕ್ಕೆ ನಿಜರೋಗವೆಂದೂ ಅಪಫಾತ, ಅಗ್ನಿ, ವಿಷ ಮುಂತಾದ ಹೊರಗಿನ ಕಾರಣಗಳಿಂದ ಸಂಭವಿಸುವ ರೋಗಕ್ಕೆ ಆಗಂತುಕವೆಂದೂ ಹೆಸರು. ಆಗಂತುಕದಲ್ಲಿ ಬಾಧೆಯಾದ ಅನಂತರ ದೋಷವೈಷಮ್ಯ ಕಂಡುಬರುವುದು. ಚಿಕಿತ್ಸೆಯನ್ನು ದೋಷಕ್ಕೆ ತಕ್ಕಂತೆಯೂ ವ್ಯಾಧಿಗೆ ತಕ್ಕಂತೆಯೂ ಎಂದರೆ ದೋಷಪ್ರತ್ಯನೀಕ ಮತ್ತು ವ್ಯಾಧಿಪ್ರತ್ಯನೀಕವೆಂದು ಎರಡು ಭಾಗ ಮಾಡುವುದುಂಟು. ರೋಗ ತನ್ನ ಸ್ಪಷ್ಟ ರೂಪವನ್ನು ಹೊಂದುವುದಕ್ಕೆ ಮೊದಲು ಶೋಧನ ಅಥವಾ ಶಮನಕ್ರಿಯೆಗಳಿಂದ ದೋಷಗಳನ್ನು ಸರಿಪಡಿಸುವುದು ದೋಷಪ್ರತ್ಯನೀಕ. ರೋಗ ಸ್ಪಷ್ಟವಾಗಿ ಮುಂದುವರಿಯುತ್ತಿದ್ದರೆ ರೋಗಹರಣಮಾಡುವ ಸಿದ್ಧೌಷಧ ಪ್ರಯೋಗ ವ್ಯಾಧಿಕ್ರುತ್ಸನೀಕವೆನಿಸುವುದು. ಚಿಕಿತ್ಸೆಗೆ ಕೇವಲ ಔಷಧಗಳೇ ಅಲ್ಲದೆ ಕ್ಷಾರ, ಕರ್ಮ, ಶಸ್ತ್ರಕರ್ಮ ಮತ್ತು ಅಗ್ನಿಕರ್ಮಗಳೆಂಬ ಬೇರೆ ಬೇರೆ ಉಪಾಯಗಳಿವೆ. ಕ್ಷಾರ ಮತ್ತು ಅಗ್ನಿಕರ್ಮಗಳು ದುರ್ಮಾಂಸ, ವಿಷದಂಶ ಮುಂತಾದುವನ್ನು ಸುಡುವುದರಲ್ಲೂ ಶಸ್ತ್ರಕರ್ಮ ಶಲ್ಯಾಹರಣ, ವಿದ್ರಧಿ (ಕುರು ಅಥವಾ ಬಾವು), ಅಧಿüಮಾಂಸ, ಅಸ್ಥಿಭಗ್ನ ಮುಂತಾದುವುಗಳಲ್ಲೂ ಉಪಯೋಗವಾಗಿವೆ. ನಾಡೀಪರೀಕ್ಷೆ, [[ಪಂಚಕರ್ಮ]], ಲೋಹಾದಿಗಳ ಭಸ್ಮ ಪ್ರಯೋಗಗಳು ಚಿಕಿತ್ಸೆಯಲ್ಲಿ ಬಹಳ ಉಪಯುಕ್ತವಾಗಿವೆ. ವೈದ್ಯರು ತಮಗೆ ಬೇಕಾದ ಔಷಧಗಳನ್ನು ತಾವೇ ಮಾಡಿಕೊಳ್ಳುವುದು, ಏಕಮೂಲಿಕಾ ಪ್ರಯೋಗ, ಪಥ್ಯಕ್ರಮ, ಋತುಗಳಿಗೆ ತಕ್ಕ ಆಹಾರ ವಿಹಾರ ನಿಯಮಗಳು-ಇವು ಆಯುರ್ವೇದದ ವೈಶಿಷ್ಟ್ಯಗಳು.
ದೀರ್ಘಾಯುಸ್ಸು, ಸ್ಮೃತಿ, ಮೇಧಾಶಕ್ತಿ ಮುಂತಾದುವನ್ನು ಪಡೆಯುವುದಕ್ಕೆ ರಸಾಯನ ಪ್ರಯೋಗಗಳುಂಟು. ಮನುಷ್ಯ ನೆಮ್ಮದಿಯಾಗಿದ್ದುಕೊಂಡು ತನ್ನ ವಂಶಾಭಿವೃದ್ಧಿ ಹಾಗೂ ಸುಖಸಂತೋಷಕ್ಕಾಗಿ ಸತ್ಸಂತಾನವನ್ನು ಪಡೆಯುವುದಕ್ಕೋಸ್ಕರ ವಾಜೀಕರಣವೆಂಬ ವಿಧಿಯುಂಟು. ಇವೆಲ್ಲವನ್ನೂ ಒಳಗೊಂಡಿರುವ ಆಯುರ್ವೇದವನ್ನು ಶಲ್ಯ, ಶಾಲಾಕ್ಯ, ಕಾಯಚಿಕಿತ್ಸಾ, ಭೂತವಿದ್ಯಾ, ಕೌಮಾರಭೃತ್ಯ, ಅಗದತಂತ್ರ (ವಿಷ ಚಿಕಿತ್ಸಾ) ರಸಾಯನ ತಂತ್ರ ಮತ್ತು ವಾಜೀಕರಣತಂತ್ರಗಳೆಂದು ಎಂಟುವಿಧವಾಗಿ ಮಾಡಿದ್ದಾರೆ.
"https://kn.wikipedia.org/wiki/ಆಯುರ್ವೇದ" ಇಂದ ಪಡೆಯಲ್ಪಟ್ಟಿದೆ