ಬಾಹುಬಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೭ ನೇ ಸಾಲು:
ಪೌದನಪುರದಲ್ಲಿಯ ಪ್ರತಿಮೆ ಆಗಮ್ಯವೆನಿಸಿದ್ದರಿಂದ ತನ್ನ ತಾಯಿ ದರ್ಶಿಸಲೆಂದು ಚಾವುಂಡರಾಯ ಈ ಮೂರ್ತಿಯನ್ನು ಕೆತ್ತಿಸಿದಂತೆ ಆಖ್ಯಾನಕವಿದೆ. ಈ ವಿಗ್ರಹಕ್ಕೆ ಗೊಮ್ಮಟೇಶ್ವರ ಎಂಬ ಹೆಸರು ಬಂದದ್ದು ಚಾವುಂಡರಾಯನಿಂದಲೇ. ನೇಮಿಚಂದ್ರಸಿದ್ಧಾಂತ ಚಕ್ರವರ್ತಿಯಿಂದ ರಚಿತವಾದ ಗೊಮ್ಮಟಸಾರವೆಂಬ ಗ್ರಂಥದಿಂದ ಚಾವುಂಡರಾಯನಿಗೆ ಗೊಮ್ಮಟರಾಯನೆಂಬ ಹೆಸರಿದ್ದುದೂ ಆತ ಬೆಳ್ಗೊಳದಲ್ಲಿ ಕಟ್ಟಿಸಿದ ಬಸದಿಯ ಮತ್ತು ಕೆತ್ತಿಸಿದ ಈ ವಿಗ್ರಹ ವಿಷಯವೂ ತಿಳಿಯುತ್ತದೆ. ಗೊಮ್ಮಟ ಅಂದರೆ ಸುಂದರ, ಚೆಲುವ ಮನ್ಮಥ ಎಂದರ್ಥ. ಇದು ಅವನ ಮನೆಯ ಹೆಸರಾಗಿರಬೇಕು. ಆತ ಕೆತ್ತಿಸಿದ ಈಶ್ವರ ಅಂದರೆ ಆರಾಧ್ಯ ದೇವತೆಯ ಹೆಸರು ಗೊಮ್ಮಟೇಶ್ವರ. ಇದರಿಂದ ಮುಂದಿನ ಕಾಲದಲ್ಲಿ ಬಾಹುಬಲಿಯ ಮೂರ್ತಿಗಳು, ಕಾರ್ಕಳ, ವೇಣೂರು ಮೊದಲಾದ ಸ್ಥಳಗಳಲ್ಲಿ ಗೊಮ್ಮಟೇಶ್ವರ ಎಂಬ ಹೆಸರಿನಿಂದಲೇ ಪ್ರಸಿದ್ಧವಾಗಿದೆ. ಧವಲಾದಿಸಿದ್ಧಾಂತ ಗ್ರಂಥಗಳ ಸಾರವಾಗಿ ನೇಮಿಚಂದ್ರ ಚಾವುಂಡರಾಯ ಅಥವಾ ಗೊಮ್ಮಟರಾಯನ್ನು ಕುರಿತು ಬರೆದ ಗ್ರಂಥದ ಹೆಸರು ಗೊಮ್ಮಟಸಾರ.
 
ಗೊಮ್ಮಟೇಶ್ವರನ ಈ ವಿಶಾಲಕಾರ ಮತ್ತು ಅದ್ವಿತೀಯ ಪ್ರತಿಮೆಯಿಂದ ಶ್ರವಣಬೆಳ್ಗೊಳ ತೀರ್ಥಕ್ಷೇತ್ರ ಮತ್ತು ಯಾತ್ರಾಸ್ಥಳವಾಗಿದೆ. ವಿಂಧ್ಯಗಿರಿಯ ಮೇಲಿನ ಬೃಹತ್ಕಾಯದ ಬಾಹುಬಲಿಯ ಪೂಜೆಯೆಂದರೆ ಒಂದು ಮಹೋತ್ಸವವೇ ಅಲ್ಲದೆ ಧಾರ್ಮಿಕ ಜನರಿಗೆ ಪುಣ್ಯಕಾರಿ ಪ್ರಯೋಜನವೂ ಹೌದು. ಈ ರೀತಿಯ ಮಹಾಮಸ್ತಕಾಭಿಷೇಕ ಪೂಜೆಯನ್ನು ಪ್ರತಿ ಹನ್ನೆರಡು ವರ್ಷಕ್ಕೆ ಒಮ್ಮೆ ಒಂದು ವಿಶೇಷ ಮುಹೂರ್ತವನ್ನು ನೋಡಿ, ನಡೆಯಿಸುವನಡೆಸುವ ಪರಂಪರೆಯುಂಟು. ಶ್ರವಣಬೆಳ್ಗೊಳದಶ್ರವಣಬೆಳಗೋಳ 1398ರ ಶಿಲಾಲೇಖನದಿಂದ ಪಂಡಿತಾರ್ಯ ಏಳುಸಾರಿ ಮಸ್ತಕಾಭಿಷೇಕ ಮಾಡಿಸಿದ ಸಂಗತಿಗೊತ್ತಾಗುತ್ತದೆ. ಅದರಂತೆ 1500ರಲ್ಲಿ 1612ರಲ್ಲಿಯೂ ಮಸ್ತಕಾಭಿಷೇಕವಾಗಿರಬೇಕು. 1612ರಲ್ಲಿ ಶಾಂತವರ್ಣೀ, 1677ರಲ್ಲಿ ಚಿಕ್ಕದೇವರಾಜ ಒಡೆಯರ ಮಂತ್ರಿಯಾದ ವಿಶಾಲಾಕ್ಷ ಪಂಡಿತ 1825ರಲ್ಲಿ ಮೈಸೂರು ಮಹಾರಾಜರಾದ ಮುಮ್ಮುಡಿ ಕೃಷ್ಣರಾಜ ಒಡೆಯರು ಮಾಡಿಸಿದ ಮಸ್ತಕಾಭಿಷೇಕಗಳ ಉಲ್ಲೇಖ ಉಂಟು. ಇತ್ತೀಚಿಗೆ 1827,1871, 1887, 1909 ಮತ್ತು 1925-(ಅನಂತರ ಸಾಧಾರಣ ಹನ್ನೆರಡು ವರ್ಷಕ್ಕೊಮ್ಮೆ) ಮಸ್ತಕಾಭಿಷೇಕಗಳು ನಡೆಯುತ್ತ ಬಂದಿದೆ. ಈ ಸಮಯದಲ್ಲಿ ಭಾರತದ ಎಲ್ಲ ಭಾಗಗಳಿಂದ ವಿಶೇಷವಾಗಿ ಜೈನ ಯಾಂತ್ರಿಕರು ಶ್ರವಣಬೆಳ್ಗೊಳಕ್ಕೆಶ್ರವಣಬೆಳಗೊಳಕ್ಕೆ ಬರುತ್ತಾರೆ. ಮಸ್ತಕಾಭಿಷೇಕದಿಂದಾಗಿ ಶ್ರವಣಬೆಳಗೊಳ ಜೈನರಿಗೆ ದಕ್ಷಿಣಕಾಶಿಯಾಗಿದೆ.
 
ಶ್ರವಣಬೆಳ್ಗೊಳದ ಶ್ರವಣಬೆಳಗೊಳ ವಿಗ್ರಹದ ಅದ್ವಿತೀಯತೆ, ಸೌಂದರ್ಯ, ಶಿಲ್ಪಸಾಹಸ, ಭವ್ಯತೆ, ಪಾವಿತ್ರ್ಯ ಮತ್ತು ವೀತರಾಗತೆಯನ್ನು ಪಾಶ್ಚಾತ್ಯ ಮತ್ತು ಪೌರಸ್ತ್ಯ ಪ್ರವಾಸಿಗಳು, ವಿದ್ವಾಂಸರು, ಲೇಖಕರು ಮತ್ತು ಕವಿಗಳು ಮುಕ್ತಕಂಠದಿಂದ ಬಣ್ಣಿಸಿದ್ದಾರೆ. 58` ಎತ್ತರವುಳ್ಳ ಈ ಬೃಹನ್ಮೂರ್ತಿಯಲ್ಲಿ ಶಿಲ್ಪಿ ಬಾಹುಬಲಿಯ ರೂಪ ಗುಣ ಸ್ವಭಾವಗಳನ್ನು ಸಹಜವೆಂಬಂತೆ ಹೊಮ್ಮಿಸಿದ್ದಾನೆ. ಆ ಮುಖದಲ್ಲಿ ತೋರುವ ಉದಾತ್ತವಾದ ಮನೋಭಾವ, ಸಂಪೂರ್ಣವಾದ ತ್ಯಾಗ, ಅತೀವ ವೈರಾಗ್ಯ, ಆತ್ಮ ಸಂಯಮಗಳೂ ಕಷ್ಟಕಾರ್ಪಣ್ಯಗಳಲ್ಲಿ ತೊಳಲುತ್ತಿರುವ ಪ್ರಪಂಚದ ಮೇಲಿನ ಮರುಕವನ್ನು ವ್ಯಕ್ತಪಡಿಸುವ ಆ ಕಿರುನಗೆಯೂ ವರ್ಣನಾತೀತವಾಗವೆ. ವಿಸ್ತಾರವಾದ ಆ ಎದೆ, ನೇರವಾದ ಆ ನಿಲುವು, ಯಾವುದಕ್ಕೂ ಹೆದರದ, ಚಕ್ರವರ್ತಿಯನ್ನು ಸೋಲಿಸಿದ ಒಂದು ಕೆಚ್ಚು-ಇವು ಆತ್ಮಾಭಿಮಾನವನ್ನು ಸೂಚಿಸುತ್ತವೆ. ಇಷ್ಟು ಉನ್ನತವಾದ ಮೂರ್ತಿಯಲ್ಲಿ ಇಂಥ ಸೌಂದರ್ಯವೂ ಇಂಥ ಅತಿಶಯವೂ ಮೇಳೈಸಿರುವುದನ್ನು ಬೇರೆಡೆ ಕಾಣುವುದು ಅಸಾಧ್ಯವೆಂದು ಬೊಪ್ಪಣಕವಿ ಹಾಡಿ ಹೊಗಳಿದ್ದಾನೆ.
 
ಶ್ರವಣಬೆಳ್ಗೊಳದ ವಿಗ್ರಹದ ಅದ್ವಿತೀಯತೆ, ಸೌಂದರ್ಯ, ಶಿಲ್ಪಸಾಹಸ, ಭವ್ಯತೆ, ಪಾವಿತ್ರ್ಯ ಮತ್ತು ವೀತರಾಗತೆಯನ್ನು ಪಾಶ್ಚಾತ್ಯ ಮತ್ತು ಪೌರಸ್ತ್ಯ ಪ್ರವಾಸಿಗಳು, ವಿದ್ವಾಂಸರು, ಲೇಖಕರು ಮತ್ತು ಕವಿಗಳು ಮುಕ್ತಕಂಠದಿಂದ ಬಣ್ಣಿಸಿದ್ದಾರೆ. 58` ಎತ್ತರವುಳ್ಳ ಈ ಬೃಹನ್ಮೂರ್ತಿಯಲ್ಲಿ ಶಿಲ್ಪಿ ಬಾಹುಬಲಿಯ ರೂಪ ಗುಣ ಸ್ವಭಾವಗಳನ್ನು ಸಹಜವೆಂಬಂತೆ ಹೊಮ್ಮಿಸಿದ್ದಾನೆ. ಆ ಮುಖದಲ್ಲಿ ತೋರುವ ಉದಾತ್ತವಾದ ಮನೋಭಾವ, ಸಂಪೂರ್ಣವಾದ ತ್ಯಾಗ, ಅತೀವ ವೈರಾಗ್ಯ, ಆತ್ಮ ಸಂಯಮಗಳೂ ಕಷ್ಟಕಾರ್ಪಣ್ಯಗಳಲ್ಲಿ ತೊಳಲುತ್ತಿರುವ ಪ್ರಪಂಚದ ಮೇಲಿನ ಮರುಕವನ್ನು ವ್ಯಕ್ತಪಡಿಸುವ ಆ ಕಿರುನಗೆಯೂ ವರ್ಣನಾತೀತವಾಗವೆ. ವಿಸ್ತಾರವಾದ ಆ ಎದೆ, ನೇರವಾದ ಆ ನಿಲುವು, ಯಾವುದಕ್ಕೂ ಹೆದರದ, ಚಕ್ರವರ್ತಿಯನ್ನು ಸೋಲಿಸಿದ ಒಂದು ಕೆಚ್ಚು-ಇವು ಆತ್ಮಾಭಿಮಾನವನ್ನು ಸೂಚಿಸುತ್ತವೆ. ಇಷ್ಟು ಉನ್ನತವಾದ ಮೂರ್ತಿಯಲ್ಲಿ ಇಂಥ ಸೌಂದರ್ಯವೂ ಇಂಥ ಅತಿಶಯವೂ ಮೇಳೈಸಿರುವುದನ್ನು ಬೇರೆಡೆ ಕಾಣುವುದು ಅಸಾಧ್ಯವೆಂದು ಬೊಪ್ಪಣಕವಿ ಹಾಡಿ ಹೊಗಳಿದ್ದಾನೆ.
==ಇತರೆಡೆಗಳಲ್ಲಿ==
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ಗೊಮ್ಮಟೇಶ್ವರ ಮೂರ್ತಿಗಳಿವೆ. ಕ್ರಿ.ಶ. 1432ರಲ್ಲಿ ವೀರಪಾಂಡ್ಯ [[ಕಾರ್ಕಳ|ಕಾರ್ಕಳದಲ್ಲಿ]] ಪ್ರತಿಷ್ಠಿಸಿದ ಮೂರ್ತಿ 42' ಎತ್ತರವಿದೆ.[[ವೇಣೂರು|ವೇಣೂರಿನಲ್ಲಿ]] ಚಾವುಂಡರಾಯನ ವಂಶಸ್ಥನಾದ ತಿಮ್ಮರಾಜ ಕ್ರಿ.ಶ. 1604ರಲ್ಲಿ 35`ಎತ್ತರವಿರುವ ಇನ್ನೊಂದು ಮೂರ್ತಿಯನ್ನು ನಿಲ್ಲಿಸಿದ.
"https://kn.wikipedia.org/wiki/ಬಾಹುಬಲಿ" ಇಂದ ಪಡೆಯಲ್ಪಟ್ಟಿದೆ