ಈಸ್ಟರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭ ನೇ ಸಾಲು:
 
==ಗುಡ್ ಫ್ರೈಡೆ ==
ಈಸ್ಟರ್ ಹಬ್ಬಕ್ಕೂ ಮುಂಚೆ ಬರುವ ಗುಡ್ ಫ್ರೈಡೆ [[ಯೇಸು ಕ್ರಿಸ್ತ]]ನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರಿಗೂ ಅನ್ವಯಿಸುವಂಥದ್ದು. ಕಾರಣ ಹಿಂದಿನಿಂದಲೂ ಪಾಪಪ್ರಾಯಶ್ಚಿ ತ್ತಕ್ಕಾಗಿ ಒಂದು ಪ್ರಾಣಿಯನ್ನು ಬಲಿ ಕೊಡುವ ಪದ್ಧತಿ ಇಸ್ರೇಲ್ ಜನಾಂಗದಲ್ಲಿ ರೂಢಿಯಲ್ಲಿತ್ತು. ಆದರೆ ಮಾನವನ ಪಾಪಗಳಿಗೆ ಕೇವಲ ಒಂದು ಪ್ರಾಣಿಯ ರಕ್ತ ಮಾತ್ರ ಸಾಲದು. ಅದಕ್ಕೆ ಪರಿಶುದ್ಧವಾದ ರಕ್ತ ಸುರಿಯಬೇಕಿತ್ತು. ಅದೇ ತಂದೆಯಾದ ದೇವರ ಚಿತ್ತವಾಗಿತ್ತು. ಹಾಗೆ ತಂದೆಯ ಚಿತ್ತವನ್ನು ನೆರವೇರಿಸಲೆಂದೇ ದೇವರ ಒಬ್ಬನೇ ಮಗನಾದ ಯೇಸುಕ್ರಿಸ್ತನು ಭೂಮಿಗೆ ಮನುಷ್ಯಕುಮಾರನಾಗಿ ಬಂದನು. ತಂದೆಯಾದ ದೇವರ ಚಿತ್ತವನ್ನು ನೆರವೇರಿಸಲೆಂದೇ ತನ್ನ ಪರಿಶುದ್ಧವಾದ ರಕ್ತವನ್ನು ಕಲ್ವಾರಿ ಶಿಲುಬೆಯಲ್ಲಿ ಸುರಿಸಿ ತನ್ನನ್ನು ಮರಣಕ್ಕೆ ಒಪ್ಪಿಸಿದನು. ಅಂದು ನಡೆದ ಈ ಕಾರ್ಯದಿಂದ ಮನು‍ಷ್ಯ ಪಾಪದಿಂದ ವಿಮೋಚನೆ ಹೊಂದಿದ್ದಾನೆ. ಅಂದರೆ ಯಾರಾರುಯಾರ್ಯಾರು ಯೇಸು ಮಾಡಿದ ಈ ವಿಶೇಷ ಕಾರ್ಯವನ್ನು ನಂಬುತ್ತಾರೋ ಅವರೆಲ್ಲರೂ ಪಾಪಗಳಿಂದ ವಿಮೋಚಿಸಲ್ಪಟ್ಟು ದೇವರಿಗೆ ಮಕ್ಕಳಾಗುವ ಅಧಿಕಾರವನ್ನು ಯೇಸುಕ್ರಿಸ್ತನು ಕೊಟ್ಟಿದ್ದಾನೆ. ನಿಜವಾಗಿ ಆತನು ಶಿಲುಬೆಗೆ ಏರಿಸಲ್ಪಟ್ಟಿದ್ದರಿಂದಲೇ ಮನುಷ್ಯರ ಪಾಪವಿಮೋಚನೆಯಾಯಿತು. ಆದ್ದರಿಂದಲೇ ಈ ದಿನವನ್ನು ಗುಡ್ ಫ್ರೈಡೆ (ಶುಭ ಶುಕ್ರವಾರ) ಎನ್ನಲಾಗಿದೆ.
 
==ಈಸ್ಟರ್ ಹಬ್ಬದ ವಿಶೇಷತೆ==
ತಂದೆಯಾದ ದೇವರ ಒಬ್ಬನೇ ಮಗನಾದ ಯೇಸು ಕ್ರಿಸ್ತನು ಮನುಷ್ಯರೊಂದಿಗೆ ಸದಾ ಕಾಲ ಜೀವಿಸುವುದಕ್ಕಾಗಿ ಪುನರುತ್ಥಾನ ಹೊಂದಿ ಬಂದ ದಿನವಾಗಿದೆ.
"https://kn.wikipedia.org/wiki/ಈಸ್ಟರ್" ಇಂದ ಪಡೆಯಲ್ಪಟ್ಟಿದೆ