ಭದ್ರಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೯೨ ನೇ ಸಾಲು:
== ಚರಿತ್ರೆ ==
[[ಚಿತ್ರ:Lakshmi Narasimha Temple Bhadravathi.jpg|262px|thumb|right|ಭದ್ರಾವತಿಯಲ್ಲಿರುವ ೧೩ನೇ ಶತಮಾನದ ಲಕ್ಷ್ಮೀನರಸಿಂಹ ದೇವಾಲಯದ ಎಡಗೋಪುರ]]
ಭದ್ರಾವತಿಯ ಹೆಸರು ಅದರ ಮೂಲಕ ಹರಿಯುವ [[ಭದ್ರಾ]] ನದಿಯಿಂದ ಉತ್ಪನ್ನವಾಗಿದೆ. ಹಿಂದೆ ಬೆಂಕಿಪುರ (ಅಥವಾ ವಂಕಿಪುರ/ವೆಂಕಿಪುರ) ಎಂದು ಕರೆಯಲ್ಪಟ್ಟಿತ್ತು. ಇಪ್ಪತ್ತನೆಯ ಶತಮಾನದ ಆದಿಭಾಗದಲ್ಲಿ [[ಸರ್ ಎಂ. ವಿಶ್ವೇಶ್ವರಾಯವಿಶ್ವೇಶ್ವರಯ್ಯ]]ನವರು ಇಲ್ಲಿ ಕಬ್ಬಿಣದ ಕಾರ್ಖಾನೆಯನ್ನು ಸ್ಥಾಪಿಸಿದ ಮೇಲೆ ಭದ್ರಾವತಿ ಎಂಬ ಈ ಹೊಸ ಹೆಸರು ಈ ಊರಿಗೆ ಬಂದಿತೆಂದು ಹೇಳಲಾಗುತ್ತದೆ. ಹತ್ತೊಂಬತ್ತನೆಯ ಶತಮಾನದ ಕೊನೆಯವರೆಗೂ ಈ ಊರಿಗೆ ಬೆಂಕಿಪುರವೆಂದು ಕರೆಯುತ್ತಿದ್ದರು. ಈ ಬೆಂಕಿಪುರವೆಂಬ ಹೆಸರಿಗೂ ಬೆಂಕಿಗೂ ಯಾವ ಸಂಬಂಧವೂ ಇಲ್ಲ. ಈ ಬೆಂಕಿಪುರ ಎಂಬ ಪದವು ವಂಕೀಪುರ ಎನ್ನುವ ಹೆಸರಿ ಅಪಭ್ರಂಶವಷ್ಟೆ. ಚಿಕ್ಕಮಗಳೂರು ಜಿಲ್ಲೆಯ [[ಕುದುರೆಮುಖ]]ದ ಬಳಿ [[ಸಹ್ಯಾದ್ರಿ]]ಯ ಒಡಲಲ್ಲಿ ತನ್ನ ಉಗಮಸ್ಥಾನ ಹೊಂದಿರುವ ಭದ್ರಾನದಿಯು ಉತ್ತರಾಭಿಮುಖವಾಗಿ ಹರಿದು ಭದ್ರಾವತಿ ನಗರವನ್ನು ದಕ್ಷಿಣ ದಿಕ್ಕಿನಿಂದ ಪ್ರವೇಶಿಸುತ್ತದೆ. ಹೀಗೆ ಪ್ರವೇಶಿಸುವಾಗ, ಉತ್ತರ ದಿಕ್ಕಿನಿಂದ ಪಶ್ಚಿಮ ದಿಕ್ಕಿಗೆ ಎಡಕ್ಕೆ ತಿರುಗಿ ಪಶ್ಚಿಮ ವಾಹಿನಿಯಾಗುತದೆ. ಉತ್ತರ ದಿಕ್ಕಿನಿಂದ ಪಶ್ಛಿಮ ದಿಕ್ಕಿಗೆ ತಿರುಗುವ ಈ ತಿರುವಿಗೆ ಚಕ್ರತೀರ್ಥ ಎನ್ನುತ್ತಾರೆ. ಈ ಚಕ್ರತೀರ್ಥದ ಬಳಿ ಪುರಾಣ ಪ್ರಸಿದ್ಧ ವಂಕೀ ಮಹರ್ಷಿಗಳ ಆಶ್ರಮವಿತ್ತಂತೆ. ಈ ವಂಕೀ ಮಹರ್ಷಿಗಳು ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯನ್ನು ಕುರಿತು ತಪಸ್ಸನ್ನಾಚರಿಸುತ್ತಾರೆ. ಸ್ವಾಮಿಯು ಈ ಋಷಿಗಳಿಗೆ ದರ್ಶನವಿತ್ತು, "ಪಶ್ಚಿಮವಾಹಿನಿಯಾದ ಭದ್ರೆಯ ಯಾವ ಪವಿತ್ರ ಕ್ಷೇತ್ರದಲ್ಲಿ ನೀನು ತಪವನ್ನಾಚರಿಸಿದೆಯೋ ಆ ಕ್ಷೇತ್ರದಲ್ಲಿ ನಾನು ಸ್ಥಿರವಾಗಿ ನೆಲೆಸಿ ಭಕ್ತರ ಅಭೀಷ್ಟೆಗಳನ್ನು ಈಡೇರಿಸುವನು" ಎಂದು ಹೇಳಿದನೆಂದು ಪ್ರತೀತಿ. ಮುಂದೆ ಹದಿಮೂರನೇ ಶತಮಾನದಲ್ಲಿ [[ಹೊಯ್ಸಳ]]ರ ವೀರನಸಿಂಹನು ([[ವಿಷ್ಣುವರ್ಧನ]]ನ ಮೊಮ್ಮಗ ಮತ್ತು ಎರಡನೇ ಬಲ್ಲಾಳನ ಮಗ) ವಂಕೀ ಮಹರ್ಷಿ ಮತ್ತು ಲಕ್ಷ್ಮೀನರಸಿಂಹ ಸ್ಥಳ ಪುರಾಣವಿದ್ದ ಈ ಪ್ರದೇಶದಲ್ಲಿ ಭವ್ಯವಾದ ಲಕ್ಷ್ಮೀನರಸಿಂಹ ದೇವಾಲಯವನ್ನು [[ಹೊಯ್ಸಳ]] ಶಿಲ್ಪಕಲಾ ಮಾದರಿಯಲ್ಲಿ ಕಟ್ಟಿಸಿ ಕ್ರಿ.ಶ. ೧೨೨೪ ನೇ ಇಸವಿಯ ವ್ಯಯನಾಮ ಸಂವತ್ಸರದ ದ್ವಿತೀಯ ಶುದ್ಧ ತ್ರಯೋದಶಿಯಂದು ಲೋಕಾರ್ಪಣೆ ಮಾಡಿದನು. ಇಂದಿಗೂ ಈ ದೇವಾಲಯ ಭದ್ರಾವತಿಯ ಹಳೇನಗರದಲ್ಲಿದ್ದು [[ಭಾರತೀಯ ಪುರಾತತ್ವ ಇಲಾಖೆ]]ಯ ವ್ಯಾಪ್ತಿಯಲ್ಲಿ ಐತಿಹಾಸಿಕ ಸ್ಮಾರಕವೆಂದು ಘೋಷಿಸಲ್ಪಟ್ಟಿದೆ. ಈ ಊರಿಗೆ ವಂಕೀಪುರ ಎಂಬ ಹೆಸರು ಇತ್ತೆಂಬುದಕ್ಕೆ ಇಂಬು ಕೊಡುವಂತೆ, ಶ್ರೀಲಕ್ಷ್ಮೀನರಸಿಂಹನ ಬಗ್ಗೆ ಒಂದು ಶ್ಲೋಕವಿದೆ. ಅದೆಂದರೆ "ಮಂಗಲಂ ಸ್ತಂಭ ಡಿಂಭಾಯ, ಮಂಗಲಂ ಮೃತ್ಯು ಮೃತ್ಯವೇ, ವಂಕೀಪುರ ನಿವಾಸಾಯ, ನರಸಿಂಹಾಯ ಮಂಗಲಂ" ಎಂದು. ಈ ಶ್ಲೋಕವನ್ನು ಇಂದಿಗೂ ದೇವಾಲಯ ದ್ವಾರದಲ್ಲಿ ಕಾಣಬಹುದು. ಹದಿನಾಲ್ಕನೇ ಶತಮಾನದಿಂದೀಚೆಗೆ ಈ ಊರಿಗೆ ಲಕ್ಷ್ಮೀಪುರ, ಲಕ್ಷ್ಮೀನರಸಿಂಹಪುರ, ಭದ್ರಾಪುರ ಇನ್ನೂ ಮುಂತಾದ ಹೆಸರುಗಳಿದ್ದವೆಂಬುದಕ್ಕೆ ಸಾಕಷ್ಟು ಪುರಾವೆಗಳಿವೆ. ಇಷ್ಟೆಲ್ಲಾ ಹೆಸರುಗಳಿದ್ದೂ ವಂಕೀಪುರವೆಂಬ ಹೆಸರೇ ರೂಢಿಯಲ್ಲಿ ಉಳಿದುಕೊಂಡು ಕಾಲಕ್ರಮೇಣ ಜನರ ಬಾಯಲ್ಲಿ ಅದು ಬೆಂಕಿಪುರವಾದದ್ದು, ತದನಂತರ [[ನಾಲ್ವಡಿ ಕೃಷ್ಣರಾಜ ಒಡೆಯರ್]] ಆಳ್ವಿಕೆಯ ಕಾಲದಲ್ಲಿ ಭದ್ರಾವತಿ ಎಂದು ಮರುನಾಮಕರಣಗೊಂಡಿತು.
 
== ಭೌಗೋಳಿಕ ==
"https://kn.wikipedia.org/wiki/ಭದ್ರಾವತಿ" ಇಂದ ಪಡೆಯಲ್ಪಟ್ಟಿದೆ