ಉಮಾಶ್ರೀ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
ಚುNo edit summary
೧೪ ನೇ ಸಾಲು:
'''ಉಮಾಶ್ರೀ''' ([[ಮೇ ೧೦]], [[೧೯೫೭]]) ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಆಕೆ ತನ್ನ ಕಂಗಳಲ್ಲೇ ತುಂಬಿ ಕೊಡುವ ನಟನೆಯ ಪೂರ್ಣತ್ವ ಅಪ್ರತಿಮವಾದದ್ದು.
==ಜೀವನ==
ಉಮಾಶ್ರೀ ಅವರು ಮೇ ೧೦, ೧೯೫೭ರಂದು ತುಮಕೂರು ಜಿಲ್ಲೆಯ [[ನೊಣವಿನಕೆರೆ]] ಗ್ರಾಮದಲ್ಲಿ ಜನಿಸಿದರು. ಅವರ ಜೀವನ ಬಡತನದ ಬವಣೆಯಲ್ಲಿ ಮೂಡಿ ಬಂದದ್ದು. “ನಾನು ನಾಟಕಕ್ಕೆ ಸೇರಿದ್ದೇ ತಿನ್ನಲು ಚಿತ್ರಾನ್ನ ಸಿಗುತ್ತದೆ” ಎಂದು ಅವರು ತಮ್ಮ ಒಂದು ಸಂದರ್ಶನದಲ್ಲಿ ಹೇಳಿದ್ದಾರೆ. ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ಕಷ್ಟಪಟ್ಟು ದುಡಿದು ತಮ್ಮಿಬ್ಬರು ಮಕ್ಕಳನ್ನು ಉತ್ತಮ ವಿದ್ಯಾವಂತರಾಗಿಸಿರುವ ಉಮಾಶ್ರೀ ತಮ್ಮ ಬದುಕಿನ ಜವಾಬ್ಧಾರಿಗಳನ್ನು ಕೂಡಾ ಸಮರ್ಥವಾಗಿ ಪೂರೈಸಿದ್ದಾರೆ.
==ರಂಗಭೂಮಿಯಲ್ಲಿ==
ವೃತ್ತಿ ರಂಗಭೂಮಿಯಲ್ಲಿ ಹಲವಾರು ಐತಿಹಾಸಿಕ, ಪೌರಾಣಿಕ ಪಾತ್ರಗಳನ್ನು ನಿರ್ವಹಿಸಿ, ಹವ್ಯಾಸಿ ರಂಗಭೂಮಿಯಲ್ಲಿ ಬಿ.ವಿ. ಕಾರಂತ್, ನಾಗಾಭರಣ, ಕೃಷ್ಣಸ್ವಾಮಿ ಅವರುಗಳ ನಿರ್ದೇಶನದಲ್ಲಿ ಅನೇಕ ನಾಟಕಗಳಲ್ಲಿ ಅಭಿನಯಿಸಿದಾಕೆ ಉಮಾಶ್ರೀ. ಅವರ ಒಡಲಾಳ ನಾಟಕದ ಸಾಕವ್ವನ ಅಭಿನಯ ಅಂದಿನ ದಿನಗಳಲ್ಲಿ ಅತ್ಯಂತ ಜನಪ್ರಿಯವಾಗಿತ್ತು.
"https://kn.wikipedia.org/wiki/ಉಮಾಶ್ರೀ" ಇಂದ ಪಡೆಯಲ್ಪಟ್ಟಿದೆ