ಉಷ್ಣತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೫ ನೇ ಸಾಲು:
ಇದಕ್ಕೂ ಮೊದಲು ೧೮೩೦ ಸುಮಾರಿನಲ್ಲಿ Claude pouillet ಎಂಬಾತ Pyrheliometer ಎಂಬ ಉಪಕರಣವನ್ನು ತಯಾರಿಸಿದ್ದನು ವಿಕಿರಣದ ಬಗ್ಗೆ ಸೈದ್ಧಾಂತಿಕ ಚೌಕಟ್ಟು ಸಿದ್ಧವಾಗುವುದಕ್ಕೆ ಮೊದಲೇ ಆತ ಆ ಉಪಕರಣವನ್ನು ಬಳಸಿ ಸೂರ್ಯನಿಂದ ಭೂಮಿಯನ್ನು ತಲಪುವ ಉಷ್ಣಕಿರಣಗಳನ್ನು ಅಳೆದು ಸೂರ್ಯನ ಮೇಲ್ಮೈ ತಾಪ ಸುಮಾರು ೧೮೦೦ ಡಿಗ್ರಿ ಸೆಲ್ಸಿಯಸ್ ಎಂದು ಲೆಕ್ಕಹಾಕಿದ್ದನು ಅನಂತರ ಮತ್ತೆ ಕೆಲವರು ಅದನ್ನು ಒಂದು ಸಾವಿರದಿಂದ ಹತ್ತು ಸಾವಿರ ಡಿಗ್ರಿ ಸೆಲ್ಸಿಯಸ್ ಎಂದು ಅಂದಾಜು ಮಾಡಿದ್ದರು . ಕೊನೆಗೆ Josef stefan ನು ಹಿಂದಿನ ಅನೇಕ ಪ್ರಯೋಗಗಳಿಂದ ದೊರೆತ ಮಾಹಿತಿ ಮತ್ತು ತನ್ನದೇ ಸೂತ್ರದ ಆಧಾರದ ಮೇಲೆ ಸೂರ್ಯನ ಮೇಲ್ಮೈ ತಾಪ ಸುಮಾರು ೬೦೦೦ ಡಿಗ್ರಿ ಸೆಲ್ಸಿಯಸ್ ಎಂದು ನಿಖರವಾ ಗಿ ಲೆಕ್ಕಹಾಕಿದನು.
ವಿಜ್ಞಾನ ಇತಿಹಾಸದ ದೃಷ್ಟಿಯಲ್ಲಿ ಇದನ್ನು ಒಂದು ಮಹತ್ವದ ಮೈಲಿಗಲ್ಲೆಂದು ಮೆಚ್ಚಲೇ ಬೇಕು ಏಕೆಂದರೆ , ಮನುಷ್ಯ ಭೂಮಿಯಮೇಲಿದ್ದೇ ಕೋಟ್ಯಂತರ ಮೈಲಿ ದೂರದಲ್ಲಿರುವ , ಅಷ್ಟೊಂದು ಬಿಸಿ ಇರುವ ಸೂರ್ಯನ ಮೇಲ್ಮೈ ತಾಪವನ್ನು ಅಳೆಯಲು ಸಾಧ್ಯವಾಯಿತು.
ಹತ್ತೊಂಬತ್ತನೇ ಶತಮಾನದ ಮೊದಲ ದಶಕದ ವೇಳೆಗೆ ಕ್ಯಾಲೋರಿಫಿಕ್ ಕಿರಣಗಳೂ ಮತ್ತು[[ಬೆಳಕು]] ಮೂಲತಃ ಒಂದೇ ಬಗೆ (ವಿದ್ಯು ತ್ಕಾಂತ್ತಿಯ ಅಲೆಗಳು ) ಎಂದು ಭೌತವಿಜ್ಞಾನಿಗಳು ಅರ್ಥಮಾಡಿಕೊಂಡು ವಿಶ್ವದಲ್ಲಿ ಸರ್ವವ್ಯಾಪಿಯಾದ ಈಥರ್ ಎಂಬ ಮಾಧ್ಯಮದ ಮೂಲಕ ಕಂಪನ ರೂಪದಲ್ಲಿ ಅವು ಪ್ರಸರಿಸುತವೆ ಎಂದು ಚಿತ್ರಿಸಿಕೊಂಡಿದ್ದರು. ಉಷ್ಣ ಕಿರಣ ಮತ್ತು ಬೆಳಕಿನ ಕಿರಣ ಇವುಗಳ ನಡುವಿನ ವ್ಯತ್ಯಾಸ ಕೇವಲ ಅವುಗಳ ತರಂಗಾಂತರದಲ್ಲಿ (Wave length) ಎಂಬುದು ಹತ್ತೋಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಮಾತ್ರವೇ ಸ್ಪಷ್ಟವಾಯಿತು. ಉಷ್ಣಕಿರಣಗಳ ತರಂಗಾಂತರ ಬೆಳಕಿನ ತರಂಗಾಂತರಗಳಿಗಿಂತ ದೀರ್ಘ. ಇದರಿಂದ ನಮಗೆ ತಿಳಿದುಬರುವುದೇನೆಂದರೆತಿಳಿದುಬನೆಂದರೆ ನಮ್ಮ ಇಂದ್ರಿಯಗಳು ವಿದ್ಯುತ್ ಕಾಂತೀಯ ತರಂಗಗಳಿಗೆ ಅವುಗಳ ತರಂಗಾಂತರಗಳಿಗೆ ಅನುಗುಣವಾಗಿ ಸ್ಪಂದಿಸುತ್ತವೆ ಎಂಬುದು.
 
===ಉಷ್ಣ ಹರಿಯುವ ದಿಕ್ಕು===
ಅಧಿಕ ತಾಪದ ಕಾಯದಿಂದ ಕಡಿಮೆ ತಾಪದ ಕಾಯಕ್ಕೆ ಉಷ್ಣ ಹರಿಯುತ್ತದೆ.
"https://kn.wikipedia.org/wiki/ಉಷ್ಣತೆ" ಇಂದ ಪಡೆಯಲ್ಪಟ್ಟಿದೆ