ಗಂಡಬೇರುಂಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೫ ನೇ ಸಾಲು:
ಋಗ್ವೇದದಲ್ಲಿ ಬರುವ ಎರಡು ಹಕ್ಕಿಗಳು, ವಿಷ್ಣುವಿನ ವಾಹನವಾದ ಗರುಡ ಇವುಗಳಿಂದ ಗಂಡಭೇರುಂಡ ಪಕ್ಷಿ ವಿಕಾಸಗೊಂಡಿರ ಬಹುದೆಂದು ಊಹಿಸಲಾಗಿದೆ.ಅಲ್ಲದೆ ವಿಷ್ಣು ನರಸಿಂಹಾವತಾರವನ್ನೆತ್ತಿ ಹಿರಣ್ಯಕಶಪುವನ್ನು ಸಂಹಾರ ಮಾಡಿದ ಮೇಲೂ ಅವನ ಕೋಪ ತಣ್ಣಗಾಗಲಿಲ್ಲವಂತೆ. ಅವನಿಂದ ಇಡೀ ವಿಶ್ವವೇ ನಾಶವಾದಿತೆಂದು ಅಂಜಿ ದೇವತೆಗಳು ಶಿವನನ್ನು ಪ್ರಾರ್ಥಿಸಿದಾಗ ಶಿವ ಶರಭಾವತಾರ ಎತ್ತಿ ನರಸಿಂಹನನ್ನು ಎದುರಿಸಿದ,ಆಗ ವಿಷ್ಣು ಶರಭನನ್ನು ಅಡಗಿಸಲು ಗಂಡಭೇರುಂಡ ಪಕ್ಷಿಯಾದನು ಎಂಬ ಕಥೆ ಕೆಲವು ಜನ ಮಾನಸದಲ್ಲಿದೆ.ಆದರೆ ಇದು ಬರೀ ಊಹಾಪೋಹ.ಸರಿಯಾದ ಅಧಾರವಿಲ್ಲದ್ದು.ಕಾಲ್ಪನಿಕ ಕಥೆಯಾಗಿದ್ದು ಯಾವ ಪೌರಾಣಿಕ ಆಧಾರಗಳೂ ಇದಕ್ಕಿಲ್ಲ.ವೇದ,ಪುರಾಣ,ಹಾಗೂ ಇನ್ಯಾವ ಹಿಂದೂ ಗ್ರಂಥಗಳಲ್ಲೂ ಇದು ಉಲ್ಲೇಖಿತವಾಗಿಲ್ಲ.
 
===ಇತಿಹಾಸದಲ್ಲಿ ಗಂಡಭೇರುಂಡ ಪಕ್ಷಿ===
ಕರ್ನಾಟಕದಲ್ಲಿ ಗಂಡಭೇರುಂಡವನ್ನು ಲಾಂಛನವಾಗಿ ಬಳಸಲು ಆರಂಭವಾದ್ದು ೧೩ನೇ ಶತಮಾನದ ಉತ್ತರಾರ್ಧದಲ್ಲಿ. ಹೊಯ್ಸಳ ಅರಸ ೩ನೇ ನರಸಿಂಹ(೧೨೫೩-೧೨೯೩), ಮತ್ತು ೩ನೇ ಬಲ್ಲಾಳ(೧೨೯೩-೧೩೪೨) ಇವರ ಕಾಲದಲ್ಲಿ ಕೆಲವು ಶಿಲಾಶಾಸನಗಳ ಮೇಲೆ ಗಂಡಭೇರುಂಡ ಚಿತ್ರವಿದೆ. ವಿಜಯನಗರದ ಸಾಮ್ರಾಟನಾಗಿದ್ದ [[ಅಚ್ಯುತರಾಯ]] (೧೫೩೦-೧೫೪೨)ನ ಚಿನ್ನ ಮತ್ತು ತಾಮ್ರದ ನಾಣ್ಯಗಳ ಮೇಲೆ ಗಂಡಭೇರುಂಡದ ಮುದ್ರೆಯಿದೆ. ಇದರಲ್ಲಿ ಸೊಂಡಿಲು ಬಾಲವನ್ನೆತ್ತಿಕೊಂಡಿರುವ ಭಯಗ್ರಸ್ತವಾದ ಆನೆಗಳನ್ನು ಆ ಪಕ್ಷಿ ತನ್ನೆರಡು ಕಾಲುಗಳಲ್ಲಿ ಸಿಕ್ಕಿಸಿ ಕೊಂಡಿದೆ. ನಂತರ ಮಧುರೆಯ ನಾಯಕರು, ಕೆಳದಿಯ ಅರಸರು ಗಂಡಭೇರುಂಡವನ್ನು ಲಾಂಛನವಾಗಿ ಬಳಸಿದರು. ಮೈಸೂರು ಒಡೆಯರು ವಿಜಯನಗರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಾಗ ತಮ್ಮ ಧ್ವಜದ ಮೇಲೆ ಗಂಡಭೇರುಂಡವನ್ನು ಪ್ರತಿಷ್ಠಾಪಿಸಿಕೊಂಡರು. ಅಂದಿನಿಂದ ಇಂದಿನವರೆವಿಗೂ ಇದು ಮೈಸೂರು ಒಡೆಯರ ಲಾಂಛನವಾಗಿ ಉಳಿದು ಬೆಳೆದು ಬಂದಿದೆ.
 
"https://kn.wikipedia.org/wiki/ಗಂಡಬೇರುಂಡ" ಇಂದ ಪಡೆಯಲ್ಪಟ್ಟಿದೆ