ಬಿ.ಆರ್.ಪಂತುಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು fixing infobox image using AWB
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೦ ನೇ ಸಾಲು:
==ಜೀವನ==
ಬಡಗೂರು ರಾಮಕೃಷ್ಣ ಪಂತುಲು ಅವರು ಜನಿಸಿದ್ದು [[೧೯೧೧]] [[ಜುಲೈ ೨೮]]ರಂದು [[ಕರ್ನಾಟಕ]]-[[ಆಂಧ್ರಪ್ರದೇಶ|ಆಂಧ್ರಪ್ರದೇಶದ]] ಗಡಿಯಲ್ಲಿನ ಬಂಗಾರ ಪೇಟೆಯ ಬಳಿ ಇರುವ ಕುಪ್ಪಂನಿಂದ ಹನ್ನೊಂದು ಕಿಲೋಮೀಟರ್ ದೂರದ ಕುಗ್ರಾಮ ಬಡಗೂರಿನಲ್ಲಿ.
ಗಡಿ ಪ್ರದೇಶದಲ್ಲಿರುವ ಈ ಊರಿನಲ್ಲಿ ಕನ್ನಡದಂತೆ ತೆಲುಗು,ತಮಿಳು ಕೂಡ ಮುಖ್ಯ ಭಾಷೆಗಳಾಗಿದ್ದವು.ಬಾಲ್ಯದಿಂದಲೀ ಪಂತುಲು ಅವರಿಗೆ ಮೂರು ಭಾಷೆಗಳ ಒಡನಾಟ ಬರಲು ಕಾರಣವಾಯಿತು.ಪಂತುಲು ಅವರ ತಂದೆ ವೆಂಕಟಾಚಲಯ್ಯನವರಿಗೆ ಕಿರಿಯವರಾದ ಪಂತುಲು ಸೇರಿದಂತೆ ಐವರು ಮಕ್ಕಳು,ಮೂರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು.ಪಂತುಲು ಅವರ ತಂದೆ ಸಂಗೀತ,ಸಾಹಿತ್ಯ ಮತ್ತು ನೃತ್ಯಗಳಲ್ಲಿ ಉತ್ತಮ ಅಭಿರುಚಿ ಪಡೆದಿದ್ದರು.ಆಗಾಗ ಊರಿನಲ್ಲಿ ನಾಟಕಗಳನ್ನು ಆಡಿಸುತಿದ್ದರು.ತಂದೆಯ ಜೊತೆ ಮಗನೂ ಆಗಾಗ ರಂಗ ತರಬೇತಿ ನೋಡಲು ಹೋಗುತ್ತಿದ್ದನು.ಚಂದ್ರಹಾಸನ ಪಾತ್ರ ನೀಡುವ ಮೂಲಕ ತಂದೆಯೇ ಆತನ ರಂಗ ಪ್ರವೇಶಕ್ಕೆ ಕಾರಣಕರ್ತರಾದರು.ರಾಮಕೃಷ್ಣರ ಪ್ರಾಥಮಿಕ ಶಿಕ್ಷಣ ಬಡಗೂರಿನಲ್ಲಿಯೇ ನಡೆದರೂ ಮುಂದಿನ ಶಿಕ್ಷಣಕ್ಕೆ ಅಲ್ಲಿ ಅವಕಾಶ ಇರದ ಕಾರಣ ತಾತನ ಮನೆಯಾದ ಕೊಲಾರದಲ್ಲಿದ್ದುಕೋಲಾರದಲ್ಲಿದ್ದು ಎಸ್.ಎಸ್.ಎಲ್,.ಸಿ.ವರೆಗಿನ ಶಿಕ್ಷಣ ಪಡೆದರು.ಶಾಲಾ ಜೀವನದಲ್ಲಿಯೂ ಅವರು ನಾಟಕದ ಅಭಿನಯದಲ್ಲಿ ಪ್ರಸಿದ್ದಿ ಪಡೆದಿದ್ದರು. ಪಂತುಲು ಮುಂದೆ ಪ್ರಾಥಮಿಕ ಶಿಕ್ಷಕರಾಗಿ ನೇಮಕಗೊಂಡರು.ಕಲಾವಿದರಾದ ಅವರು ಶಾಲೆಯಲ್ಲಿ ಪಾಠ ಮಾಡಿದ್ದಕ್ಕಿಂತ ಮಕ್ಕಳಿಗೆ ನಾಟಕ ಕಲಿಸಿದ್ದೆ ಹೆಚ್ಹುಹೆಚ್ಚು.ಒಂದುದಿನ ಮಕ್ಕಳಿಗೆ ನಾಟಕ ಕಲಿಸುತ್ತುರುವಾಗಕಲಿಸುತ್ತಿರುವಾಗ ವಿದ್ಯಾ ಇಲಾಖೆಯ ಇನ್ಸ್ಪೆಕ್ಟರ್ ಬಂದು ಪಾಠ ಮಾಡುವ ಬದಲು ಮಕ್ಕಳಿಗಾಗಿ ನಾಟಕ ಕಲಿಸುತ್ತಿದ್ದ ಪಂತುಲು ಅವರನ್ನು ಕಂಡು ಕೆಂಡಾಮಂಡಲವಾದರು.ಇದು ಸರಿಯಲ್ಲವೆಂದೂ ಇನ್ನೊಮ್ಮೆ ಹೀಗಾದರೆ ವಜಾಮಾಡುವೆನೆಂದು ನೋಟೀಸ್ ಜಾರಿ ಮಾಡಿದರು.ಇದರಿಂದ ನೊಂದ ಪಂತುಲು ಶಿಕ್ಷಕ ವ್ರತ್ತಿಗೆವೃತ್ತಿಗೆ ರಾಜೀನಾಮೆ ನೀಡಿ ಕಲೆಯಲ್ಲಿಯೇ ಬದುಕುಕನ್ನು ಅರಸುತ್ತ ಬೆಂಗಳೂರಿಗೆ ಬಂದು ಅವರ ಹಿರಿಯರಾದ ಪಾಪಯ್ಯನವರಿದ್ದ ಮಹಮ್ಮದ್ ಪೀರ್ ಅವರ "ಚಂದ್ರ ಕಲಾ"ನಾಟಕ ಮಂಡಳಿಗೆ ಸೇರಿದರು.ಮುಂದೆ ಇವರಿಗೆ [[ಹೆಚ್ ಎಲ್ ಎನ್ ಸಿಂಹ]] ಮತ್ತು [[ಮಹಮದ್ ಪೀರ್]] ಗೆಳೆತನ ಬಣ್ಣದಲೋಕದ ನಂಟನ್ನು ತಂದಿತು.ಪಂತುಲು ಅವರ ಮಗ ರವಿಶಂಕರ್ ಕೆಲ ಕಾಲ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದರು,ಮಗಳು ಬಿ.ಆರ್.ವಿಜಯಲಕ್ಷ್ಮಿ ಛಾಯಾಗ್ರಾಹಕಿಯಾಗಿ ಹೆಸರು ಮಾಡಿದ್ದರು.
 
==ಚಿತ್ರರಂಗ==
"https://kn.wikipedia.org/wiki/ಬಿ.ಆರ್.ಪಂತುಲು" ಇಂದ ಪಡೆಯಲ್ಪಟ್ಟಿದೆ