ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Reverted 2 edits by 2401:4900:2180:DB30:1:2:B56A:85B0 (talk) to last revision by 2409:4071:228B:F53D:0:0:2558:18A0 (TwinkleGlobal)
ಟ್ಯಾಗ್: ರದ್ದುಗೊಳಿಸಿ
೧ ನೇ ಸಾಲು:
 
{{Infobox vachanakaara
| name = ಅಕ್ಕಮಹಾದೇವಿ
| image = ಚಿತ್ರ:Akka_mahaadevi.jpg|thumb|right|ಶಿವಶರಣೆ ಶ್ರೀ ಅಕ್ಕಮಹಾದೇವಿ
| caption =
| birth_name =
| birth_date = ಹನ್ನೆರಡನೆಯ ಶತಮಾನ
| birth_place = ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ/ಉಡುಗಣಿ
| death_place = ಶ್ರೀಶೈಲದ ಕದಳಿ
| ankita = ಚೆನ್ನಮಲ್ಲಿಕಾರ್ಜುನ
| occupation =
| networth =
| spouse =
| children =
| residence =
| parents = ನಿರ್ಮಲಶೆಟ್ಟಿ ಮತ್ತು ಸುಮತಿ
| known_for = ಯೋಗಾಂಗ ತ್ರಿವಿಧಿ, ಸೃಷ್ಟಿಯ ವಚನ ಮಂತ್ರಗೋಪ್ಯ ಮತ್ತು ಇತರೆ ವಚನಗಳು
}}
[[File:Akkamahadevi Udathadi1.JPG|250px|thumb|right|An [[murti]] of Akka Mahadevi consecrated in temple at her birthplace, [[Udathadi]]]]
[[File:Akkamahadevi Udathadi.JPG|250px|thumb|right|A statue of Akka installed at her birthplace, Udathadi]]
 
'''[[ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ|ಅಕ್ಕಮಹಾದೇವಿ]]'''<ref>https://sagarworld.com/blog/akka-mahadevi/</ref> ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ '''ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ.
ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.
 
==ಜೀವನ==
*ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ <ref>{{cite book | title=ಸಮಗ್ರ ವಚನ ಸಂಪುಟ | publisher=ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಕರ್ನಾಟಕ ಸರ್ಕಾರ}}</ref> . ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.
*ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿ ಯಾಗಿದ್ದು ಸಿರಿಗೆರೆಯ ಶ್ರೀಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇ ಜಂಬೂರಿನ ಸ್ವಾತಂತ್ರ ಹೋರಾಟೀಲರು. ಇದನ್ನು ಇವರು ಉಳಿಸಿ ಕೊಟ್ಟ ನಂತರ ಸರಕಾರ ಇತ್ತ ಗಮನ ಹರಿಸಿ,ಅದರ ಅಭಿವೃದ್ದಿಗೆ ಮುಂದಾಗಿದೆ.
*ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ ಅನುಭವ ಮಂಟಪದಲ್ಲಿ [[ಅಲ್ಲಮ ಪ್ರಭು|ಅಲ್ಲಮಪ್ರಭು]], [[ಬಸವೇಶ್ವರ|ಬಸವಣ್ಣ]], [[ಚನ್ನಬಸವೇಶ್ವರ|ಚೆನ್ನಬಸವಣ್ಣ]], [[ಸಿದ್ಧರಾಮ]] ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡರಲ್ಲದೇ, "ಚನ್ನಮಲ್ಲಿಕಾರ್ಜುನ" ಎಂಬ ಅಂಕಿತ ನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.
 
== '''ಅಕ್ಕನ ಅನುಭಾವ ಜೀವನ''' ==
ಅಕ್ಕಮಹಾದೇವಿ ಶರಣ ಚಳುವಳಿಯಲ್ಲಿ ಎತ್ತರದ ಚೇತನವಾಗಿ ಮೂಡಿ ಬಂದ ವ್ಯಕ್ತಿತ್ವ. ಅವರ ಇಡೀ ಜೀವನ ಕಥನ, ಐತಿಹ್ಯ, ವಿಸ್ಮಯ, ಪ್ರಭಾವಗಳಿಂದ ತುಂಬಿದ್ದರೂ ಸಹ, ಅವರ ಬಗ್ಗೆ ಅವರ ಸಮಕಾಲೀನ ವಚನಕಾರರೂ, ಅಕ್ಕನ ಕಾಲಕ್ಕೆ ತುಂಬಾ ಹತ್ತಿರದವನಾದ ಹರಿಹರ ಮಹಾಕವಿಯು ರಚಿಸಿರುವ 'ಮಹಾದೇವಿಯಕ್ಕಗಳ ರಗಳೆ' ಮತ್ತು ಸ್ವತಃ ಅಕ್ಕಮಹಾದೇವಿಯವರೇ ರಚಿಸುವ ವಚನಗಳೂ, ಅವರ ವ್ಯಕ್ತಿತ್ವವನ್ನು ಕಟ್ಟಿ ಕೊಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ಎಲ್ಲವನ್ನೂ ಗಮನಿಸಿದಾಗ ಅಕ್ಕಮಹಾದೇವಿಯವರ ಜೀವನ ಅಸಾಮಾನ್ಯವಾದ, ವೈಶಿಷ್ಟ್ಯತೆಯಿಂದ, ವೈಚಾರಿಕವಾದ, ಅನುಭಾವ ಪೂರ್ಣವಾದ , ನುಡಿ,ನಡೆಗಳೊಂದಾದ ಪರಿಯಲ್ಲಿರುವುದು ಕಂಡುಬರುತ್ತದೆ .
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ