ಇಸ್ರೇಲಿನ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
→‎-: ಉಲ್ಲೇಖ +++
೨೬ ನೇ ಸಾಲು:
 
==ಎರಡನೆಯ ಮಹಾಯುದ್ಧ==
ಆದರೆ ಈ ಮಧ್ಯೆ ಎರಡನೆಯ ಮಹಾಯುದ್ಧ ಪ್ರಾರಂಭವಾಯಿತು. ಅರಬ್-ಯೆಹೂದ್ಯರ ಪ್ರಶ್ನೆ ಮುಂದಕ್ಕೆ ಹೋಯಿತು. 1940ರ ಮುಂದಿನ ವರ್ಷಗಳಲ್ಲಿ ಹಿಟ್ಲರನ ಉನ್ಮಾದಕ್ಕೆ ಅರವತ್ತು ಲಕ್ಷ ಯೆಹೂದ್ಯರು ಬಲಿಯಾದರು. ಆಧುನಿಕ ಮಾನವನ ಸಂಸ್ಕøತಿಗೆ ಬೆಲೆಯೇನಾದರೂ ಇದೆಯೆ? ಎಂದು ವಿಶ್ವಾದ್ಯಂತ ಜನ ಶಂಕಿಸುವಂತಾಯಿತು. ಯೆಹೂದ್ಯರನ್ನು ನಾಶಗೊಳಿಸಿ ಅವರ ಪ್ರಶ್ನೆಯನ್ನು ಬಗೆಹರಿಸುವುದು ಹಿಟ್ಲರನ ರೀತಿ.(ನೋಡಿ- ಹಿಟ್ಲರ್,-ಅಡಾಲ್ಫ್)ಪ್ಯಾಲಿಸ್ಟೈನಿನಲ್ಲಿ ತಮ್ಮ ರಾಷ್ಟ್ರೀಯ ನೆಲೆಯನ್ನೂರಿಸಬೇಕೆಂದು ಬಹುಕಾಲದಿಂದ ಆಸೆ ಹೊಂದಿದ್ದು, ಯುರೋಪಿನಿಂದ ಅಧಿಕ ಸಂಖ್ಯೆಯಲ್ಲಿ ಇಲ್ಲಿ ಬಂದು ತುಂಬಿದ್ದ ಯೆಹೂದ್ಯರಿಗೂ ಅರಬ್ಬರಿಗೂ 1947ರಲ್ಲಿ ಯುದ್ಧವಾಯಿತು. ವಿಶ್ವಸಂಸ್ಥೆಯ ನಿರ್ಣಯಕ್ಕಾನುಸಾರವಾಗಿ ಅಲ್ಲಿ 1948ರ ಮೇ 14ರಂದು ಬ್ರಿಟಿಷರ ರಕ್ಷಣೆ ಕೊನೆಗೊಂಡು, ಮೇ 15ರಂದು ಪ್ಯಾಲಿಸ್ಟೈನಿನ ಉದಯವಾಯಿತು. ಅದು ವಿಶ್ವಸಂಸ್ಥೆಯ ಸದಸ್ಯತ್ವ ಪಡೆಯಿತು. 1949ರ ಜನವರಿಯ ವರೆಗೂ ಯುದ್ಧ ಮುಂದುವರೆಯಿತು. ಅರಬ್ ರಾಷ್ಟ್ರಗಳಿಗೂ ಇಸ್ರೇಲಿಗೂ ನಡುವೆ ಶಾಂತಿ ಕೌಲಿನ ಸಹಿಯಾಗಿಲ್ಲ; ರಾಜತಾಂತ್ರಿಕ ಸಂಬಂಧವಿಲ್ಲ. ವಿಶ್ವಸಂಸ್ಥೆ ನೇಮಿಸಿರುವ ಯುದ್ಧ ವಿರಾಮ ಮೇಲ್ವಿಚಾರಣಾ ವ್ಯವಸ್ಥೆ ಮುಂದುವರಿಯುತ್ತಿದೆ. 1967ರಲ್ಲಿ ಇಸ್ರೇಲಿಗೂ ನೆರೆಯ ಅರಬ್ ರಾಜ್ಯಗಳಿಗೂ ನಡುವೆ ನಡೆದ ಆರು ದಿನಗಳ ಯುದ್ಧದ ಫಲವಾಗಿ ಇಡೀ ಜೆರೂಸಲೆಂ, ಜಾರ್ಡನೆ ನದಿಯ ಪಶ್ಚಿಮ ದಂಡೆಯ ಪ್ರದೇಶ. ಸಿನಾಯ್ ಪರ್ಯಾಯದ್ವೀಪ ಮತ್ತು ಗೋಲನ್ ದಿಬ್ಬಗಳು ಇಸ್ರೇಲಿನ ವಶವಾದುವು. ಜೆರೂಸಲೆಂ ಅನ್ನು ಇಸ್ರೇಲ್ ರಾಜ್ಯದಲ್ಲಿ ತಕ್ಷಣವೇ ವಿಲೀನಗೊಳಿಸಲಾಯಿತು. ಉಳಿದ ಪ್ರದೇಶಗಳು ಇನ್ನೂ ಆಕ್ರಮಿತ ಪ್ರದೇಶಗಳಾಗಿ ಮುಂದುವರಿಯುತ್ತಿವೆ.(ಆರ್.ಟಿ.ಎಸ್.; ಕೆ.ಜಿ.)<ref> [https://kn.wikisource.org/s/4e7 ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಸ್ರೇಲಿನ ಇತಿಹಾಸ]</ref><ref>[https://www.history.com/topics/middle-east/history-of-israel Israel;HISTORY.COM EDITORS; MAY 14, 2019ORIGINAL-JUN 30, 2017]</ref>
 
==ಉಲ್ಲೇಖಗಳು==
"https://kn.wikipedia.org/wiki/ಇಸ್ರೇಲಿನ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ