ರಾಜ್‌ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
→‎ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ: ಭಕ್ತಪ್ರಹ್ಲಾದ ಸಿನಿಮಾದಲ್ಲಿ ನಟನಾಗಿ ಅಭಿನಯಿಸಿದ್ದಾರೆ..
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೫ ನೇ ಸಾಲು:
 
===ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ===
* [[:Category:ವರ್ಷ-೧೯೪೨ ಕನ್ನಡಚಿತ್ರಗಳು|೧೯೪೨ರಲ್ಲಿ]] ಬಿಡುಗಡೆಯಾದ [[ಭಕ್ತ ಪ್ರಹ್ಲಾದ(೧೯೪೨)|ಭಕ್ತ ಪ್ರಹ್ಲಾದ]] ಚಿತ್ರದಲ್ಲಿ ಬಾಲನಟನಾಗಿಯೂನಟನಾಗಿಯೂ, [[:Category:ವರ್ಷ-೧೯೫೨ ಕನ್ನಡಚಿತ್ರಗಳು|೧೯೫೨ರಲ್ಲಿ]] ಬಿಡುಗಡೆಯಾದ ಶಂಕರ್‌ಸಿಂಗ್ ನಿರ್ದೇಶನದ [[ಶ್ರೀ ಶ್ರೀನಿವಾಸ ಕಲ್ಯಾಣ]] ಚಿತ್ರದಲ್ಲಿ ಸಪ್ತರ್ಷಿಗಳಲ್ಲಿ ಒಬ್ಬರಾಗಿ ಅಭಿನಯಿಸಿದ್ದ ಮುತ್ತುರಾಜ್, ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು.
* [[೧೯೫೩]]ರಲ್ಲಿ ಆಗಷ್ಟೆ ಮದುವೆಯಾಗಿದ್ದ ಮುತ್ತುರಾಜ್ ದಂಪತಿಗಳು [[ನಂಜನಗೂಡು|ನಂಜನಗೂಡಿನಿಂದ]] ಮೈಸೂರಿಗೆ ಹೊರಡಲು ರೈಲ್ವೆ ನಿಲ್ದಾಣದಲ್ಲಿದ್ದರು. ಅದೇ ಸಮಯಕ್ಕೆ [[ಹೆಚ್.ಎಲ್.ಎನ್.ಸಿಂಹ]] ಕೂಡ ಮೈಸೂರಿಗೆ ಹೋಗಲು ಅಲ್ಲಿಗೆ ಬಂದಿದ್ದರು. ಅವರು ಮುತ್ತು ರಾಜ್‌ರವರನ್ನು ಚಿಕ್ಕಂದಿನಿಂದ ನೋಡಿದ್ದರು. ಅಂದು ರೈಲ್ವೆ ನಿಲ್ದಾಣದಲ್ಲಿ ಆ ದಂಪತಿಗಳನ್ನು ಕಂಡು ಪ್ರೀತಿಯಿಂದ ಮಾತನಾಡಿಸಿ, ಯೋಗಕ್ಷೇಮ ವಿಚಾರಿಸಿದರು.
* ಸಿಂಹ ಕಣ್ಣಪ್ಪನ ಪಾತ್ರಕ್ಕೆ ಹೊಸನಟನನ್ನು ಹುಡುಕುತ್ತಿದ್ದ ಸಮಯ. ಅಂದು ಕಟ್ಟುಮಸ್ತಾದ ಆಳು ಮುತ್ತರಾಜ್‌ರವರನ್ನು ಕಂಡ ತಕ್ಷಣ "ಇವನನ್ನೇ ಕಣ್ಣಪ್ಪನಾಗಿ ಏಕೆ ಮಾಡಬಾರದು" ಎಂಬ ಭಾವನೆ ಮೂಡಿತ್ತು. ಮುತ್ತುರಾಜ್ ಬಳಿ ವಿಳಾಸವನ್ನು ಪಡೆದು, ದಂಪತಿಗಳಿಗೆ ಶುಭ ಕೋರಿ ಸಿಂಹ ಬೀಳ್ಕೊಟ್ಟಿದ್ದರು. ಮೇಲಿನ ಘಟನೆ ನಡೆದ ಕೆಲ ದಿನಗಳಲ್ಲಿ ಮೈಸೂರಿನ ಟೌನ್‌ಹಾಲಿನಲ್ಲಿ ಬೇಡರ ಕಣ್ಣಪ್ಪ ನಾಟಕ ಪ್ರದರ್ಶನವಿತ್ತು. ಅದರಲ್ಲಿ ಮುತ್ತುರಾಜ್ ಕಣ್ಣಪ್ಪನ ಪಾತ್ರ ವಹಿಸುತ್ತಾರೆ ಎಂದು ಸಿಂಹರವರಿಗೆ ತಿಳಿಯಿತು. * ಆ ದಿನ, ಅರ್ಧಗಂಟೆ ನಾಟಕ ನೋಡಿ, ಮುತ್ತುರಾಜ್‌ರವರ ತನ್ಮಯತೆಯ ಅಭಿನಯ ಕಂಡು ಸಿಂಹ ಸಂತೋಷ ಪಟ್ಟರು. [[ಗುಬ್ಬಿ ಕರ್ನಾಟಕ ಫಿಲಂಸ್]] ನಿರ್ಮಿಸುತ್ತಿದ್ದ [[ಬೇಡರ ಕಣ್ಣಪ್ಪ]] ಚಿತ್ರದಲ್ಲಿನ ಕಣ್ಣಪ್ಪನ ಪಾತ್ರಕ್ಕೆ ಈತನೇ ಸರಿಯಾದ ವ್ಯಕ್ತಿ ಎಂದುಕೊಂಡು ನಿರ್ಮಾಪಕ [[ಎ.ವಿ.ಎಂ.ಚೆಟ್ಟಿಯಾರ್]] ಅವರನ್ನು ಸಂಪರ್ಕಿಸಿ, ಆ ಚಿತ್ರದ ಸಹ ನಿರ್ಮಾಪಕರಾಗಿದ್ದ [[ಗುಬ್ಬಿ ವೀರಣ್ಣ]]ನವರಿಗೆ ಈ ವಿಷಯ ತಿಳಿಸಿ ಅವರನ್ನು ಒಪ್ಪಿಸಿದರು.
"https://kn.wikipedia.org/wiki/ರಾಜ್‌ಕುಮಾರ್" ಇಂದ ಪಡೆಯಲ್ಪಟ್ಟಿದೆ