ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೭ ನೇ ಸಾಲು:
 
==ಸಾಮಾಜಿಕ ಕ್ರಾಂತಿಕಾರಿಯಾಗಿ==
* ಶಿಕ್ಷಣದ ಹಕ್ಕು, ಸರ್ವಶಿಕ್ಷಣ ಅಭಿಯಾನ ಬಿಸಿಯೂಟದ ಯೋಜನೆಗಳನ್ನು ಕ್ರಾಂತಿಕಾರಿ ಯೋಜನೆಗಳೆಂದು ಕೊಂಡಾಡಲಾಗುತ್ತಿದೆ. ೧೫೦ ವರ್ಷಗಳ ಹಿಂದೆಯೇ ಸಾವಿತ್ತಿಬಾಯಿಸಾವಿತ್ರಿ ಬಾಯಿ ಶಾಲೆಯನ್ನು ತೊರೆಯದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಯೋಜನೆ ತಂದಿದ್ದರು. ಶಿಕ್ಷಣದಲ್ಲಿ ವೈವಿಧ್ಯತೆ ತಂದಿದ್ದರು.
* ೧೮೬೦ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. ವಿವಾಹಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದರು. ಈ ಬಗೆಯ ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು.
* ಸಾವಿತ್ರಿಬಾಯಿ 'ಸತ್ಯೋಧಕ' ಸಮಾಜದ ಅಧ್ಯಕ್ಷೆಯಾಗಿದ್ದರು. ೧೯ನೇ ಶತಮಾನದ ಇತಿಹಾಸದಲ್ಲಿ ಹಿಂದೂ ಧಾರ್ಮಿಕ ಮದುವೆಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದುದು ಒಂದು ಕ್ರಾಂತಿಕಾರಿ ಹೋರಾಟವಾಗಿದೆ. ಈ ಸಂದರ್ಭದಲ್ಲಿ ಬ್ರಾಹ್ಮಣರ ಅಧಿಪತ್ಯವಿಲ್ಲದ ಮದುವೆಗಳನ್ನು ಏರ್ಪಡಿಸಿದ್ದರು. ಅಲ್ಲದೆ ಮೊಟ್ಟ ಮೊದಲ ಬಾರಿ ಕಾನೂನಿನ ನೆರವನ್ನು ಪಡೆದು ಮದುವೆ ನೆರವೇರಿಸಿದ್ದು ಇಂದಿಗೂ ಇತಿಹಾಸದಲ್ಲಿ ದಾಖಲಾಗದೆ ಉಳಿದಿರುವ ಸಂಗತಿ.
 
==ಬದಲಾವಣೆಯ ಹರಿಕಾರರಾಗಿ==