ಇಂಗಾಲ ಸಂಯುಕ್ತ ರಸಾಯನಶಾಸ್ತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಇಂಗಾಲ ಮತ್ತು ಇಂಗಾಲ ಸಂಯುಕ್ತಗಳ ಅಭ್ಯಾಸ ಮಾಡುವ ರಸಾಯನಶಾಸ್ತ್ರ ವಿಭಾಗ (ಕಾರ...
 
೨ ನೇ ಸಾಲು:
 
==ಹಿನ್ನೆಲೆ==
ಜೀವಜನ್ಯ, ಎಂದರೆ ಸಸ್ಯ ಮತ್ತು ಪ್ರಾಣಿಜನ್ಯ ಸಂಯುಕ್ತಗಳ ಅಭ್ಯಾಸ ಮಾಡುವ ರಸಾಯನಶಾಸ್ತ್ರ ವಿಭಾಗವನ್ನು ಮೊದಲು ಸಾವಯವ (ಆಗ್ರ್ಯಾನಿಕ್) ರಸಾಯನಶಾಸ್ತ್ರವೆಂದು ಕರೆಯುತ್ತಿದ್ದರು. ಅಂದಿನ ವಿಜ್ಞಾನಿಗಳು ಜೀವದ ನೆರವಿಲ್ಲದೆ ಈ ಬಗೆಯ ಸಂಯುಕ್ತಗಳ ತಯಾರಿಕೆ ಸಾಧ್ಯವೇ ಇಲ್ಲವೆಂದು ನಂಬಿದ್ದುದರಿಂದ ಈ ಹೆಸರು ಬಂತು. ಇಂಗಾಲ ಸಂಯುಕ್ತಗಳನ್ನು ಅವುಗಳ ಆಕರಗಳಿಂದ ಬೇರ್ಪಡಿಸಿ ಪರೀಕ್ಷಿಸುವುದು. ಇಂಗಾಲ ಸಂಯುಕ್ತಗಳ ಪರಿವರ್ತನೆಗಳ ಅಭ್ಯಾಸ ಇವು ಬಲು ಹಿಂದಿನಿಂದಲೂ ಪ್ರಚಲಿತವಿದ್ದುವು. ಉದಾಹರಣೆಗೆ ಕೆಲವೊಂದು ಮದ್ಯಸಾರಗಳ ತಯಾರಿಕೆಯನ್ನು ಸಾಧಾರಣವಾಗಿ 9ನೆಯ ಶತಮಾನದವರೆಗೂ ಗುರುತಿಸಲಾಗಿದೆ.<ref>https://www.thoughtco.com/carbon-compounds-what-you-should-know-4123856</ref>
 
==ಅಧ್ಯಯನ==
ಪ್ರಕೃತಿಯಲ್ಲಿ ದೊರೆಯುವ ಇಂಗಾಲ ಸಂಯುಕ್ತಗಳ ಕ್ರಮಬದ್ಧ ತಯಾರಿಕೆ ಮತ್ತು ಅಧ್ಯಯನಗಳು ಆರಂಭವಾದದ್ದು 18ನೆಯ ಶತಮಾನದಲ್ಲಿ. ಶೀಲೆ ಎಂಬ ವಿಜ್ಞಾನಿ ಟಾರ್ಟಾನಿಕ್, ಆಕ್ಸಾಲಿಕ್, ಸಿಟ್ರಿಕ್, ಮ್ಯಾಲಿಕ್, ಮ್ಯೂಸಿಕ್ ಮತ್ತು ಲ್ಯಾಕ್ಟಿಕ್ ಆಮ್ಲಗಳನ್ನು ಬೇರ್ಪಡಿಸಿ ಅವುಗಳ ಗುಣ ಲಕ್ಷಣಗಳನ್ನು ಪರೀಕ್ಷಿಸಿದ (1769-1785); ಪ್ರಾಣಿಮೂತ್ರದಲ್ಲಿರುವ ಯೂರಿಯವನ್ನು ಬೇರ್ಪಡಿಸಿದ (1773). ಈ ಬಗೆಯ ಹಲವಾರು ಸಂಯುಕ್ತಗಳು ದೊರೆತ ಅನಂತರ ಇವುಗಳ ಗುಣ ಲಕ್ಷಣಗಳು ಖನಿಜಜನ್ಯ ಸಂಯುಕ್ತಗಳ ಗುಣ ಲಕ್ಷಣಗಳಿಗಿಂತ ಭಿನ್ನವಾದುವುಗಳೆಂದು ಕಂಡುಕೊಂಡ ವಿಜ್ಞಾನಿಗಳು ಈ ಸಂಯುಕ್ತಗಳ ರಸಾಯನಶಾಸ್ತ್ರವನ್ನು ಪ್ರತ್ಯೇಕವಾಗಿ ಅಭ್ಯಸಿಸತೊಡಗಿದರು. 19ನೆಯ ಶತಮಾನದ ಆದಿಭಾಗದಲ್ಲಿ ಬಜಿóರ್óೀಲಿಯಸ್ ಈ ವಿಭಾಗವನ್ನು ಸಾವಯವ ರಸಾಯನಶಾಸ್ತ್ರವೆಂದು ಕರೆದ. ಮುಖ್ಯವಾಗಿ ಕೇವಲ ನಾಲ್ಕು ಧಾತುಗಳಿಂದ-ಎಂದರೆ ಇಂಗಾಲ (ಕಾರ್ಬನ್), ಜಲಜನಕ (ಹೈಡ್ರೊಜನ್), ಆಮ್ಲಜನಕ (ಆಕ್ಸಿಜನ್) ಮತ್ತು ಸಾರಜನಕಗಳಿಂದ (ನೈಟ್ರೊಜನ್) ಬಲುಮಟ್ಟಿನ ಸಾವಯವ ಸಂಯುಕ್ತಗಳು ತಯಾರಾಗಿವೆಯೆಂದು ಲವಾಸ್ಯೆ ಈ ಸಂಯುಕ್ತಗಳ ವಿಶ್ಲೇಷಣದಿಂದ ತೋರಿಸಿದ, ಅದುವರೆಗೆ ನಿರವಯವ ಲವಣಗಳನ್ನು (ಇನಾಗ್ರ್ಯಾನಿಕ್ ಸಾಲ್ಟ್ಸ್) ತಯಾರಿಸಲು ಉಪಯೋಗಿಸುತ್ತಿದ್ದ ಯಾವ ಕ್ರಿಯೆ, ವಿಧಾನಗಳಿಂದಲೂ ಈ ಸಂಯುಕ್ತಗಳನ್ನು ತಯಾರಿಸಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಜೈವಿಕ ಸಸ್ಯ ಮತ್ತು ಪ್ರಾಣಿಗಳಲ್ಲಿರುವ ಜೀವಶಕ್ತಿಯ ನೆರವಿಲ್ಲದೆ ಇಂಥವನ್ನು ತಯಾರಿಸುವುದು ಅಸಾಧ್ಯವೆಂದು ಭಾವಿಸಲಾಯಿತು.<ref>http://chemed.chem.purdue.edu/genchem/topicreview/bp/ch10/carbon.php</ref>