"ಇಂಗಾಲ ಸಂಯುಕ್ತ ರಸಾಯನಶಾಸ್ತ್ರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
1848ರ ವೇಳೆಗೆ ಅನೇಕ ಸಾವಯವ ಸಂಯುಕ್ತಗಳ ವಿಶ್ಲೇಷಣೆ, ಸಂಶ್ಲೇಷಣೆಗಳು ನಡೆದಿದ್ದು ಇಂಗಾಲ ಎಲ್ಲ ಸಾವಯವ ಸಂಯುಕ್ತಗಳಲ್ಲಿನ ಆವಶ್ಯಕ ಧಾತುವೆಂದು ತಿಳಿದುಬಂತು. ಅಂದಿನಿಂದ ಈ ವಿಭಾಗಕ್ಕೆ ಇಂಗಾಲ ಸಂಯುಕ್ತರಸಾಯನಶಾಸ್ತ್ರವೆಂಬ ಹೆಸರು ಆರಂಭವಾಯಿತು. ಇಂದು ಈ ವಿಭಾಗದಲ್ಲಿ ಜೀವಜನ್ಯ ಸಂಯುಕ್ತಗಳು ಮಾತ್ರವಲ್ಲದೆ ಅನೇಕ ಕೃತಕವಾಗಿ ತಯಾರಿಸಿದ ಇಂಗಾಲ ಸಂಯುಕ್ತಗಳ ಸಂಶ್ಲೇಷಣೆ, ಅಧ್ಯಯನಗಳು ಸೇರಿರುವುದರಿಂದ ಸಾವಯವ ರಸಾಯನಶಾಸ್ತ್ರ ಎಂಬ ಶೀರ್ಷಿಕೆಗಿಂತಲೂ ಇಂಗಾಲಸಂಯುಕ್ತರಸಾಯನಶಾಸ್ತ್ರ ಎಂಬ ಶೀರ್ಷಿಕೆಯೇ ಸೂಕ್ತವಾಗಿದೆ. ಆದರೆ ಮೊದಲೇ ತಿಳಿಸಿದಂತೆ ಈ ವಿಭಾಗದಲ್ಲಿ ಇಂಗಾಲಸಂಯುಕ್ತಗಳೆಲ್ಲವೂ ಸೇರುವುದಿಲ್ಲ. ಸರಳ ಮತ್ತು ಖನಿಜ ಸಂಬಂಧವಾದ ಸಂಯುಕ್ತಗಳಾದ ಇಂಗಾಲದ ಆಕ್ಸೈಡುಗಳು ಕಾರ್ಬಾನಿಕ್ ಆಮ್ಲ ಮತ್ತು ಅದರ ಲವಣಗಳು, ಹೈಡ್ರೊಸಯನಿಕ್ ಆಮ್ಲ ಮತ್ತು ಅದರ ಲವಣಗಳು, ಸಯನೇಟುಗಳೇ ಮೊದಲಾದುವುಗಳು ನಿರವಯವ (ಇನಾಗ್ರ್ಯಾನಿಕ್) ರಸಾಯನ ಶಾಸ್ತ್ರದ ಗುಂಪಿಗೆ ಸೇರುತ್ತವೆ. ಇಂಗಾಲ ಸಂಯುಕ್ತ ರಸಾಯನಶಾಸ್ತ್ರ ವಿಭಾಗದಲ್ಲಿ ಸೇರಿರುವ ಸಂಯುಕ್ತಗಳಲ್ಲಿ ಸಾಮಾನ್ಯವಾಗಿ ಎಲ್ಲದರಲ್ಲಿಯೂ ಇಂಗಾಲದೊಡನೆ ಜಲಜನಕವೂ ಇದ್ದೇ ಇರುತ್ತದೆ. <ref>https://www.sciencedirect.com/book/9780444533456/rodds-chemistry-of-carbon-compounds</ref>
 
 
==ಉಪಯೋಗಗಳು==
===ಔಷಧ=== ಔಷಧರಂಗದಲ್ಲಿ ಉಪಯೋಗಿಸುತ್ತಿರುವ ಅಸಂಖ್ಯಾತ ಸಂಯುಕ್ತಗಳಲ್ಲಿ 90%ಕ್ಕೂ ಮೀರಿದ ಸಂಯುಕ್ತಗಳು ಇಂಗಾಲ ಸಂಯುಕ್ತಗಳು. ಹೊರಗಾಯಕ್ಕೆ ಹಚ್ಚುವ ಮುಲಾವಿನಲ್ಲಿ, ಒಳಹುಣ್ಣಿನ ಉಪಶಮನದಲ್ಲಿ, ಎಲ್ಲ ಬಗೆಯ ದೈಹಿಕ ರೋಗ ಚಿಕಿತ್ಸೆಗಳಲ್ಲಿ ಅನೇಕ ಮಾನಸಿಕ ರೋಗ ಚಿಕಿತ್ಸೆಗಳಲ್ಲಿ ಶಸ್ತ್ರ ಚಿಕಿತ್ಸೆಗಳಲ್ಲಿ (ವೇದನಾಪ್ರತಿಬಂಧಕವಾಗಿ), ರೋಗಕಾರಕ ಸೂಕ್ಷಾಣು ಜೀವಿಗಳ ಎದುರು ಚಿಕಿತ್ಸೆಗಳಲ್ಲಿ ಶರೀರದ ಅಂಗಗಳ ಕಾರ್ಯಗಳನ್ನು ನಿಯಂತ್ರಿಸಲು, ಜನನ ನಿಯಂತ್ರಣಕ್ಕಾಗಿ - ಹೀಗೆ ಕೊನೆಯಿಲ್ಲದಷ್ಟು ಉಪಯೋಗಗಳನ್ನು ಪಡೆದಿರುವ ಔಷಧಗಳು ಬಲು ಪಾಲಿಗೆ ಇಂಗಾಲಸಂಯುಕ್ತಗಳು. ರಾಸಾಯನಿಕ ಚಿಕಿತ್ಸೆ ಇಂದು ನಾವು ಅನೇಕ ರೋಗಗಳನ್ನು ಗೆಲ್ಲಲು ನೆರವು ನೀಡಿದೆ.<ref>https://sciencestruck.com/carbon-uses-in-everyday-life</ref>
 
===ಕೈಗಾರಿಕೋದ್ಯಮಗಳು==
ಯಾವ ಕೈಗಾರಿಕೋದ್ಯಮವೂ ಪ್ರಕೃತಿಯ ಕಚ್ಚಾ ವಸ್ತುಗಳಿಲ್ಲದೆ ಬಲುಕಾಲ ನಡೆಯುವಂತಿಲ್ಲ. ಪ್ರಕೃತಿಯ ಬಲುಪಾಲು ವಸ್ತುಗಳು ಇಂಗಾಲಸಂಯುಕ್ತಪೂರಿತವಾದ್ದರಿಂದ ಇಂಗಾಲಸಂಯುಕ್ತಗಳನ್ನು ಸ್ವಲ್ಪವಾದರೂ ಉಪಯೋಗಿಸದ ಉದ್ಯಮಗಳೇ ಇಲ್ಲವೆನ್ನಬಹುದು. ಇಂದಿನ ದಿವಸಗಳಲ್ಲಿ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಉಪಯೋಗಿಸಲಾಗುತ್ತಿರುವ ಪ್ಲಾಸ್ಟಿಕ್ಕುಗಳು, ಕೃತಕ ಎಳೆಗಳು, ಚೊಕ್ಕಾರಕಗಳು. ವಿವಿಧ ಕೃತಕ ಮತ್ತು ಸಹಜ ವರ್ಣದ್ರವ್ಯಗಳು, ವಾಹನಗಳಿಗೆ ಉರುವಲಾಗಿ ಉಪಯೋಗಿಸುತ್ತಿರುವ ಪೆಟ್ರೋಲ್, ಸೀಮೆಎಣ್ಣೆ, ಡೀಸೆಲ್ ಎಣ್ಣೆಗಳ ಮೂಲವಾದ ಪೆಟ್ರೋಲಿಯಂ ಮೊದಲಾದುವುಗಳೆಲ್ಲ ಇಂಗಾಲಸಂಯುಕ್ತರಸಾಯನಶಾಸ್ತ್ರದ ಅಂಕೆಗೆ ಒಳಪಟ್ಟಿವೆ.<ref>https://azchemistry.com/carbon-uses-in-everyday-life</ref>
 
===ದೇಶಸಂರಕ್ಷಣೆ===
ಯುದ್ಧರಂಗದಲ್ಲಿಯೂ ಇಂಗಾಲ ಸಂಯುಕ್ತಗಳ ಉಪಯೋಗ ಬೇಕಾದಷ್ಟಿದೆ. ಪ್ರಸಿದ್ಧ ಸ್ಪೋಟಕಗಳಾದ ಟಿ.ಎನ್.ಟಿ., ನೈಟ್ರೊಗ್ಲಿಸರಿನ್ ಮೊದಲಾದವುಗಳು ಇಂಗಾಲಸಂಯುಕ್ತಗಳು. ನೈಟ್ರೋಸಂಯುಕ್ತಗಳಿಂದ ಕೂಡಿದ ರಾಕೆಟ್ ಇಂಧನಗಳು, ರಾಕೆಟ್ ಇಂಧನದ ಆವರಣಗಳಿಗಾಗಿ ಉಪಯೋಗಿಸುವ ವಿಶಿಷ್ಟ ದರ್ಜೆಯ ಪ್ಲಾಸ್ಟಿಕ್ಕುಗಳೇ ಮೊದಲಾದುವು ಈ ರಂಗದಲ್ಲಿ ಇಂಗಾಲ ಸಂಯುಕ್ತಗಳ ಮುಖ್ಯ ಉಪಯೋಗಗಳನ್ನು ಪ್ರತಿನಿಧಿಸುತ್ತವೆ. ವಿಪರೀತ ದೈಹಿಕ ಮತ್ತು ಮಾನಸಿಕ ಪರಿಣಾಮಗಳನ್ನುಂಟುಮಾಡುವ ಅಶ್ರುವಾಯುವಿನಂಥ (ಟಿಯರ್ ಗ್ಯಾಸ್) ಮತ್ತು ಅದಕ್ಕೂ ಹೆಚ್ಚು ಹಾನಿಕರವಾದ ಅನೇಕ ಇಂಗಾಲಸಂಯುಕ್ತಗಳನ್ನು ಯುದ್ದಗಳಲ್ಲಿ ಉಪಯೋಗಿಸಲಾಗುತ್ತದೆ.
==ಉಲ್ಲೇಖಗಳು==
[[ವರ್ಗ:ಪ್ರೋಜೆಕ್ಟ್ ಟೈಗರ್-೨ ಸ್ಪರ್ಧೆಗೆ ಬರೆದ ಲೇಖನ]]
೪೨೨

edits

"https://kn.wikipedia.org/wiki/ವಿಶೇಷ:MobileDiff/966758" ಇಂದ ಪಡೆಯಲ್ಪಟ್ಟಿದೆ