ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
*ಈ ಹಬ್ಬವನ್ನು ಹೆಚ್ಚಾಗಿ [[ಕರ್ನಾಟಕ]] ,ಆಂಧ್ರ ಮತ್ತು [[ಮಹಾರಾಷ್ಟ್ರ|ಮಹಾರಾಷ್ಟ್ರಗಳಲ್ಲಿ]] ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ '''ಗುಡಿಪಾಡ್''' ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ - ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ 'ಗುಡಿ' ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
* ಹುಣಿಸೇಹಣ್ಣು, ಬೆಲ್ಲ, [[ಮಾವಿನಕಾಯಿ]], [[ಉಪ್ಪು]], [[ಕರಿಮೆಣಸು|ಮೆಣಸು]], [[ಬೇವು]] ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
*ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.
*ಮನೆಯ ಮುಂದೆ ಬಣ್ಣ ಬಣ್ಣದ [[ರಂಗೋಲಿ|ರಂಗೋಲಿಯನ್ನಿಡುವರು]]. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ [[ಸೀಗೇಕಾಯಿ|ಸೀಗೇಕಾಯಿಯಿಂದ]] ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
*[[ಪಂಚಾಂಗ]] ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.
* ಖಣಿ ಇಡುವುದು : ಕರಾವಳಿಯ ಸೌರಮಾನ ಯುಗಾದಿಯ ವಿಶೇಷತೆ ಖಣಿ ಇಡುವುದು. ಬಾಳೆ ಎಲೆ, ತಟ್ಟೆಯಲಿ ಅಕ್ಕಿ ಹಾಕಿ ಅದರ ಮೇಲೆ ತೆಂಗಿನಕಾಯಿ, ಸೌತೇಕಾಯಿ, ರವಿಕೆ ಕಣ, ಹೊಸ ಬಟ್ಟೆ, ಚಿನ್ನ, ಬತ್ತದ ತೆನೆ, ಹಣ್ಣು, ದೇವರ ಪ್ರತಿಮೆ ಅದರ ಮುಂದೆ ಒಂದು ಕನ್ನಡಿ ಇತ್ತು, ಆ ಕನ್ನಡಿಯಲಿ ದೇವರ ಪ್ರತಿಮೆ ಹಾಗೂ ತಟ್ಟೆಯಲಿ ಇಟ್ಟಂತಹ ವಸ್ತುಗಳನ್ನು ಕಾಣುವ ಹಾಗೆ ಇಡುತ್ತಾರೆ. ವನ್ನು ಇಟ್ಟು ದೇವರ ಮುಂದೆ ಹಿಂದಿನ ರಾತ್ರಿ ಮಲಗುವ ಮುನ್ನ ಇಡುತ್ತಾರೆ. ಯುಗಾದಿ ಹಬ್ಬದಂದು ಬೆಳಿಗ್ಗೆ ಬೇಗ ಎದ್ದು ದೇವರ ದೀಪ ಹಚ್ಚಿ ಖಣಿಯಲ್ಲಿನ ಕನ್ನಡಿಯಲಿ ದೇವ ದರ್ಶನ ಪಡೆಯುವುದು ಅಂದಿನ ವಿಶೇಷ. ನಂತರ ಸ್ನಾನ, ಹೋಳಿಗೆ ಚಿತ್ರಾನ್ನದೂಟ, ದೇಗುಲಕ್ಕೆ ಹಾಗೂ ಹಿರಿಯರ ಭೇಟಿ, ಪಂಚಾಂಗ ಶ್ರವಣ.<ref>[Jeaneane D. Fowler (1997). Hinduism: Beliefs and Practices. Sussex Academic Press. pp. 72–73.]</ref>
 
==ಅಂದಿನ ವಿಶೇಷ ತಿನಿಸು==
"https://kn.wikipedia.org/wiki/ಯುಗಾದಿ" ಇಂದ ಪಡೆಯಲ್ಪಟ್ಟಿದೆ