ಜಾನಪದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
==ಜಾನಪದ==
===ಮುನ್ನುಡಿ===
ಭಾರತ ದೇಶದಲ್ಲೇ ನಮ್ಮ [[ಕರ್ನಾಟಕದಕರ್ನಾಟಕ]] ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ. ಇಂದಿನ ಪಾಶ್ಚಾತ್ಯ ಶೈಲಿಯ ಸಂಗೀತದ ಮಧ್ಯೆ ಜಾನಪದ ಗೀತೆಗಳು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಬದ್ರವಾಗಿ ಊಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ.
ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು, ಸಂಬಂಧಗಳನ್ನು, ದೇವರುಗಳನ್ನು ಹಾಗೂ ಧಾರ್ಮಿಕ ಆಚರಣೆಗಳನ್ನು ನಮ್ಮ ಮುಂದೆ ತೆರೆದಿಡುತ್ತವೆ. ಈ ಜಾನಪದ ಗೀತೆಗಳನ್ನು ಸೃಷ್ಟಿಸಿದವರು ಯಾರೆಂದು ಹೇಳುವುದಕ್ಕೆ ಸಾಧ್ಯವಿಲ್ಲ. ಇವು ಹಳ್ಳಿಯು ಸಾಮಾನ್ಯ ಜನರ ನಡುವೆ ಹುಟ್ಟಿ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ ಎನ್ನಬಹುದು.
 
"https://kn.wikipedia.org/wiki/ಜಾನಪದ" ಇಂದ ಪಡೆಯಲ್ಪಟ್ಟಿದೆ