ಮಹಾವೀರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 223.237.147.118 (talk) to last revision by Srinivas ujire
೨೯ ನೇ ಸಾಲು:
 
==ಜೈನ ಧರ್ಮ==
"ಅಹಿಂಸಾ ಪರಮೋ ಧರ್ಮಃ" - ಅಹಿಂಸೆಯೇ ಮೂಲಮಂತ್ರವಾದ [[ಜೈನಧರ್ಮ]] ತ್ಯಾಗಪ್ರಧಾನವಾದ ಧರ್ಮ. ಪ್ರಥಮ ತೀರ್ಥಂಕರರಾದ ಭಗವಾನ್ ಋಷಭದೇವರಿಂದ[[ಋಷಭದೇವ]]ರಿಂದ ಪ್ರಾರಂಭವಾಗಿ ಭಗವಾನ್ ಮಹಾವೀರರವರೆಗೆ, ಭಗವಾನ್ ಮಹಾವೀರರಿಂದ ಹಿಡಿದು ಇಂದಿನ ದಿಗಂಬರ-ಶ್ವೇತಾಂಬರರವರೆಗೆ ಈ ಅತಿ ಪ್ರಾಚೀನಧರ್ಮವು ಸರ್ವದಾ ತ್ಯಾಗ, ವೈರಾಗ್ಯ, ತಪಸ್ಸು – ಇವುಗಳಿಗೆ ಮಹತ್ವ ನೀಡಿದೆ. ಇಂದಿನ ಆಧುನಿಕ ಯುಗದಲ್ಲಿಯೂ ನಿಷ್ಠೆಯಿಂದ ತಪಸ್ಸಿನಲ್ಲಿ ನಿರತರಾದ ಜೈನಮುನಿಗಳನ್ನು, ಶ್ವೇತಾಂಬರರನ್ನು ಕಾಣಬಹುದು. ತ್ಯಾಗಮೂಲವಾದ ಮಹಾನ್ ಧರ್ಮಗಳಲ್ಲಿ ಏರುಪೇರುಗಳು ಇರುವುದು ಸಾಧ್ಯ; ಆದರೆ ನಾಶ ಎಂದಿಗೂ ಅಸಂಭವ. ಜೈನಧರ್ಮ ತ್ಯಾಗಪ್ರಧಾನ ಎಂದ ಕೂಡಲೇ ಇಲ್ಲಿ ಗೃಹಸ್ಥರನ್ನು ಕಡೆಗಣಿಸಲಾಗಿದೆ ಎಂದರ್ಥವಲ್ಲ. ಗೃಹಸ್ಥರು ಈ ಧರ್ಮದ ಪ್ರಾಣಸ್ವರೂಪ; ಅವರು ನಿರ್ಗ್ರಂಥಿಗಳ (ಎಲ್ಲ ಬಂಧಗಳಿಂದ ಮುಕ್ತರ), ಮುನಿಗಳ, ಅರಹಂತರ (ದಾರಿ ತೋರುವ ಸದಾಚಾರಿಗಳ) ಪಾಲನೆ ಪೋಷಣೆ ಮಾಡುತ್ತಾರೆ. ಐದು ಅಣುವ್ರತಗಳನ್ನು ಪಾಲಿಸುತ್ತಾರೆ ಮತ್ತು ಜೈನ ಮಂದಿರಗಳ ಸೇವೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ.
 
==ತೀರ್ಥಂಕರರು==
"https://kn.wikipedia.org/wiki/ಮಹಾವೀರ" ಇಂದ ಪಡೆಯಲ್ಪಟ್ಟಿದೆ