ಎಥಿಲೀನ್ ಆಲ್ಕೀನ್ ವರ್ಗಕ್ಕೆ ಸೇರಿದ ಆಲಿಫ್ಯಾಟಿಕ್ ಹೈಡ್ರೋಕಾರ್ಬನ್. ಇದರ ರಾಸಾಯನಿಕಸೂತ್ರ C2H4. ಇದು ಅಪರ್ಯಾಪ್ತ ಸಂಯುಕ್ತವಾದ್ದರಿಂದ ಇದರಲ್ಲಿ ಎರಡು ಇಂಗಾಲಪರಮಾಣುಗಳು ಸಿಗ್ಮ (σ) ಮತ್ತು ಪೈ (π) ಬಂಧಗಳ ಮೂಲಕ ಸೇರಿಸಲ್ಪಟ್ಟಿವೆ (ದ್ವಿಬಂಧಗಳು-ಡಬಲ್ ಬಾಂಡ್ಸ್). ಎಥಿಲೀನ್ ರಚನೆಯನ್ನು ಮೂರು ಮಾದರಿಯಲ್ಲಿ ತೋರಿಸುವ ವಾಡಿಕೆಯಿದೆ. π ಬಂಧ σ ಬಂಧಕ್ಕಿಂತ ದುರ್ಬಲವಾಗಿರುವುದರಿಂದ ಸುಲಭವಾಗಿ ಭೇದಿಸಲ್ಪಡುತ್ತದೆ. ಈ ಗುಣದಿಂದ ಎಥಿಲೀನ್ ಅಣುವಿನ ದ್ವಿಬಂಧಕ್ಕೆ ಕ್ಲೋರಿನ್, ಬ್ರೋಮಿನ್, ಹೈಡ್ರೊಜನ್ ಕ್ಲೋರೈಡ್, ಆಕ್ಸಿಜನ್ನುಗಳನ್ನು ಸೇರಿಸಬಹುದು.

ಎಥಿಲೀನ್‍ನ ಚೆಂಡು ಮತ್ತು ಕಡ್ಡಿ ಮಾದರಿ
Orbital description of bonding between ethylene and a transition metal.

ಈ ಕ್ರಿಯೆಗಳಿಂದ ಎಥಿಲೀನ್ ಪರ್ಯಾಪ್ತ ಅಣುವಾಗಿ ಪರಿವರ್ತನೆಗೊಳ್ಳುತ್ತದೆ.[೧]ICSC 0475

ಮೂಲಗಳು ಬದಲಾಯಿಸಿ

ಪೆಟ್ರೋಲಿಯಂ ಮತ್ತು ನಿಸರ್ಗ ಅನಿಲದಲ್ಲಿ (ನ್ಯಾಚುರಲ್ ಗ್ಯಾಸ್) ಹಾಗೂ ನ್ಯಾಫ್ಥಾದಲ್ಲಿ ಎಥಿಲೀನ್ ದೊರೆಯುತ್ತದೆ. ಮೋಟಾರ್ ವಾಹನಗಳು ಉಗುಳುವ ಹೊಗೆಯಲ್ಲಿಯೂ ಅಲ್ಪ ಪ್ರಮಾಣದಲ್ಲಿ ಇದೆಯೆಂದು ಪತ್ತೆಮಾಡಲಾಗಿದೆ.

ತಯಾರಿಕೆ ಬದಲಾಯಿಸಿ

ಪೆಟ್ರೋಲಿಯಂ ಮತ್ತು ನಿಸರ್ಗಾನಿಲಗಳನ್ನು ಅಧಿಕ ಉಷ್ಣತೆಯಲ್ಲಿ ಕಾಯಿಸಿದಾಗ (ಉತ್ತಾಪ ವಿಚ್ಛೇದನೆ-ಪೈರೋಲಿಸಿಸ್ ಕ್ರ್ಯಾಕಿಂಗ್) ಎಥಿಲೀನ್ ಉತ್ಪತ್ತಿಯಾಗುತ್ತದೆ. ಕಚ್ಚಾ ಪೆಟ್ರೋಲಿಯಂ ಎಣ್ಣೆಯ ಶುದ್ಧೀಕರಣದಲ್ಲಿ ಹೊರಬರುವ ಅನಿಲಗಳಲ್ಲಿ ಎಥಿಲೀನ್ ಹೆಚ್ಚಿನ ಪ್ರಮಾಣದಲ್ಲಿರುವುದು. ಔದ್ಯೋಗಿಕವಾಗಿ ಎಥಿಲೀನನ್ನು ಮೇಲೆ ಹೇಳಿದ ಅನಿಲಗಳಿಂದ ಆಸವನ (ಡಿಸ್ಟಿಲ್ಲೇಷನ್) ಮತ್ತು ಅಧಿಶೋಷಣ (ಅಡ್‍ಸಾರ್ಪ್ಷನ್) ವಿಧಾನಗಳಿಂದ ಪಡೆಯುತ್ತಾರೆ. ಪ್ರೋಪೈಲಿನ್ ಮತ್ತು ಬ್ಯೂಟಾಡಯೀನ್ ಅನಿಲಗಳನ್ನೊಳಗೊಂಡು ಅಶುದ್ಧವಾಗಿದ್ದರೂ ಈ ವಿಧಾನಗಳಿಂದ ಬರುವ ಎಥಿಲೀನನ್ನು ನೇರವಾಗಿ ಅನೇಕ ರಾಸಾಯನಿಕ ಕ್ರಿಯೆಗಳಿಗೆ ಉಪಯೋಗಿಸುತ್ತಾರೆ. ಶುದ್ಧವಾದ ಎಥಿಲೀನನ್ನು ಅಲ್ಪಪ್ರಮಾಣದಲ್ಲಿ ಮದ್ಯಸಾರದ ಆವಿಯನ್ನು ಪಟುಗೊಳಿಸಿದ (ಆಕ್ಟಿವೇಟೆಡ್) ಅಲ್ಯುಮಿನ (ಅಲ್ಯೂಮಿನಿಯಂ ಆಕ್ಸೈಡ್) ಮೇಲೆ ಹಾಯಿಸಿ ಪಡೆಯಬಹುದು.[೨][೩][೪]

ಭೌತಗುಣಗಳು ಬದಲಾಯಿಸಿ

ಬಣ್ಣವಿಲ್ಲದ ಅನಿಲ. ವಿಶಿಷ್ಟವಾದ ಸುವಾಸನೆ ಮತ್ತು ರುಚಿಯುಳ್ಳದ್ದು.[೫] 3% ಪ್ರಮಾಣದ ಗಾಳಿಯೊಂದಿಗೆ ಸೇರಿದರೆ ಸ್ಫೋಟಕ ಮಿಶ್ರಣವುಂಟಾಗುತ್ತದೆ. ಕರಗುವ ಉಷ್ಣತೆ -169 ಸೆಂ.ಗ್ರೇ. ಆವಿಯಾಗುವ ಉಷ್ಣತೆ- 1025 ಸೆಂ.ಗ್ರೇ. ಸಾಪೇಕ್ಷ ಸಾಂದ್ರತೆ 00 ಸೆಂಟಿಗ್ರೇಡಿನಲ್ಲಿ 0.೬೧೦. ಆವಿಯ ಸಾಂದ್ರತೆ (0 ಸೆಂ. ಗ್ರೇ. ಮತ್ತು 760 ಮಿ.ಮಿ. ಒತ್ತಡದಲ್ಲಿ ಗಾಳಿ=1) 0. 975. ದ್ರವಿಸುವ ಅವಧಿಕ ಉಷ್ಣತೆ (ಕ್ರಿಟಿಕಲ್ ಟೆಂಪರೇಚರ್) 9.5. ಸೆಂಗ್ರೇ.

ರಾಸಾಯನಿಕ ಗುಣಗಳು ಬದಲಾಯಿಸಿ

  • ಎಥಿಲೀನ್ ಅಪರ್ಯಾಪ್ತ ಸಂಯುಕ್ತವಾದದ್ದರಿಂದ ಕೂಡಿಕೆ ಕ್ರಿಯೆಗಳನ್ನು ಹೊಂದುತ್ತದೆ. ಇದು ಅಪಕರ್ಷಕಾರಿಯಂತೆಯೂ ವರ್ತಿಸುತ್ತದೆ.

C2H4 + Cl2 → C2H4Cl2

C2H4 + HBr → C2H5Br

     ಪ್ಲಾಟಿನಂ

C2H4 + H2 → C2H6

    ವೇಗವರ್ಧಕ
  • ಎರಡು ಹೈಡ್ರಾಕ್ಸಿಲ್ ಗುಂಪುಗಳನ್ನು ಸೇರಿಸಿ ಗ್ಲೈಕಾಲನ್ನು ರಚನೆ ಮಾಡಬಹುದು.
  • ಎಥಿಲೀನನ್ನು ಒತ್ತಡದಲ್ಲಿ ಆಕ್ಸಿಜನ್ನನೊಂದಿಗೆ ಕಾಯಿಸಿದಾಗ ಪಾಲಿ ಎಥಿಲೀನ್ ದೊರಕುತ್ತದೆ. ಇದರ ಅಣುತೂಕ ಸುಮಾರು 20,000. ಈ ಸಂಯುಕ್ತದಲ್ಲಿ ಅನೇಕ ಎಥಿಲೀನ್ ಅಣುಗಳು ಒಂದಕ್ಕೊಂದು ಸೇರಿ ಉದ್ದವಾದ ಸರಪಳಿಯನ್ನು ರಚಿಸುತ್ತವೆ.
      ಆಕ್ಸಿಜನ್ ಒತ್ತಡ
nCH2=CH2           ~CH2-(CH2-CH2-CH2)n-CH2
          ಉಷ್ಣ

ಉಪಯೋಗಗಳು ಬದಲಾಯಿಸಿ

 
Main[ಶಾಶ್ವತವಾಗಿ ಮಡಿದ ಕೊಂಡಿ] industrial uses of ethylene. Clockwise from the upper right: its conversions to ethylene oxide, precursor to ethylene glycol; to ethylbenzene, precursor to styrene; to various kinds of polyethylene; to ethylene dichloride, precursor to vinyl chloride.
  • ಎಥಿಲೀನನ್ನು ಮೂಲವಸ್ತುವನ್ನಾಗಿ ಉಪಯೋಗಿಸಿ ಟನ್ನುಗಟ್ಟಲೆ ಎಥಿಲೀನ್ ಡೈಕ್ಲೋರೈಡ್, ಪಾಲಿ ಎಥಿಲೀನ್, ಸ್ಟೈರೀನ್, ಎಥಿಲೀನ್ ಡೈಆಕ್ಸೈಡ್, ಅಸಿಟೈಲುಗಳು, EP ರಬ್ಬರು, ಈಥೈಲ್ ಆಲ್ಕೊಹಾಲ್ ಮತ್ತು ಇತರ ನೀಳವಾದ ರಚನೆಯುಳ್ಳ ಆಲ್ಕೊಹಾಲುಗಳನ್ನು ತಯಾರಿಸುತ್ತಾರೆ.[೬]
  • ಹಣ್ಣುಗಳಿಗೆ ಬಣ್ಣವನ್ನು ಕೊಡಲು, ಮೊಳಕೆ ಮತ್ತು ತರಕಾರಿ ಮತ್ತು ಹಣ್ಣಿನ ಗಿಡಗಳ ಬೆಳವಣಿಗೆಯನ್ನು ತ್ವರಿತಗೊಳಿಸಲು ಹಣ್ಣಿನ ಮಾಗಾಣಿಕೆಯನ್ನು ತ್ವರಿತಗೊಳಿಸಲು ಎಥಿಲೀನಿನ ಉಪಯೋಗವಿದೆ.[೭][೮]
  • ಎಥಿಲೀನ್ ಮತ್ತು ಆಕ್ಸಿಜನ್ನಿನ ಮಿಶ್ರಣದ ಜ್ವಾಲೆಯನ್ನು ಬೆಸುಗೆ ಹಾಕಲು ಮತ್ತು ಲೋಹವನ್ನು ಕತ್ತರಿಸಲು ಉಪಯೋಗಿಸುತ್ತಾರೆ.[೯]

ಉಲ್ಲೇಖಗಳು ಬದಲಾಯಿಸಿ

  1. ETHYLENE | CAMEO Chemicals | NOAA. Cameochemicals.noaa.gov. Retrieved on 2016-04-24.
  2. Research and Markets. "The Ethylene Technology Report 2016 - Research and Markets". www.researchandmarkets.com. Retrieved 19 June 2016.
  3. "Production: Growth is the Norm". Chemical and Engineering News (PDF). 84 (28): 59–236. July 10, 2006. doi:10.1021/cen-v084n034.p059. {{cite journal}}: |format= requires |url= (help)
  4. "Propylene Production from Methanol". by Intratec, ISBN 978-0-615-64811-8.
  5. Zimmermann H, Walz R (2008). "Ethylene". Ullmann's Encyclopedia of Industrial Chemistry. Weinheim: Wiley-VCH. doi:10.1002/14356007.a10_045.pub3. ISBN 978-3527306732.
  6. "OECD SIDS Initial Assessment Profile — Ethylene" (PDF). inchem.org. Archived from the original (PDF) on 2015-09-24. Retrieved 2008-05-21.
  7. Arshad, Muhammad; Frankenberger, William (2002). Ethylene. Boston, MA: Springer. p. 289. ISBN 978-0-306-46666-3.
  8. Melton, Laurence, et al eds. (2019). Encyclopedia of Food Chemistry. Netherlands: Elsevier. p. 114. ISBN 978-0-12-814045-1. {{cite book}}: |first= has generic name (help)CS1 maint: multiple names: authors list (link)
  9. "Informational Bulletin". 12. California Fresh Market Advisory Board. June 1, 1976. {{cite journal}}: Cite journal requires |journal= (help)

ಬಾಹ್ಯ ಕೊಂಡಿಗಳು ಬದಲಾಯಿಸಿ

 
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ:
"https://kn.wikipedia.org/w/index.php?title=ಎಥಿಲೀನ್&oldid=1154851" ಇಂದ ಪಡೆಯಲ್ಪಟ್ಟಿದೆ