ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ
ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯವು ಕರ್ನಾಟಕ ರಾಜ್ಯದ ಕಾರವಾರ ಜಿಲ್ಲೆಯ ಹಳಿಯಾಳದಲ್ಲಿ 2004ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ದಿಂದ ಮಾನ್ಯತೆ ಹೊಂದಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಅದರಂತೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಕೊಡ ಮಾನ್ಯತೆ ನೀಡಿದೆ.
ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳ | |
---|---|
ಸ್ಥಾಪನೆ | 2004 |
ಸ್ಥಳ | ಹಳಿಯಾಳ, ಕಾರವಾರ, ಕರ್ನಾಟಕ |
ವಿದ್ಯಾರ್ಥಿಗಳ ಸಂಖ್ಯೆ | ೨೦೦೦ |
ಪದವಿ ಶಿಕ್ಷಣ | ೭೪೦ |
ಸ್ನಾತಕೋತ್ತರ ಶಿಕ್ಷಣ | ೧೨೦ |
ಅಂತರಜಾಲ ತಾಣ | http://vdrit.org/ |
ವಿಭಾಗಗಳು
ಬದಲಾಯಿಸಿಪದವಿ ವಿಭಾಗಗಳು
- ವಾಹನ ಎಂಜಿನಿಯರಿಂಗ್
- ಸಿವಿಲ್ ಎಂಜಿನಿಯರಿಂಗ್
- ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್
- ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್
- ವಿದ್ಯುನ್ಮಾನ ಮತ್ತು ಸಂವಹನ ಎಂಜಿನಿಯರಿಂಗ್
- ಯಾಂತ್ರಿಕ ಎಂಜಿನಿಯರಿಂಗ್
ಆವರಣ
ಬದಲಾಯಿಸಿಮಹಾವಿದ್ಯಾಲಯವು ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ.
ಗ್ರಂಥಾಲಯ
ಬದಲಾಯಿಸಿಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ.
ಪ್ರವೇಶ
ಬದಲಾಯಿಸಿದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಅದರಂತೆ ಬಿ.ಎಸ್ಸಿ , ಡಿಪ್ಲೊಮಾ, ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ.
ವಿದ್ಯಾರ್ಥಿವೇತನ
ಬದಲಾಯಿಸಿ- ಅರ್ಹತೆ ವಿದ್ಯಾರ್ಥಿವೇತನ
- ರಕ್ಷಣಾ ವಿದ್ಯಾರ್ಥಿವೇತನ
- ಎಸ್.ಸಿ/ಎಸ್.ಟಿ ವಿದ್ಯಾರ್ಥಿವೇತನ
- ಯೋಜನೆ ವಿದ್ಯಾರ್ಥಿವೇತನ
- ಆಯಾ ರಾಜ್ಯ ಸರ್ಕಾರದ ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
- ಮೆಟ್ರಿಕ್ ವಿದ್ಯಾರ್ಥಿ ವಿದ್ಯಾರ್ಥಿವೇತನ
- ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿವೇತನ
- ರಾಷ್ಟ್ರೀಯ ಸಾಲ ವಿದ್ಯಾರ್ಥಿವೇತನ
- ಮಾಜಿ ರಕ್ಷಣಾ ವಿದ್ಯಾರ್ಥಿವೇತನ
- ಅಂಗವಿಕಲರ ವಿದ್ಯಾರ್ಥಿವೇತನ
ವಿದ್ಯಾರ್ಥಿನಿಲಯಗಳು
ಬದಲಾಯಿಸಿ- ವಿದ್ಯಾರ್ಥಿ ನಿಲಯ
- ವಿದ್ಯಾರ್ಥಿನಿಯರ ನಿಲಯ
ಜೀವನ ಮಾರ್ಗದರ್ಶನ ಕೇಂದ್ರ
ಬದಲಾಯಿಸಿರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಂತ್ರಜ್ಞಾನ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡುಸುತ್ತವೆ.
ಬಾಹ್ಯ ಸಂಪರ್ಕಗಳು
ಬದಲಾಯಿಸಿವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯದ ಅಧಿಕೃತ ಅಂತರಜಾಲ ತಾಣ[ಶಾಶ್ವತವಾಗಿ ಮಡಿದ ಕೊಂಡಿ]