ವಿಶ್ವ ಗುಬ್ಬಚ್ಚಿಗಳ ದಿನ

ಮನೆಯಂಗಣದಲ್ಲಿನ ಗುಬ್ಬಚ್ಚಿಗಳು ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20 ದಿನವನ್ನು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ. ಭಾರತನೇಚರ್ ಫಾರೆವರ್ ಸೊಸೈಟಿಯ[] ಪ್ರಮುಖ ಆಸಕ್ತಿಯ ಮೇರೆಗೆ ಪ್ರಾರಂಭಗೊಂಡಿರುವ ಈ ಆಚರಣೆಗೆ, ಫ್ರಾನ್ಸಿನ ಇಕೋ-ಸಿಸ್ ಆಕ್ಷನ್ ಫೌಂಡೆಶನ್ ಮತ್ತು ವಿಶ್ವದ ಅನೇಕ ಸಂಸ್ಥೆಗಳು ಸಹಯೋಗ ನೀಡಿವೆ.ಸಂಸ್ಥೆಯ ನಿರ್ಮಾತೃ ಮೊಹಮ್ಮದ್ ದಿಲ್ವಾರ್ ಅವರು 2010ರಲ್ಲಿ ಗುಬ್ಬಚ್ಚಿಗಳ ದಿನವನ್ನು ಜಗತ್ತಿಗೆ ಪರಿಚಯಿಸಿದರು.

A female house sparrow feeding a fledgling
Female house sparrow feeding a fledgling
House Sparrow song and calls recorded at Cowley, Gloucestershire, England

ಪ್ರಪಂಚದಾದ್ಯಂತ

ಬದಲಾಯಿಸಿ

ಪ್ರತಿವರ್ಷ ಎನ್‌ಎಫ್‌ಎಸ್‌ಐ ವಿಶ್ವ ಗುಬ್ಬಚ್ಚಿಗಳ ದಿನವನ್ನು ಪ್ರಪಂಚದಾದ್ಯಂತ ಒಟ್ಟು 50 ರಾಷ್ಟ್ರಗಳಲ್ಲಿ ಆಚರಿಸುತ್ತಿದೆ

ಗುಬ್ಬಚ್ಚಿಗಳ ಅವಸಾನಕ್ಕೆ ಕಾರಣ

ಬದಲಾಯಿಸಿ
  • ಪ್ರಕೃತಿ ಸೌಂದರ್ಯವನ್ನು ಮೂಲೆಗುಂಪು ಮಾಡಿ ತಾಂತ್ರಿಕ ಬದುಕಿಗೆ ಜೋತುಬಿದ್ದಿರುವದು.
  • ಕೃಷಿಯಲ್ಲಿ ಕೀಟನಾಶಕಗಳ ಬಳಕೆ.
  • ಪ್ಯಾಕೇಟ್ ಆಹಾರ.
  • ಬದಲಾದ ಜೀವನಶೈಲಿ.ಇವೆಲ್ಲವೂ ಗುಬ್ಬಚ್ಚಿಗಳಿಗೆ ಆಹಾರದ ಕೊರತೆ ಎದುರಾಗುವಂತೆ ಮಾಡಿದ್ದಲ್ಲದೇ ಅವುಗಳ ಸಾವಿಗೆ ಕಾರಣವಾಗಿದೆ .[]

ವಾಸದ ಕೊರತೆ

ಬದಲಾಯಿಸಿ

ಹಿಂದಿನ ಮನೆಗಳು ಹೆಚ್ಚಿನದಾಗಿ ಹಂಚಿನ , ಹುಲ್ಲಿನ ಮನೆಗಳು. ಇವುಗಳು ಗುಬ್ಬಚ್ಚಿಗಳಿಗೆ ಹೇಳಿ ಮಾಡಿಸಿದ ವಾಸಸ್ಥಾನವಾಗಿದ್ದವು. ಆದರೆ ಇಂದಿನ ಮನೆಗಳ ನಿರ್ಮಾಣವೂ ಸಂಪೂರ್ಣವಾಗಿ ಆಧುನಿಕರಣಕ್ಕೆ ಒಳಪಟ್ಟಿರುವದು. ಇಂತಹ ಮನೆಗಳಲ್ಲಿ ಗುಬ್ಬಚ್ಚಿಗಳು ಗೂಡಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗೂಡಿಲ್ಲದೇ ಗುಬ್ಬಚ್ಚಿಗಳು ಬಿಸಿಲು, ಮಳೆ , ಗಾಳಿಗೆ ತತ್ತರಿಸುತ್ತಿದ್ದು ಅಳಿವಿನಂಚಿಗೆ ಸಾಗುತ್ತಿವೆ.

ಎನ್‌ಎಫ್‌ಎಸ್‌ಐನ ಜಾಗೃತಿ ಅಭಿಯಾನ

ಬದಲಾಯಿಸಿ

ಎನ್‌ಎಫ್‌ಎಸ್‌ಐ ಇದು ಸ್ಥಾಪನೆಯಾಗಿದ್ದು 2005ರಲ್ಲಿ. ಗುಬ್ಬಚ್ಚಿಗಳು ಅವಸಾನಕ್ಕೆ ಹೋಗುತ್ತಿರುವುದನ್ನರಿತ ಎನ್‌ಎಫ್‌ಎಸ್‌ಐ ಇವುಗಳ ಬಗ್ಗೆ ಅರಿವು ಮೂಡಿಸಲು ಹಾಗೂ ವಾಸಸ್ಥಾನದ ಸಮಸ್ಯೆ ನಿವಾರಿಸಲು ಗೂಡುಗಳನ್ನು ಹಂಚಿಕೆ ಮಾಡುತ್ತಿದೆ.[]

ಉಲ್ಲೇಖಗಳು

ಬದಲಾಯಿಸಿ
  1. ಇಂದು ವಿಶ್ವ ಗುಬ್ಬಚ್ಚಿಗಳ ದಿನ: ಗುಬ್ಬಚ್ಚಿಗಳ ಬದುಕನ್ನು ಅವಸಾನಕ್ಕೆ ತಳ್ಳಿದ ಮಾನವ ಜೀವನ ಶೈಲಿ ,prajavani.net
  2. Why you should celebrate World Sparrow Day March 20, 2015 by Simon Griffith, The Conversation
  3. When And Why Is World Sparrow Day Celebrated? , worldatlas.com