ಶಿಖಂಡಿ ಎಂಬುದು ಮಹಾಭಾರತದಲ್ಲಿ ಬರುವ ಒಂದು ವಿಶಿಷ್ಟ ಪಾತ್ರ. ಪಾಂಚಾಲ ದೇಶದ ರಾಜನಾದ ದ್ರುಪದನ ಮಗಳು. ಆಕೆಯ ಅಣ್ಣ ದೃಷ್ಟದ್ಯುಮ್ನ. ಮೂಲತಃ ಹೆಣ್ಣಾಗಿ ಹುಟ್ಟಿದ್ದರೂ ತನ್ನ ಗುಣ, ಶೌರ್ಯ, ವರ್ತನೆಗಳಿಂದ ಗಂಡಸೆಂದು ಬಿಂಬಿಸಲ್ಪಟ್ಟ ಪಾತ್ರವಿದು.

Kripa fights with Shikhandi (top right).
ಚಿತ್ರ:Bhishma refuses to fight with Shikandi.jpg
ಶಿಖಂಡಿಯೊಂದಿಗೆ ಹೋರಾಡಲು ನಿರಾಕರಿಸುತ್ತಿರು ಭೀಷ್ಮ

ಹಿನ್ನೆಲೆ ಸಂಪಾದಿಸಿ

  • ಭೀಷ್ಮ ತನ್ನ ತಮ್ಮನಾದ ವಿಚಿತ್ರವೀರ್ಯನ ಮದುವೆಗೆಂದು ಅಂಬೆ, ಅಂಬಿಕಾ, ಅಂಬಾಲಿಕ ಎಂಬ ಮೂವರು ರಾಜಕುಮಾರಿಯನ್ನು ಅಪಹರಿಸುತ್ತಾನೆ. ಅವರಲ್ಲಿ ಅಂಬೆ (ಅಂಬಾ) ತಾನು ಮತ್ತೊಬ್ಬ ವ್ಯಕ್ತಿಯನ್ನು ಈಗಾಗಲೇ ಪ್ರೀತಿಸಿರುವದಾಗಿಯೂ, ತನ್ನನ್ನು ಬಿಟ್ಟು ಬಿಡಬೇಕೆಂದೂ ಭೀಷ್ಮನಲ್ಲಿ ವಿನಂತಿಸಿಕೊಳ್ಳುತ್ತಾಳೆ. ಮನ ಕರಗಿದ ಭೀಷ್ಮ ಅಂಬೆಯನ್ನು ಆಕೆಯ ಪ್ರಿಯಕರನಿಗೋಸ್ಕರ ಕಳಿಸಿಕೊಡುತ್ತಾನೆ.
  • ಆದರೆ ಪ್ರಿಯಕರ ಅಂಬೆಯನ್ನು ತಿರಸ್ಕರಿಸುತ್ತಾನೆ. ಈಗ ಅಂಬೆಯದು ವಿಚಿತ್ರ ಪರಿಸ್ಥಿತಿ. ಇತ್ತ ಪ್ರಿಯಕರನಿಂದಲೂ ತಿರಸ್ಕೃತಗೊಂಡು ಅತ್ತ ವಿಚಿತ್ರವೀರ್ಯನನ್ನೂ ಮದುವೆಯಾಗದೇ ಕಂಗೆಡುತ್ತಾಳೆ. ಹತಾಶೆಗೊಂಡ ಅಂಬೆ ತೀರ ಕೊನೆಗೆ ಭೀಷ್ಮನನ್ನೇ ಮದುವೆಯಾಗುವಂತೆ ಒತ್ತಾಯಿಸು ತ್ತಾಳೆ. ಭೀಷ್ಮ ಒಪ್ಪುವುದಿಲ್ಲ. ಹೀಗೆ ಎಲ್ಲ ಕಡೆಗಳಿಂದಲೂ ತಿರಸ್ಕೃತಗೊಂಡ ಅಂಬೆ ಆಗ ಕೋಪದಿಂದ ಭೀಷ್ಮನೆದುರು ಶಪಥಗೈಯುತ್ತಾಳೆ.

ಅಂಬೆಯ ಶಪಥ ಸಂಪಾದಿಸಿ

ಮುಂದಿನ ಜನ್ಮದಲ್ಲಿ ನಾನೇ ನಿನ್ನ ಸಾವಿಗೆ ಕಾರಣಳಾಗುವೆ ಎಂದು ಭೀಷ್ಮನೆಡೆಗೆ ಕೋಪದಿಂದ ಗರ್ಜಿಸುತ್ತ ತನ್ನನ್ನು ತಾನು ಅಗ್ನಿಗೆ ಅರ್ಪಿಸಿಕೊಳ್ಳುತ್ತಾಳೆ. ಹಾಗೆ ಆತ್ಮಾಹುತಿ ಮಾಡಿಕೊಂಡ ಅಂಬೆ ದ್ರುಪದನ ಮಗಳಾಗಿ ಜನಿಸುತ್ತಾಳೆ.ಆಕೆಯ ಹುಟ್ಟಿನ ಸಮಯದಲ್ಲಿ ಅಶರೀರ ವಾಣಿ ಯೊಂದು ಈಕೆಯ ಹಿನ್ನೆಲೆಯನ್ನು ತಂದೆ ದ್ರುಪದನಿಗೆ ತಿಳಿಸುತ್ತದೆ.

ಭೀಷ್ಮನಿಗೆದುರಾಗಿ ಸಂಪಾದಿಸಿ

  • ಆ ಕಾರಣಕ್ಕೆ ಹೆಣ್ಣು ಮಗುವನ್ನು ಗಂಡಸಿನಂತೆ ಬೆಳೆಸುವಂತೆ ಸೂಚಿಸುತ್ತದೆ. ಹಾಗಾಗಿ ಶಿಖಂಡಿ ಹೆಣ್ಣಾದರೂ ಗಂಡಸಿನಂತೆ ಬೆಳೆಯುತ್ತದೆ. ಮುಂದೆ ಕುರುಕ್ಷೇತ್ರ ಯುದ್ಧದ ಸಮಯದಲ್ಲಿ ಕೃಷ್ಣ ಭೀಷ್ಮನಿಗೆದುರಾಗಿ ಶಿಖಂಡಿಯನ್ನೇ ತಂದು ನಿಲ್ಲಿಸುತ್ತಾನೆ. ಭೀಷ್ಮ ಹೆಣ್ಣಿನ ಎದುರು ಯುದ್ಧ ಮಾಡಲಾರೆ ಎಂದು ಶಸ್ತ್ರ ಕೆಳಗಿಡುತ್ತಾನೆ.
  • ಆಗ ಕೃಷ್ಣ ಅರ್ಜುನನಿಗೆ ಮೋಸದಿಂದ ಭೀಷ್ಮನೊಂದಿಗೆ ಹೋರಾಡುವಂತೆ ಪ್ರೆರೇಪಿಸಿ ಭೀಷ್ಮನನ್ನು ಹೊಡೆದುರುಳಿಸುತ್ತಾನೆ. ಹೀಗೆ ಭೀಷ್ಮನ ಸಾವಿಗೆ ಕಾರಣವಾಗುವುದರ ಮೂಲಕ ಅಂಬೆಯು ಶಿಖಂಡಿಯಾಗಿ ತನ್ನ ಶಪಥ ಪೂರೈಸಿಕೊಳ್ಳುತ್ತಾಳೆ. ಶಿಖಂಡಿ ಎಂದರೆ 'ಉಭಯ ಲಿಂಗಿ'ಗಳು ಎಂದು ಹೇಳಲಾಗುತ್ತದೆ.


ಟೆಂಪ್ಲೇಟು:ಮಹಾಭಾರತ ಕಥೆ

"https://kn.wikipedia.org/w/index.php?title=ಶಿಖಂಡಿ&oldid=779450" ಇಂದ ಪಡೆಯಲ್ಪಟ್ಟಿದೆ