ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ


ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆs.k.d.r.d.p. "ಹನಿ ಹನಿ ಸೇರಿದರೆ ಹಳ್ಳ ತೆನೆ ತೆನೆ ಕೂಡಿದರೆ ಬಳ್ಳ" ಎಂಬ ಆಡು ಮಾತಿಗೆ ಮತ್ತೊಂದು ಹೆಸರು "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ". ೧೯೮೨ ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಗೆ ಚಾಲನೆ ನೀಡಲಾಯಿತು.ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸಾದ ಯೋಜನೆ ಇಂದು ಕರ್ನಾಟಕದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿದೆ. ಗ್ರಾಮಾಭಿವ್ರದ್ದಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ.ಗಾಂದೀಜಿಯವರ ಗ್ರಾಮ ರಾಜ್ಯದ ಪರಿಕಲ್ಪನೆ ಈ ಯೋಜನೆಯಿಂದ ಸಾಕಾರಗೊಳ್ಳುತ್ತಿದೆ. ಕೃಷಿ ಮೇಳ,ತರಬೇತಿ,ಮಾನವ ಸಂಪನ್ಮೂಲ ಬಳಕೆ ಮುಂತಾದ ವಿಷಯಗಳು ಯೋಜನೆಯ ಚಿಂತನೆಯ ವಿಷಯ. ಮಾನವ ಸಂಪನ್ಮೂಲ ಅಭಿವ್ರದ್ದಿಗಾಗಿ ಗ್ರಾಮಾಭಿವ್ರದ್ದಿ ಯೋಜನೆ ದೊಡ್ಡ ಕಾರ್ಯಕರ್ತರ ಪಡೆಯನ್ನೇ ಹೊಂದಿದೆ,ಪ್ರಸಕ್ತ ೩೮೫೦ ಕಾರ್ಯಕರ್ತರು ,೧೩೮೫೦೦ ಕುಟುಂಬಗಳಿಗೆ ಸೇವೆ ಒದಗಿಸಿದ ಹಿರಿಮೆ ಯೋಜನೆಗೆ ಸಲ್ಲುತ್ತದೆ.೧೧೮೫೦೦ ಸ್ವಸಹಾಯ ಸಂಘಗಳು ಕೆಲಸ ಮಾಡುತ್ತಿವೆ.೬೦೦೦ ಒಕ್ಕೂಟಗಳು ರಚನೆಯಾಗಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಲಂಡನ್‌ನ ಪ್ರತಿಷ್ಠಿತ ‘ಆಶ್ಡೆನ್ ಸಂಸ್ಥೆಯು ನೀಡುವ "ಜಾಗತಿಕ ಹಸಿರು ಆಸ್ಕರ್ "ಎಂದೇ ಪರಿಗಣಿಸಲಾದ 2012ರ "ಆಶ್ಡೆನ್ ಸುಸ್ಥಿರ ಇಂಧನ ಕಾರ್ಯಕ್ರಮ ಪ್ರಶಸ್ತಿ’ಗೆ ಪಾತ್ರವಾಗಿದೆ."ನಮನ"