ಶ್ವೇತಾಶ್ವತರೋಪನಿಷತ್
ಶ್ವೇತಾಶ್ವತರೋಪನಿಷತ್ ಯಜುರ್ವೇದದ ತೈತ್ತೀರಿಯ ಶಾಖೆಗೆ ಸೇರಿದ ಉಪನಿಷತ್ತು.ಪ್ರಾಚೀನವೂ,ಸತ್ವಪೂರ್ಣವೂ ಆಗಿರುತ್ತದೆ.ಶ್ವೇತಾಶ್ವತರ ಮಹರ್ಷಿಗಳು ಇದನ್ನು ಪ್ರಕಟಪಡಿಸಿರುವುದರಿಂದ ಇದಕ್ಕೆ ಈ ಹೆಸರು ಬಂದಿದೆ.ಇದರಲ್ಲಿ ಆರು ಅಧ್ಯಾಯಗಳೂ ೧೧೩ ಮಂತ್ರಗಳೂ ಇವೆ. ಪದ್ಯಮಯವಾಗಿದೆ. ಸಹನಾವವತು ಎಂಬುದು ಇದರ ಶಾಂತಿಮಂತ್ರ, ವಿಚಾರಪುರಿತವಾದ 113 ಮಂತ್ರಗಳಿವೆ. ಜಗತ್ಕಾರಣವಾವುದು ? ನಾವು ಎಲ್ಲಿಂದ ಬಂದೆವು ? ಯಾರ ಕಟ್ಟಳೆಗೊಳಗಾಗಿ ಸುಖ ದುಃಖಗಳುಂಟಾಗುವುವು ? ಎಂಬ ಪ್ರಶ್ನೆಗಳ ಮಾಲೆಯಿಂದ ಇದು ಪ್ರಾರಂಭವಾಗಿದೆ. ಜೀವ, ಬ್ರಹ್ಮರ (ಜ್ಞ, ಅಜ್ಞ) ವಿಚಾರ ಪ್ರಸ್ತುತವಾಗಿದೆ. 2ನೆಯ ಅಧ್ಯಾಯದ ಯೋಗದ, ಯೋಗಾನುಭವದ ನಿರೂಪಣೆ ಇದೆ. ಇದು ಪಾತಂಜಲಯೋಗದ ಪೀಠಿಕೆಯಂತಿದೆ. 3-4ನೆಯ ಅಧ್ಯಾಯಗಳಲ್ಲಿ ಬ್ರಹ್ಮತತ್ತ್ವ, ಆತ್ಮತತ್ತ್ವಗಳ ಸ್ವರೂಪ ನಿರೂಪಣೆ ಇದೆ. ಬ್ರಹ್ಮವನ್ನು ಮಹೇಶ್ವರ ಎಂದು ಕರೆಯಲಾಗಿದೆ. 5ನೆಯ ಅಧ್ಯಾಯದಲ್ಲಿ ಕಪಿಲ ಋಷಿಯ ಸಾಂಖ್ಯತತ್ತ್ವದ ಉಲ್ಲೇಖವಿದೆ. ಆದರೆ ನಿರೀಶ್ವರ ಸಿದ್ಧಾಂತದ ಛಾಯೆ ಇಲ್ಲ. ಏಕೈಕ ಕಾರಣನೂ ಸರ್ವಾಧಿಪನೂ ಆದ ಅದ್ವಿತೀಯನನ್ನು ಅರಿಯುವುದರಿಂದ, ಮುಕ್ತಿ ಎಂದು ಹೇಳಲಾಗಿದೆ. 6ನೆಯ ಅಧ್ಯಾಯದಲ್ಲಿ ಕರ್ಮಸಿದ್ಧಾಂತದ ನಿರೂಪಣೆ ಇದ್ದು ಕರ್ಮಕ್ಷಯದಿಂದ ಮೋಕ್ಷಪ್ರಾಪ್ತಿ ಎಂದೂ ಮಹೇಶ್ವರ ಕರ್ಮಚಕ್ರದಿಂದ ಹೊರಗಿರುವ, ಕರ್ಮಾಧ್ಯಕ್ಷನೆಂದೂ ಶ್ವೇತಾಶ್ವತರ ಉಪದೇಶಿಸಿದ್ದಾನೆ. ಪರಮಾತ್ಮನ ಸಾಕ್ಷಾತ್ಕಾರಕ್ಕೆ ಎಲ್ಲಕ್ಕಿಂತಲೂ ಮೊದಲಾಗಿ ಗುರುಭಕ್ತಿ ಇರಬೇಕೆಂಬುದನ್ನು ಕೊನೆಯಲ್ಲಿ ಒತ್ತಿಹೇಳಲಾಗಿದೆ.
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ |
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ |
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ |
ಆಧಾರ
ಬದಲಾಯಿಸಿ೧.ಹಿಂದೂ ಧರ್ಮದ ಪರಿಚಯ:ಎ.ಕೆ.ಶಂಕರನಾರಾಯಣ ಭಟ್
ಬಾಹ್ಯ ಸಂಪರ್ಕಗಳು
ಬದಲಾಯಿಸಿ- Read a simple translation of Shvetashvatara Upanishad
- Sri Aurobindo, The Upanishads [೧]. Sri Aurobindo Ashram, Pondicherry. 1972