ಸಕ್ಕರೆಬೈಲು ಆನೆ ತರಬೇತಿ ಶಿಬಿರದ ಒಂದು ಆನೆ

ಸಕ್ಕರೆಬೈಲು (ಸಕ್ರೆಬೈಲು) ಶಿವಮೊಗ್ಗ ಜಿಲ್ಲೆಯಲ್ಲಿರುವ ಆನೆ ತರಬೇತಿ ಶಿಬಿರ.

ಗಾಜನೂರು ಅಣೆಕಟ್ಟೆಯ ಸಮೀಪದಲ್ಲಿರುವ ಈ ಶಿಬಿರದಲ್ಲಿ ಆನೆಗಳ ತರಬೇತಿ ಹಾಗೂ ಪ್ರವಾಸಿಗಳಿಗೆ ಆನೆ ಸವಾರಿ ಮೊದಲಾದ ಚಟುವಟಿಕೆಗಳು ನಡೆಯುತ್ತವೆ. ಪ್ರತಿ ದಿನ ಬೆಳಿಗ್ಗೆ ೮ ರಿಂದ ೧೧ ರ ವರೆಗೆ ಪ್ರವಾಸಿಗಳಿಗೆ ಈ ಶಿಬಿರ ತೆರೆದಿರುತ್ತದೆ. ಈ ಸಮಯದ ನಂತರ ಆನೆಗಳನ್ನು ಕಾಡಿನಲ್ಲಿ ಬಿಡಲಾಗುತ್ತದೆ. ರಾತ್ರಿಯಿಡಿ ಕಾಡಿನಲ್ಲಿಯೇ ಇರುವ ಆನೆಗಳನ್ನು ಮತ್ತೆ ಮುಂಜಾನೆ ಶಿಬಿರಕ್ಕೆ ಕರೆತರಲಾಗುತ್ತದೆ.