ಸದಸ್ಯರ ಚರ್ಚೆಪುಟ:DEEPA96/sandbox
ರೋಗ ಓಡಿಸುವ ತುಳಸಿ ಭಾರತೀಯ ಸಂಸ್ಕೃತಿಯಲ್ಲಿ ತುಳಸಿಯ ಪಾತ್ರ ಮಹತ್ವದ್ದು.ತುಳಸಿಕಟ್ಟೆಯನ್ನು ಹೊಂದಿರದ ಹಿಂದೂಗಳ ಮನೆಯೇ ಇಲ್ಲ.ಅಂತಹ ತುಳಸಿ ಪವಿತ್ರವಾದದ್ದು ಮಾತ್ರವಲ್ಲ,ರೋಗ ನಿರೋಧಕ ಶಕ್ತಿ ಸೇರಿದಂತೆ ಆರೋಗ್ಯಕ್ಕೆ ಅನುಗುಣವಾದದ್ದು ಎಂದು ಹಲವು ಸಂಶೋಧನೆಗಳು ಹೇಳಿವೆ. ಹಿಂದೂ ಧಾರ್ಮಿಕ ಸಂಪ್ರದಾಯದ ಪ್ರಮುಖ ಅಂಗವಾಗಿರುವ ತುಳಸಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.ಹಿಂದೂಗಳು ಇದನ್ನು ಅತ್ಯಂತ ಪವಿತ್ರವಾಗಿ ಕಾಣುತ್ತಾ ಪೂಜೆ ಮಾಡುವುದು ಸಾಮಾನ್ಯ.ತುಳಸಿಯನ್ನು ಸ್ಪರ್ಶಿಸುವುದರಿಂದ ಪಾಪಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಮಾತ್ರವಲ್ಲ,ಹಲವು ರೋಗಗಳು ಶಮನವಾಗುತ್ತದೆ ನಾಶವಾಗುತ್ತದೆ ಎಂಬ ನಂಬಿಕೆಯೂ ಬೆಳೆದು ಬಂದಿದೆ. ಮುಖ್ಯವಾಗಿ ತುಳಸಿಯಲ್ಲಿ ಎರಡು ವಿಧಗಳಿವೆ.ಕರಿ ಅಥವಾ ಶ್ಯಾಮ ವರ್ಣದ ಕೃಷ್ಣ ತುಳಸಿ ಮತ್ತು ತಿಳಿಬಣ್ಣದ ರಾಮ ತುಳಸಿ. ಸಾಮಾನ್ಯವಾಗಿ ಪೂಜೆಗೆ ಬಳಸುವ ಕೃಷ್ಣ ತುಳಸಿಯು ಹಲವು ವೈದ್ಯಕೀಯ ಗುಣಗಳನ್ನು ಹೊಂದಿವೆ.ಈ ಗಿಡಮೂಲಿಕೆಯು ಶೀತ,ತಲೆನೋವು,ಅಜೀರ್ಣ,ಮಲೇರಿಯಾ ಮತ್ತು ಹೃದಯ ಸಂಬಂಧದ ಸಮಸ್ಯೆಗಳಿಗೆ ಔಷಧಿಯಾಗಿ ಬಳಸಲಾಗುತ್ತದೆ.ಅಲ್ಲದೆ ಶರೀರದಲ್ಲಿರುವ ಹಲವು ವಿಷಕ್ರಿಮಿಗಳನ್ನು ಇವು ನಾಶ ಮಾಡುತ್ತದೆ.ದೇವಸ್ಥಾನ,ಯಾತ್ರಸ್ಥಳ ಮತ್ತು ಸಂಪ್ರದಾಯಸ್ಥ ಹಿಂದೂ ಕುಟುಂಬದಲ್ಲಿ ಇವುಗಳು ಹೆಚ್ಚಾಗಿ ಕಾಣ ಸಿಗುತ್ತದೆ.ಇವುಗಳಿಗೆ ಒತ್ತಡ ನಿವಾರಿಸುವ ಶಕ್ತಿಯು ಇದೆ.ತುಳಸಿಯ ಎಲೆಗಳನ್ನು ಹಸಿಯಾಗಿ ಅಥವಾ ಒಣಗಿಸಿ ಪುಡಿಯ ರೂಪದಲ್ಲಿ ಅಥವಾ ಪಾನೀಯ ರೂಪದಲ್ಲಿ ಕುಡಿಯಲಾಗುತ್ತಿದೆ. ಆಯುರ್ವೇದದ ಪ್ರಕಾರ ಹಂದಿಜ್ವರ ನಿವಾರಣೆಗೆ ತುಳಸಿ ರಾಮಬಾಣವಂತೆ.ಇದರಲ್ಲಿರುವ ಔಷಧೀಯ ಗುಣಗಳು ಹಂದಿಜ್ವರದ ರೋಗಾಣುಗಳನ್ನು ಶರೀರಕ್ಕೆ ಪ್ರವೇಶಿಸದಂತೆ ರಕ್ಷಿಸುತ್ತದೆಯಂತೆ.ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ತುಳಸಿ ವೃದ್ಧಿಪಡಿಸುತ್ತದೆ.ಅಲ್ಲದೆ ಹಂದಿಜ್ವರ ರೋಗಾಣುಗಳನ್ನು ಹತ್ತಿಕ್ಕುವ ಗುಣ ತುಳಸಿಯಲ್ಲಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಡುತ್ತಾರೆ.ಆರೋಗ್ಯದ ದೃಷ್ಟಿಕೋನದಿಂದ ಪ್ರತಿದಿನ ೭ ರಿಂದ ೮ ತುಳಸಿ ಎಲೆಗಳನ್ನು ತಿನ್ನುವುದು ಉತ್ತಮ.ಇದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಲ್ಲದೆ ಬಾಯಿಯ ದುರ್ಗಂಧವು ಕೂಡಾ ನಿವಾರಣೆಯಾಗುತ್ತದೆ. ದಿನ ನಿತ್ಯ ತುಳಸಿ ಸೇವನೆಯಿಂದ ಅಡ್ಡ ಪರಿಣಾಮಗಳೇನು ಇಲ್ಲ.ಜ್ವರ,ವಿಧಾಮ ಶೀತ,ಶ್ವಾಸಕೋಶದ ಸೋಂಕು,ಕೆಮ್ಮು ಮತ್ತು ನೆಗಡಿ ಹೋಗಲಾಡಿಸಲು ಇದರಿಂದ ಸಾಧ್ಯ.ತುಳಸಿ ಕಷಾಯ ಕುಡಿದರೆ ದೇಹ ಸದೃಢವಾಗುವುದರೊಂದಿಗೆ ಹೊಟ್ಟೆ ಸಂಬಂಧಿ ರೋಗಗಳನ್ನು ದೂರವಿರಿಸಬಹುದು.ತುಳಸಿ ಎಲೆಯ ರಸವನ್ನು ಎಣ್ಣೆಯಲ್ಲಿ ಕಾಯಿಸಿ ತಲೆಗೆ ಹಚ್ಚುವುದರಿಂದ ತಲೆಯಲ್ಲಿನ ಹೇನು,ಹೊಟ್ಟು ಬರುವಿಕೆ ಕೂಡ ನಿವಾರಣೆಯಾಗುತ್ತದೆ.ಹಾಗೆಯೇ ಹಲವು ವಿಧದ ಚರ್ಮ ಸಂಬಂಧಿ ರೋಗಗಳಿಂದಲೂ ನಿವಾರಣ್ರ ಮಾಡುತ್ತದೆ.ಇದರಿಂದ ಚರ್ಮ ಮೃದುವಾಗುವುದಲ್ಲದೆ ಅಂದವಾಗುತ್ತದೆ.ಮನೆ ಪರಿಸರದಲ್ಲಿ ತುಳಸಿ ಗಿಡಗಳನ್ನು ಬೆಳೆಸುವ ಮೂಲಕ ಸೊಳ್ಳೆಗಳನ್ನು ದೂರವಿರಿಸಬಹುದು. ಒಟ್ಟಿನಲ್ಲಿ ಉತ್ತಮ ಆರೋಗ್ಯಕ್ಕಾಗಿ ತುಳಸಿ ಸೇವನೆ ಉತ್ತಮ.
Start a discussion about ಸದಸ್ಯ:DEEPA96/sandbox
Talk pages are where people discuss how to make content on ವಿಕಿಪೀಡಿಯ the best that it can be. You can use this page to start a discussion with others about how to improve ಸದಸ್ಯ:DEEPA96/sandbox.