ನಮಸ್ಕಾರ Desai Gururaj


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೪:೧೫, ೩೦ ಸೆಪ್ಟೆಂಬರ್ ೨೦೧೯ (UTC)

ನಾನು SFI ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ವಿದ್ಯಾರ್ಥಿಗಳ ಏಳಿಗೆಗಾಗಿ ಪೂರ್ಣಾವಧಿ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ.ಸರಕಾರಿ ಶಾಲೆಗಳು ಬಲಗೊಳ್ಳಬೇಕು, ಸರ್ವರಿಗೂ ಶಿಕ್ಷಣ - ಉದ್ಯೋಗ ಸಿಗಬೇಕು ಎಂಬ SFI ನ ಆಶಯದ ಜಾರಿಗಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

ಹೋರಾಟದ ಜೊತೆಯಲ್ಲಿ ಬರವಣಿಗೆಗೂ ಅಂಟಿಕೊಂಡಿದ್ದೇನೆ. ರಾಜ್ಯದ ಪ್ರಮುಖ ಪತ್ರಿಕೆಗಳಾದ ಪ್ರಜಾವಾಣಿ, ಕನ್ನಡಪ್ರಭ, ಉದಯವಾಣಿ, ಲೋಕದರ್ಶನ, ವಿಜಯಕರ್ನಾಟಕ, ಸಂಯುಕ್ತ ಕರ್ನಾಟಕ ಪತ್ರಿಕೆಗಳಿಗೆ ಲೇಖನ, ಕವನ, ಕಥೆಗಳನ್ನು ಬರೆಯುತ್ತಿರುತ್ತೇನೆ.

ವಿಕಿಪೀಡಿಯದಲ್ಲಿ ಲೇಖನ ಬರೆಯುವ ಬಗ್ಗೆ

ಬದಲಾಯಿಸಿ

ವಿಕಿಪೀಡಿಯದಲ್ಲಿ ನಿಮ್ಮ ಮೊದಲನೆಯ ಲೇಖನವನ್ನು ಬರೆದಿದ್ದಕ್ಕೆ ಧನ್ಯವಾದಗಳು. ನೀವು ಲೇಖನಗಳನ್ನು ಬರೆಯುವಾಗ ಅದು ವಿಕಿಪೀಡಿಯ ಮಾದರಿಯಲ್ಲಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಉದಾಹರಣೆಗೆ ನೀವು ಇತ್ತೀಚೆಗೆ ಬರೆದ ಲೇಖನ ವಿಕಿಪೀಡಿಯದ ಲೇಖನದ ಮಾದರಿಯಲ್ಲಿ ಇಲ್ಲ. ಹೈದರಾಬಾದ್ ಕರ್ನಾಟಕ ಎಂಬ ಲೇಖನ ವಿಕಿಪೀಡಿಯದಲ್ಲಿ ಈಗಾಗಲೇ ಇದೆ. ಮತ್ತು ವಿಕಿಪೀಡಿಯದಲ್ಲಿ ಲೇಖನ ಬರೆಯುವಾಗ ನಿಮ್ಮ ಹೆಸರು, ಮೊಬೈಲ್ ಸಂಖ್ಯೆಗಳನ್ನು ಸೇರಿಸುವಂತಿಲ್ಲ. ಉತ್ತಮ ಲೇಖನವನ್ನು ಹೇಗೆ ರಚಿಸಬಹುದು ಎಂಬ ಬಗ್ಗೆ ಒಂದು ಕಿರು ಮಾಹಿತಿ ಇಲ್ಲಿದೆ. ಇನ್ನೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ದಯವಿಟ್ಟು ನಮ್ಮನ್ನು ಸಂಪರ್ಕಿಸಿ. --ಗೋಪಾಲಕೃಷ್ಣ (ಚರ್ಚೆ) ೦೮:೩೬, ೩೦ ಸೆಪ್ಟೆಂಬರ್ ೨೦೧೯ (UTC)