ಸದಸ್ಯರ ಚರ್ಚೆಪುಟ:Sandesh Chilukuri/ನನ್ನ ಪ್ರಯೋಗಪುಟ

ಮಂಗಳೂರು (ತುಳು: ಕುಡ್ಲ; ಕೊಂಕಣಿ: ಕೊಡಿಯಾಲ್; ಬ್ಯಾರಿ: ಮೈಕಾಲ; ಆಂಗ್ಲ: ಮ್ಯಾಂಗಲೋರ್; ಮಲಯಾಳಂ: ಮಂಗಲಾಪುರಂ) ಕರ್ನಾಟಕದ ನೈಋತ್ಯದಲ್ಲಿರುವ ಪ್ರಮುಖ ರೇವು ಪಟ್ಟಣ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದ ತೀರದಲ್ಲಿರುವ ಇದು ತನ್ನ ಪೂರ್ವದಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ. ಮಂಗಳೂರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರ. ಅರಬ್ಬೀ ಸಮುದ್ರದ ಬಂದರಾಗಿ ಅಭಿವೃದ್ಧಿಪಡಿಸಲಾದ ಇದು ಪ್ರಸ್ತುತ ಭಾರತದ ಪ್ರಮುಖ ಬಂದರುಗಳಲ್ಲಿ ಒಂದಾಗಿದೆ. ನೇತ್ರಾವತಿ ಮತ್ತು ಗುರುಪುರ ನದಿಗಳಿಂದುಂಟಾದ ಹಿನ್ನೀರಿನ ತಟದಲ್ಲಿರುವ ಈ ನಗರವು ಭಾರತದ ೭೫ ಪ್ರತಿಶತ ಕಾಫಿ ಮತ್ತು ಗೋಡಂಬಿ ರಫ್ತನ್ನು ನಿರ್ವಹಿಸುತ್ತದೆ.

ಮಂಗಳೂರು ತನ್ನ ದೇವಸ್ಥಾನಗಳಿಗೆ, ಕಡಲತೀರಗಳಿಗೆ ಹಾಗೂ ಕೈಗಾರಿಕೆಗಳಿಗೆ ತುಂಬಾ ಹೆಸರುವಾಸಿಯಾಗಿದೆ. ಇಲ್ಲಿನ ಪ್ರಮುಖ ಭಾಷೆಗಳು ತುಳು, ಕೊಂಕಣಿ, ಕನ್ನಡ ಮತ್ತು ಬ್ಯಾರಿ ಭಾಷೆ. ಈ ಪ್ರದೇಶವು ಇಲ್ಲಿನ ಪ್ರಮುಖ ಗುಣಲಕ್ಷಣವಾದ ತೆಂಗಿನ ಮರಗಳು, ಜೊತೆಗೆ ಹೊರಳುವ ಪರ್ವತಶ್ರೇಣಿಗಳು, ಸಮುದ್ರಕ್ಕೆ ಹರಿಯುವ ನದಿ ಹೊಳೆಗಳು ಹಾಗೂ ಎಲ್ಲೆಲ್ಲೂ ಕಾಣುವ ಇಲ್ಲಿನ ಹಂಚಿನ ಛಾವಣಿಯ ಕಟ್ಟಡಗಳಿಂದ ತನ್ನ ವಿಶಿಷ್ಟತೆಯನ್ನು ಪಡೆದುಕೊಂಡಿದೆ. ಲ್ಯಾಟರೈಟ್ ಕಲ್ಲಿನಿಂದ ನಿರ್ಮಿತ, ಸ್ಥಳೀಯ ಗಟ್ಟಿ ಕೆಂಪು ಜೇಡಿಮಣ್ಣಿನಿಂದ ತಯಾರಿತ ಮಂಗಳೂರು ಹಂಚುಗಳ ಮನೆಗಳು ಇಲ್ಲಿ ಸಾಮಾನ್ಯ.ಪುರಾತನ ಮನೆಗಳು ಸಾಮನ್ಯವಾಗಿ ವಿಸ್ತಾರವಾದ ಮರದ ಕೆತ್ತನೆಗಳನ್ನು ಹೊಂದಿರುತ್ತವೆ.ಆಸ್ಟ್ರೇಲಿಯ ದೇಶದ ವಿಕ್ಟೋರಿಯ ರಾಜ್ಯದಲ್ಲಿಯೂ ಮಂಗಳೂರು ಎಂಬ ಹೆಸರಿನ ಒಂದು ಊರು ಇದೆ.

Start a discussion about ಸದಸ್ಯ:Sandesh Chilukuri/ನನ್ನ ಪ್ರಯೋಗಪುಟ

Start a discussion
Return to the user page of "Sandesh Chilukuri/ನನ್ನ ಪ್ರಯೋಗಪುಟ".