ಕಿತ್ತಳೆಯ ಉಪಯೋಗಗಳು

ಕಿತ್ತಳೆ ಭಾರತದಲ್ಲಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಎಲ್ಲರಿಗೂ ಪ್ರಿಯವಾದ ಹಣ್ಣು. ಸಿಟ್ರಸ್ ಹಣ್ಣುಗಳ ಗುಂಪಿಗೆ ಸೇರಿದ ಕಿತ್ತಳೆ ಆರೋಗ್ಯಕ್ಕೆ ಬಹಳ ಉಪಯುಕ್ತವೂ ಹೌದು. ಒಂದು ಮನುಷ್ಯನಿಗೆ ಒಂದು ದಿನಕ್ಕೆ ಅಗತ್ಯವಿರುವ ವಿಟಮಿನ್ ಸಿ ಅನ್ನು ಈ ಹಣ್ಣು ನೀಡುತ್ತದೆ. ಅಲ್ಲದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೊದಲಿಗೆ ಚೀನಾ ನಂತರ ಇಂಡೋನೇಷ್ಯಾದ ಮೂಲಕ ಭಾರತಕ್ಕೆ ಕಾಲಿರಿಸಿತು.

ಉಪಯೋಗಗಳು ೧. ಕಿತ್ತಳೆಯಲ್ಲಿ ಸಿಟ್ರಸ್ ಲೆಮನಾಯ್ಡ್ ಅಂಶ ಹೇರಳವಾಗಿರುವುದರಿಂದ ಚರ್ಮ, ಶ್ವಾಸಕೋಶ, ಹೊಟ್ಟೆ ಮತ್ತು ಹಲವಾರು ಬಗೆಯ ಕ್ಯಾನ್ಸರ್ ಅನ್ನು ದೂರವಿರಿಸುತ್ತದೆ. ೨. ಕಿತ್ತಳೆಯ ರಸವನ್ನು ಕುಡಿಯುವುದರಿಂದ ಕಿಡ್ನಿಯಲ್ಲಿನ ಕಲ್ಲುಗಳು ಕರಗಲು ಸಹಾಯಕವಾಗುವುದರ ಜೊತೆಗೆ ಕಿಡ್ನಿಗೆ ಸಂಬಂಧ ಪಟ್ಟ ತೊಂದರೆಗಳನ್ನು ದೂರವಿರಿಸುತ್ತದೆ. ೩. ನಾರಿನಾಂಶ ಹೇರಳವಾಗಿರುವುದರಿಂದ ಮಲಬದ್ಧತೆಯನ್ನು ದೂರಮಾಡುತ್ತದೆ. ೪. ಕಿತ್ತಳೆಯಲ್ಲಿರುವ ಪಾಲಿಫೆನಾಲ್ ವೈರಸ್ ಸೋಂಕನ್ನು ಎದುರಿಸಲು ಸಹಾಯಕವಾಗಿದೆ. ೫. ಕಿತ್ತಳೆಯಲ್ಲಿರುವ ವಿಟಮಿನ್ ಸಿ ಕೂದಲಿನ ಪೋಷಣೆಗೆ ಬೇಕಾದ ಕೊಲಾಜಿನ್ ವೃದ್ಧಿಗೆ ಸಹಾಯಕ, ಅಂತೆಯೇ ಕೂದಲು ಉದುರುವುದನ್ನು ತಪ್ಪಿಸುತ್ತದೆ. ೬. ಈ ಹಣ್ಣು ಶ್ವಾಸಕೋಶದ ಆರೋಗ್ಯವನ್ನು ಕಾಪಾಡುತ್ತದೆ. ೭. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಸೋಂಕು ಮತ್ತು ರೋಗಗಳಿಂದ ನಿಮ್ಮನ್ನು ದೂರವಿರಿಸುವಲ್ಲಿ ಸಹಾಯಕವಾಗಿರಿಸುತ್ತದೆ.