ಸದಸ್ಯ:ರುಥ್ವಿಕ್ ಜ್.ಸ್/sandbox
ಸಕಲೇಶಪುರವು: ಸಕಲೇಶಪುರವು ಕರ್ನಾಟಕದ ಹಾಸನ ಜಿಲ್ಲೆಯ ಒಂದು ಗಿರಿಧಾಮ ಪಟ್ಟಣ ಮತ್ತು ಸಕಲೇಶಪುರವು ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿದೆ. ಪಟ್ಟಣವು ಜೀವವೈವಿಧ್ಯತೆಯ ಕೇಂದ್ರವೂ ಆಗಿದೆ. ಪಶ್ಚಿಮ ಘಟ್ಟಗಳ ತಪ್ಪಲಲ್ಲಿದ್ದು ಮಲೆನಾಡ ಪ್ರದೇಶದಲ್ಲಿದೆ. ಇದು ಹಸಿರು ಬೆಟ್ಟಗಳ ನಡುವೆ ಕಾಫಿ,ಏಲಕ್ಕಿ, ಮೆಣಸು, ಅಡಕೆ,ತೆಂಗು, ಬಾಳೆಯ ತೋಟಗಳಿಂದ ಆವೃತವಾಗಿದ್ದು ಸಮಶೀತೋಷ್ಣ ಹವಾಮಾನವನ್ನು ಹೊಂದಿದೆ. ಮುಖ್ಯವಾಗಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮತ್ತು ಇಡೀ ತಾಲ್ಲೂಕಿನಲ್ಲಿ ಬೆಳೆಯಲಾಗುವ ವಾಣಿಜ್ಯ ಬೆಳೆಗಳನ್ನು ಮಾರಾಟ ಮಾಡಲು ಸಕಲೇಶಪುರ ನಗರಕ್ಕೆ ತರಲಾಗುತ್ತದೆ . ಪಟ್ಟಣವು ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಮಂಗಳೂರು ಬಂದರು ನಗರವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 48 (NH-48) ರಲ್ಲಿದೆ. ಹತ್ತಿರದ ವಿಮಾನ ನಿಲ್ದಾಣವು ಮಂಗಳೂರು ಅಂತರಾಷ್ತ್ರೀಯ ವಿಮಾನ ನಿಲ್ದಾಣ.