ಸದಸ್ಯ:Abhishekgowda D.M/sandbox
ರಿಸರ್ವ ಬ್ಯಾಂಕಿನ ಕೇಂದ್ರ ಕಛೇರಿಯನ್ನು ಮೊದಲಿಗೆ ಕೊಲ್ಕತ್ತದಲ್ಲಿ ಪ್ರಾರಂಭಿಸಿದರಾದರೂ ನಂತರ ೧೯೩೭ರಲ್ಲಿ ಮುಂಬೈಗೆ ಬದಲಾಯಿಸಲಾಯಿತು. ೧೯೪೯ರಿಂದ ಭಾರತ ಸರ್ಕಾರವು ಇದರ ಒಡೆತನವನ್ನು ಹೊಂದಿದೆ. ರಘುರಾಮ್ ರಾಜನ್ ಬ್ಯಾಂಕ್‌ನ ಹಾಲಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದಾರೆ. ಇದು ೨೨ ಪ್ರಾದೇಶಿಕ ಶಾಖೆಗಳನ್ನು ಹೊಂದಿದೆ. ರಿಜರ್ವ್ ಬ್ಯಾಂಕು ದೇಶದ ಅತ್ಯುನ್ನತ ಬ್ಯಾಂಕ್ ಆಗಿದೆ.
ಇತಿಹಾಸ[ಬದಲಾಯಿಸಿ] ರಿಜರ್ವ್ ಬ್ಯಾಂಕನ್ನು ೧೯೩೪ರ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ ಯನ್ವಯ ಒಂದು ಖಾಸಗಿ ಷೇರುದಾರರ ಬ್ಯಾಂಕ್ ಆಗಿ ೧೯೩೫ ರ ಏಪ್ರಿಲ್ ೧ ರಂದು ಸ್ಥಾಪಿಸಲಾಯಿತು.[೩] ಸ್ವಾತಂತ್ಯ ನಂತರ ಸರ್ಕಾರಿ ಸ್ವಾಮ್ಯದ ಕೇಂದ್ರ ಬ್ಯಾಂಕ್ ಒಂದರ ಅವಶ್ಯಕತೆ ಬಿತ್ತಾದ್ದರಿಂದ ಸರ್ಕಾರ ರಿಜರ್ವ್ ಬ್ಯಾಂಕನ್ನು ೧೯೪೭ ರ ಜನವರಿ ೧ ರಂದು ರಾಷ್ಟ್ರೀಕರಿಸಿ ಕೇಂದ್ರ ಬ್ಯಾಂಕನ್ನಾಗಿ ಪರಿವರ್ತಿಸಿತು. ಈ ಬ್ಯಾಂಕು ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗ್ರಸ್ಥಾನ ಪಡೆದಿದ್ದು ಎಲ್ಲಾ ಬ್ಯಾಂಕ್ ಗಳು ಮತ್ತು ಹಣಕಾಸಿನ ಸಂಸ್ಥೆಗಳ ನೇರ ನಿಯಂತ್ರಣ ಸಾಧಿಸುತ್ತಿದೆ. ಇದು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ.
ಸಂಪನ್ಮೂಲ[ಬದಲಾಯಿಸಿ] ರಿಜರ್ವ್ ಬ್ಯಾಂಕು ರೂ. ೫ ಕೋಟಿ ಪಾವತಿಯಾದ ಬಂಡಾವಾಳ ಹೋಂದಿದೆ. ಈ ಬಂಡವಾಳವನ್ನು ಪೂರ್ತಿ ಪಾವತಿಯಾದ ರೂ. ೧೦೦ ರ ಮುಖಬೆಲೆಯ ೫ ಲಕ್ಷ ಷೇರುಗಳನ್ನಾಗಿ ವಿಭಜಿಸಲಾಗಿದೆ. ಎಲ್ಲಾ ಷೇರುಗಳನ್ನು ಕೇಂದ್ರ ಸರ್ಕಾರವೇ ಹೊಂದಿದೆ.
ಆಡಳಿತ[ಬದಲಾಯಿಸಿ] ರಿಜರ್ವ್ ಬ್ಯಾಂಕಿನ ಆಡಳಿತ ಮತ್ತು ಮೇಲ್ವಿಚಾರಣೆಯು ೨೦ ಸದಸ್ಯರನ್ನೊಳಗೊಂಡ ಕೇಂದ್ರ ನಿರ್ದೇಶಕರ ಮಂಡಳಿಗೆ ಒಳಪಟ್ಟಿದೆ. ಈ ೨೦ ನಿರ್ದೇಶಕರುಗಳಲ್ಲಿ ಒಬ್ಬ ಗೌರ್ನರ್, ನಾಲ್ವರು ಉಪ ಗೌರ್ನರ್ಗ್ ಗಳು, ಹಣಕಾಸು ಇಲಾಖೆಯ ಒಬ್ಬ ನಿರ್ದೇಶಕ, ವಿವಿಧ ಪ್ರಮುಖ ಕ್ಷೇತ್ರ ಗಳಿಂದ ಆಯ್ದು ಸರ್ಕಾರ ನಾಮಕರಣ ಮಾಡಿದ ಹತ್ತು ಮಂದಿ ನಿರ್ದೇಶಕರು ಹಾಗೂ ಕೋಲ್ಕತ್ತ, ಮುಂಬೈ, ಚೆನ್ನೈ ಮತ್ತು ದೆಹಲಿಯಲ್ಲಿರುವ ನಾಲ್ಕು ಪ್ರಾದೇಶಿಕ ಮಂಡಳಿಗಳ ನಾಲ್ಕು ಪ್ರತಿನಿಧಿಗಳಿರುತ್ತಾರೆ. ಪ್ರಸ್ತುತ ಡಾರಘುರಾಂ ರಂಜನ್ ಅವರು ರಿಜರ್ವ್ ಬ್ಯಾಂಕ್ ನ ಗವರ್ನರ್ ಆಗಿದ್ದಾರೆ. ರಿಜರ್ವ್ ಬ್ಯಾಂಕ್ ನ ಕೇಂದ್ರ ಕಛೇರಿ ಮುಂಬೈನಲ್ಲಿದೆ. ಇದಲ್ಲದೆ ಚೆನ್ನೈ, ದೆಹಲಿ, ಕೋಲ್ಕತಾ ಮತ್ತು ಮುಂಬೈನಲ್ಲಿ ನಾಲ್ಕು ಸ್ಥಾನೀಯ ಕಛೇರಿಗಳನ್ನು ಹೊಂದಿದೆ. ಜೊತೆಗೆ ಬೆಂಗಳೂರು, ಹೈದರಾಬಾದ್, ಕಾನ್ ಪುರ್, ಲಕ್ನೋ ಮುಂತಾದೆಡೆ ಶಾಖೆಗಳನ್ನು ಹೊಂದಿದೆ. ಆರ್.ಬಿ.ಐ. ನ ಕಾರ್ಯಗಳು[ಬದಲಾಯಿಸಿ] ಭಾರತದ ರಿಜರ್ವ್ ಬ್ಯಾಂಕು ದೇಶದ ಕೇಂದ್ರ ಬ್ಯಾಂಕ್ ಆಗಿರುವುದರಿಂದ ಅದು ಇತರ ದೇಶಗಳ ಕೇಂದ್ರ ಬ್ಯಾಂಕುಗಳು ನಿರ್ವಹಿಸುವ ಪ್ರಾಥಮಿಕ ಮತ್ತು ಸಾಂಪ್ರದಾಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಈ ಸಾಮಾನ್ಯ ಕಾರ್ಯಗಳ ಜೊತೆಗೆ ಅದು ಕೆಲವು ಅಭಿವೃದ್ಧಿ ಪ್ರಧಾನ ಕಾರ್ಯಗಳಲ್ಲೂ ಪಾಲ್ಗೊಳ್ಳುತ್ತದೆ. ಆದ್ದರಿಂದ ರಿಜರ್ವ್ ಬ್ಯಾಂಕ್ ನ ಕಾರ್ಯಗಳನ್ನು ಒಟ್ಟಾರೆಯಾಗಿ
ಸಾಂಪ್ರದಾಯಿಕ ಕಾರ್ಯಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಇತರೆ ಕಾರ್ಯಗಳೆಂದು ಮೂರು ವರ್ಗಗಳಾಗಿ ವಿಂಗಡಿಸಬಹುದು. ಸಾಂಪ್ರದಾಯಿಕ ಕಾರ್ಯಗಳು:[ಬದಲಾಯಿಸಿ] ರಿಜರ್ವ್ ಬ್ಯಾಂಕ್ ನಿರ್ವಹಿಸುತ್ತಿರುವ ಸಾಂಪ್ರದಾಯಿಕ ಕಾರ್ಯಗಳು ಈ ಕೆಳಗಿನಂತಿವೆ.
ನೋಟು ಚಲಾವಣೆ[ಬದಲಾಯಿಸಿ] ರಿಜರ್ವ್ ಬ್ಯಾಂಕ್ ದೇಶದಲ್ಲಿ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ತರುವ ಪರಮಾಧಿಕಾರ ಹೊಂದಿದೆ. ಒಂದು ರೂಪಾಯಿಯನ್ನು ಹೊರತುಪಡಿಸಿ ಎರಡರಿಂದ ಸಾವಿರದ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ತರುತ್ತದೆ. ನಾಣ್ಯಗಳು ಮತ್ತು ಒಂದು ರೂಪಾಯಿ ನೋಟನ್ನು ಕೇಂದ್ರದ ಹಣಕಾಸು ಸಚಿವಾಲಯ ಮುದ್ರಿಸುತ್ತದೆ.
ಸರ್ಕಾರದ ಬ್ಯಾಂಕು[ಬದಲಾಯಿಸಿ] ರಿಸರ್ವ್ ಬ್ಯಾಂಕು ಸರ್ಕಾರದ ಬ್ಯಾಂಕ್ ಆಗಿ, ಪ್ರತಿನಿಧಿಯಾಗಿ ಮತ್ತು ಸಲಹೆಗಾರನಾಗಿ ಕೆಲಸ ಮಾಡುತ್ತಿದೆ. ಸರ್ಕಾರದ ಸಲಹೆಗಾರನಾಗಿ ರಿಜರ್ವ್ ಬ್ಯಾಂಕು ಎಲ್ಲಾ ಹಣಕಾಸಿನ ವಿಚಾರಗಳ ಮೇಲೆ ಸರ್ಕಾರಕ್ಕೆ ಸಲಹೆ ನೀಡುತ್ತದೆ.
ಬ್ಯಾಂಕುಗಳ ಬ್ಯಾಂಕು[ಬದಲಾಯಿಸಿ] ರಿಸರ್ವ್ ಬ್ಯಾಂಕು ಬ್ಯಾಂಕುಗಳ ಬ್ಯಾಂಕ್ ಆಗಿ ಕೆಲಸ ಮಾಡುತ್ತಿದೆ. ೧೯೪೯ ರ ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯ್ದೆಯ ಪ್ರಕಾರ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕೇಂದ್ರ ಬ್ಯಾಂಕ್ ನೊಡನೆ ತಮ್ನ್ಮ ಠೇವಣಿಗಳ ಒಂದಾಂಶವನ್ನು ಕಾಯ್ದಿರಿಸಿದ ಹಣವಾಗಿ ಇಟ್ಟಿರಬೇಕು.
ಸಾಲ ನಿಯಂತ್ರಣ[ಬದಲಾಯಿಸಿ] ಪ್ರಮಾಣಾತ್ಮಕ ಮತ್ತು ಗುಣಾತ್ಮಕ ನಿಯಂತ್ರಣಗಳನ್ನು ರಿಜರ್ವ್ ಬ್ಯಾಂಕು ಸಾಲ ಮನ್ನಾ ಮಾಡಲು ಉಪಯೋಗಿಸುತ್ತದೆ.