ಸದಸ್ಯ:Deekshith/sandbox
ಆಲ್ಬರ್ಟ್ ಐನ್‍ಸ್ಟೀನ್ :
ಆಲ್ಬರ್ಟ್ ಐನ್‍ಸ್ಟೀನ್(ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ. ೧೯೨೧ರಲ್ಲಿ ಇವರಿಗೆ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದ್ಯುತಿವಿದ್ಯುತ್ ಪರಿಣಾಮ ಬಣ್ಣಿಸಿದ ಇವರ ವಾದ ಹಾಗೂ ಸೈದ್ಧಾಂತಿಕ ಭೌತಶಾಸ್ತ್ರಕ್ಕೆ ಇವರು ಸಲ್ಲಿಸಿದ ಸೇವೆಗೆ ಪ್ರಶಸ್ತಿ ನೀಡಲಾಯಿತು.