ವಿಧಾನಸೌಧ:

ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು.ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ. ಈ ಕಟ್ಟಡದ ವಾಸ್ತುಶೈಲಿಯಲ್ಲಿ ಇಂಡೋ ಸಾರ್ಸೆನಿಕ್ ಮತ್ತು ದ್ರಾವಿಡ ಶೈಲಿಯ ಹಲವಾರು ಅಂಶಗಳು 

ಆಡಕವಾಗಿದೆ.