ನನ್ನ ಬಗ್ಗೆ................! ಹಿಂದೂ ನ್ಯಾಯಸಂಹಿತೆ ಹಾಗೂ ಮಿತಾಕ್ಷರ ಎಂಬ ಅಮೋಘ ಗ್ರಂಥಗಳನ್ನು ಈ ಜಗತ್ತಿಗೆ ನೀಡಿದ ವಿಜ್ಞಾನೇಶ್ವರ ಹುಟ್ಟಿದ ಸುಕ್ಷೇತ್ರ, ಭಾರತ ದೇಶದ , ಕರ್ನಾಟಕ ರಾಜ್ಯದ ,ಗುಲಬರ್ಗಾ ಜಿಲ್ಲೆ ಹಾಗೂ ಚಿತ್ತಾಪೂರ ತಾಲೂಕಿನ ಮರತೂರ ಗ್ರಾಮದಲ್ಲಿ ಹುಟ್ಟಿದವನು, ಕವಲಗಾ ಮರೆಪ್ಪಾರವರ ಮೂರನೆ ಸುಪುತ್ರನಾಗಿ ಊರಿನ ಅದಿ ದೇವನಾದ ಶ್ರೀ ಕಾಶಿ ವಿಶ್ವನಾಥ ನ ಹೆಸರು ಇಟ್ಟಿಕೊಂಡವನು.ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸರಕಾರಿ ಹಿರಿಯಾ ಪ್ರಾಥಮಿಕ ಶಾಲೆ ಮರತೂರ ,ಹತ್ತನೆ ತರಗತಿಯನ್ನು ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ನಿಂಬರ್ಗಾ ಇಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿ ಬೆಳ್ಳಿ ಪದಕ ಪಡೆದೆ,ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಗುಲಬರ್ಗಾ ಇಲ್ಲಿ ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ಪಾಸಾದೆ. ಕೀರ್ತಿ ಶಿಕ್ಷಣ ಸಂಸ್ಥೆ ಗುಲಬರ್ಗಾದಲ್ಲಿ ಶಿಕ್ಷಣದಲ್ಲಿ ಡಿಪ್ಲೋಮಾ ಪದವಿ ಪಡೆದೆ. ಸರಕಾರಿ ಪದವಿ ಮಹಾವಿದ್ಯಾಲಯಲ್ಲಿ ಬಿ.ಎಸ್.ಸಿ ಪದವಿ ಭೌತಶಾಸ್ತ್ರ ,ರಸಾಯನ ವಿಜ್ಞಾನ ಹಾಗೂ ಗಣಿತದಲ್ಲಿ ಮುಗಿಸಿದೆ. ನನ್ನ ಬಿ.ಎಡ್. ಪದವಿಯು ಶ್ರೀ ಹಿಂಗೂಲಾಂಬಿಕಾ ಶಿಕ್ಷಣ ಸಂಸ್ಥೆ ಗುಲಬರ್ಗಾದಲ್ಲಿ ಮುಗಿಸಿದೆ. ನಾನು ಸದಾ ಕ್ರೀಯಾ ಶೀಲನಾಗಿದ್ದು ಆಗಾಗ ಸಮಾಜದ ಕೆಲವು ವಿಷಯಗಳ ಕುರಿತು ಬರವಣಿಗೆ ರೂಪದಲ್ಲಿ ಬರೆದಿದ್ದದೆನೆ. ಒಂದು ಸಿನಿಮಾದಲ್ಲಿ ಸಾಹಿತ್ಯವನ್ನು ಬರೆದಿದ್ದೇನೆ . ಬರೆಯುವದು ನನ್ನ ಮೊದಲ ಹವ್ಯಾಸವಾಗಿ ಪರಿಣಮಿಸಿದೆ. ಕೆಲವು ಪುಸ್ತಕಗಳನ್ನು ಕವನ ಸಂಕಲನಗಳನ್ನು ಬರೆದಿದ್ದೇನೆ ಆದರೆ ಯಾವುದು ಪ್ರಕಟವಾಗಿಲ್ಲಾ ಈಗಲು ಬರೆಯುತ್ತಲೆ ಇದ್ದೇನೆ. ಜೊತೆಗೆ ಸಮಾಜಿಕ ಸೇವೆಯಲ್ಲಿ ನನ್ನನು ತೊಡಗಿಸಿಕೊಂಡಿದ್ದೇನೆ . ಸಮುದಾಯದ,ಸರ್ಕಾರಿ ಶಾಲೆಯ ಶಿಕ್ಷಕರ ,ಮಕ್ಕಳ ಸೇವೆಯನ್ನು ರಾಯಚೂರ,ಗುಲಬರ್ಗಾ,ಯಾದಗಿರಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ.

 " Let's change  our self, world change itself "
 ಕೆ.ಎಂ.ವಿಶ್ವನಾಥ (ಮಂಕವಿ) ಮರತೂರ.