ಸದಸ್ಯ:Manaf simmi/sandbox
ಕೆ.ಎಸ್.ನರಸಿಂಹಸ್ವಾಮಿ
ಬದಲಾಯಿಸಿಕೆ.ಎಸ್.ನರಸಿಂಹಸ್ವಾಮಿ, ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆ ಯ ಕರ್ತೃ. 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಮುದ್ರಣ ಭಾಗ್ಯ ಪಡೆದಿದೆ. ಕನ್ನಡದ ಕೆಲವೇ ಕೃತಿಗಳಿಗೆ ಇಂಥ ಮರು ಮುದ್ರಣದ ಭಾಗ್ಯ- ಆಧುನಿಕ ಕನ್ನಡ ಕಾವ್ಯ ಹಲವು ರೂಪಗಳನ್ನು ಪಡೆಯುತ್ತಾ ಬಂದಿದೆ. ಹಲವು ಸಾಹಿತ್ಯ ಚಳುವಳಿಗಳು ಬಂದುಹೋಗಿವೆ. ಕೆಎಸ್‌ನ ಎಲ್ಲ ಕಾಲಕ್ಕೂ ಸಲ್ಲುವ ಜನಪ್ರೀತಿಯ ಕಾವ್ಯ ಕೃಷಿಗೆ ದೊಡ್ಡ ಹೆಸರು. ಕವಿ ವಿಮರ್ಶಕ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರು ಕೆಎಸ್‌ನ ಬಗ್ಗೆ ಬರೆಯುತ್ತ "ನವೋದಯದ ಕಾವ್ಯ ಸಂದರ್ಭದಲ್ಲಿ ಹೆಸರು ಮಾಡಿದ್ದ ಈ ಕವಿ ತಮ್ಮ ಸುಕುಮಾರ ಜಗತ್ತಿನಿಂದ, ನಿಷ್ಠುರವಾದ ಬದುಕಿನ ಸಂದರ್ಭಕ್ಕೆ ಹೊರಳಿದ್ದು `ಶಿಲಾಲತೆ'ಯಲ್ಲಿ. ಆದ್ದರಿಂದ ಸಂಗ್ರಹಕ್ಕೆ ಒಂದು ಐತಿಹಾಸಿಕ ಮಹತ್ವವಿದೆ" -ಎಂದು ದಾಖಲಿಸಿದ್ದಾರೆ.