ಸದಸ್ಯ:RAKSHITHROY93/sandbox
ಹಳಗನ್ನಡ ತ್ರಿಪದಿ ಛಂಧಸ್ಸಿನಲ್ಲಿ ರಚನೆಗೊಂಡ ಕನ್ನಡದ ಮೊದಲ ಕವಿತೆ ಕ್ರಿ.ಶ. ೭೦೦ರ ಕಪ್ಪೆ ಅರಭಟ್ಟನ ಶಾಸನದಲ್ಲಿ ಕಂಡುಬರುತ್ತದೆ. [೨೪] ರಾಜಾ ನೃಪತುಂಗ ಅಮೋಘ ವರ್ಷ ರಚಿಸಿದ ಕವಿರಾಜ ಮಾರ್ಗಂ ಕನ್ನಡದಲ್ಲಿ ರಚನೆಗೊಂಡ ಮೊದಲ ಕೃತಿಯಾಗಿದೆ. ಸಾಹಿತ್ಯ ವಿಮರ್ಶೆಗಳನ್ನೂ ಕಾವ್ಯರಚನೆಯನ್ನೂ ಒಳಗೊಂಡಂಥ ಈ ಕೃತಿ ಆ ಕಾಲದಲ್ಲಿ ಅಸ್ತಿತ್ವದಲ್ಲಿ ಕನ್ನಡದ ಉಪಭಾಷೆಗಳನ್ನು ಒಂದೆಡೆ ಸೇರಿವ ಪ್ರಯತ್ನ ಮಾಡಿದೆ. ಈ ಕೃತಿ ಕ್ರಿ.ಶ. ೬ನೆಯ ಶತಮಾನದ ರಾಜ ದುರ್ವಿನೀತನ ಬಗ್ಗೆಯೂ ಕ್ರಿ. ೬೩೬ರ ಐಹೊಳೆ ಶಾಸನ ಬರೆದ ರವಿಕೀರ್ತಿಯ ಬಗ್ಗೆಯೂ ವಿವರಗಳನ್ನು ನೀಡುತ್ತದೆ. [೨೫][೨೬] ಕನ್ನಡದಲ್ಲಿ ಲಭ್ಯವಾಗಿರುವ ಮೊದಲ ಕೃತಿ ವ್ಯಾಕರಣವನ್ನು ವಿವರಿಸುವಂಥದ್ದೂ ವಿವಿಧ ಕನ್ನಡ ಉಪಭಾಷೆಗಳನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡುವುದರಿಂದಲೂ ಕನ್ನಡ ಭಾಷೆಯಲ್ಲಿ ಸಾಹಿತ್ಯ ರಚನೆ ಅದಕ್ಕಿಂತಲೂ ಕೆಲ ಶತಮಾನಗಳ ಹಿಂದೆಯೇ ಆರಂಭಗೊಂಡಿರಬಹುದೆಂದು ಊಹಿಸಬಹುದಾಗಿದೆ. [೨೫][೨೭] ಕ್ರಿ.ಶ. ೯೦೦ರಲ್ಲಿ ಶಿವಕೋಟ್ಯಾಚಾರ್ಯರು ರಚಿಸಿದ ವಡ್ಡಾರಾಧನೆ ಎಂಬ ಗದ್ಯಕೃತಿಯಲ್ಲಿ ಶ್ರವಣಬೆಳಗೊಳದ ಭದ್ರಬಾಹುವಿನ ಕುರಿತಾದ ವಿವರಗಳು ಲಭ್ಯವಾಗುತ್ತವೆ.[೨೮] ಪಂಪನ ಕವಿಯು ಬರೆದ ವಿಕ್ರಮಾರ್ಜುನ ವಿಜಯಂ ಹಾಗೂ ಇನ್ನಿತರ ಕೃತಿಗಳು ಇವೆ.
ನಡುಗನ್ನಡ ಹದಿನೈದನೆಯ ಮತ್ತು ಹದಿನೆಂಟನೆಯ ಶತಮಾನದ ನಡುವಣ ಕಾಲ ಕನ್ನಡ ಭಾಷೆ ಮತ್ತು ಸಾಹಿತ್ಯದ ಉಚ್ಛ್ರಾಯ ಕಾಲವಾಗಿತ್ತು. ಆ ಕಾಲದ ಅತ್ಯಂತ ಶ್ರೇಷ್ಠನೆನಿಸಿಕೊಂಡ ಕವಿ ಕುಮಾರವ್ಯಾಸ ಕರ್ಣಾಟ ಭಾರತ ಕಥಾಮಂಜರಿ ಎಂಬ ಕೃತಿಯೊಂದಿಗೆ ವಿಶ್ವವಿಖ್ಯಾತನಾದನು. ಮಹಾಭಾರತವನ್ನು ಆಧರಿಸಿದ ಕೃತಿ ಭಾಮಿನಿ ಷಟ್ಪದಿ ಛಂದಸ್ಸಿನ ಪದ್ಯಗಳನ್ನೊಳಗೊಂಡಿದೆ.[೨೯] ಈ ಕಾಲದಲ್ಲಿ ಕನ್ನಡದ ಮೇಲೆ ಸಂಸ್ಕೃತದ ಧಾರ್ಮಿಕವೂ ಸಾಮಾಜಿಕವೂ ಆದ ಪ್ರಭಾವ ಮೂರ್ಧನ್ಯಾವಸ್ಥೆಯಲ್ಲಿತ್ತು.[೩೦][೩೧][೩೨] ಈ ಕಾಲದಲ್ಲಿ ರಾಜ್ಯಾಡಳಿತ ಮತ್ತು ಜಮೀನ್ದಾರಿಗೆ ಸಂಬಂಧಿಸಿದ ಮರಾಠಿ ಮತ್ತು ಹಿಂದಿ ಭಾಷೆಯ ಹಲವಾರು ಶಬ್ದಗಳು ಕನ್ನಡದಲ್ಲಿ ಬಳಕೆಗೆ ಬಂದುವು.[೩೩] ಕನಕ ದಾಸರು, ಪುರಂದರ ದಾಸರು, ನರಸಿಂಹ ತೀರ್ಥರು, ವ್ಯಾಸತೀರ್ಥರು, ಶ್ರೀಪಾದ ರಾಯರು, ವಾದಿರಾಜ ತೀರ್ಥರು, ವಿಜಯ ದಾಸರು, ಜಗನ್ನಾಥ ದಾಸರು, ಪ್ರಸನ್ನವೆಂಕಟ ದಾಸರೇ ಮೊದಲಾದ ವೈಷ್ಣವ ಸಂತರು ಕನ್ನಡದಲ್ಲಿ ದಾಸರ ಪದಗಳೆಂದು ಖ್ಯಾತವಾದ ಶ್ರೇಷ್ಠ ಭಕ್ತಿಕಾವ್ಯಗಳನ್ನು ರಚಿಸಿದರು. . ಅವುಗಳಲ್ಲಿ ಹೆಚ್ಚಿನವು ಇಂದಿಗೆ ಕರ್ಣಾಟಕ ಶಾಸ್ತ್ರೀಯ ಸಂಗೀತದಲ್ಲಿ ಆದರಿಸಲ್ಪಡುವ ಕೃತಿಗಳಾಗಿವೆ.[೩೪] ಕನಕ ದಾಸರ ರಾಮಧಾನ್ಯ ಚರಿತೆ ಎಂಬ ಕೃತಿಯಲ್ಲಿ ಧಾನ್ಯಗಳ ರೂಪಕದೊಂದಿಗೆ ವರ್ಗ ಸಂಘರ್ಷವನ್ನು ಸೂಚಿಸಿರುವುದು ಮನಗಾಣಬಹುದು. [೩೫] ಇಲ್ಲಿ ಹೆಸರಿಸಲಾದ ಮತ್ತು ಇತರ ವೈಷ್ಣವ ಸಂತರು / ಹರಿದಾಸರು ತಮ್ಮ ದಾಸಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಕ್ಕೂ ಆ ಮೂಲಕ ಕರ್ಣಾಟಕ ಸಂಗೀತಕ್ಕೂ ಶ್ರೇಷ್ಠವೆನಿಸಿದ ಕೊಡೂಗೆಗಳನ್ನು ನೀಡಿದರು. ಇವರಲ್ಲಿ ಅತ್ಯಂತ ಪ್ರಸಿದ್ಧರಾದವರು ಕರ್ಣಾಟಕ ಸಂಗೀತದ ಪಿತಾಮಹ ಎಂದು ಖ್ಯಾತರಾದ ಪುರಂದರದಾಸರು.[೩೬][೩೭][೩೮] ಹೊಸಗನ್ನಡ ಹತ್ತೊಂಬತ್ತನೆಯ ಶತಮಾನದ ನಂತರದ ಕನ್ನಡ ಕೃತಿಗಳ ಭಾಷೆಯಲ್ಲಿ ಗಮನಾರ್ಹ ವ್ಯತ್ಯಯ ಕಂಡುಬಂದಿತು. ಈ ಬಗೆಯಲ್ಲಿ ರೂಪುಗೊಂಡ ಕನ್ನಡ ಭಾಷೆಯನ್ನು ಹೊಸಗನ್ನಡ ಎಂದು ಕರೆಯುತ್ತೇವೆ. ಹೊಸಗನ್ನಡ ಬರಹಗಾರರಲ್ಲಿ ಅತ್ಯಂತ ಪ್ರಮುಖನಾದವನು ಮುದ್ದಣ ಎಂಬ ಕಾವ್ಯನಾಮದೊಂದಿಗೆ ಪ್ರಸಿದ್ಧನಾದ ನಂದಳಿಕೆ ಲಕ್ಷ್ಮಿನಾರಣಪ್ಪ. ಮುದ್ದಣನ ಕಾವ್ಯ ಕನ್ನಡದಲ್ಲಿ ಹೊಸದೊಂದು ಪರಂಪರೆಗೆ ನಾಂದಿಯಾಗಿದ್ದರೂ ಭಾಷಾವಿದಗ್ಧರು ಗುಲ್ವಾಡಿ ವೆಂಕಟರಾಯರು ಬರೆದ ಇಂದಿರಾಬಾಯಿ ಅಥವಾ ಸದ್ಧರ್ಮ ವಿಜಯವು ಎಂಬ ಕೃತಿಯನ್ನು ಹೊಸಗನ್ನಡದ ಮೊದಲ ಕೃತಿಯನ್ನು ಗುರುತಿಸುತ್ತಾರೆ. ೧೮೧೭ರಲ್ಲಿ ವಿಲಿಯಂ ಕಾರಿ ರಚಿಸಿ ಶ್ರೀರಾಮಪುರದಿಂದ ಪ್ರಕಾಶನಗೊಂಡ ಕಾನರೀಸ್ ವ್ಯಾಕರಣ ಎಂಬ ಕೃತಿ ಕನ್ನಡದಲ್ಲಿ ಮೊದಲ ಬಾರಿಗೆ ಅಚ್ಚುಗೊಂಡ ಕೃತಿಯೆಂಬ ಅಗ್ಗಳಿಕೆಗೆ ಪಾತ್ರವಾಗಿದೆ. *೧೮೨೦ರಲ್ಲಿ ಜೋನ್ ಹಾನ್ಸ್ ಬೈಬಲಿನ ಕನ್ನಡದ ಅನುವಾದವನ್ನು ಪ್ರಕಟಿಸಿದರು. [೩೯] ಅಚ್ಚುಗೊಂಡ ಮೊದಲ ಕಾದಂಬರಿ ಪಿಲ್‍ಗ್ರಿಂಸ್ ಪ್ರೋಗ್ರೆಸ್ ಎಂಬ ಕೃತಿಯಾಗಿದೆ. ಕಾನರೀಸ್ ಪ್ರೋವರ್ಬ್ಸ್ (ಕನ್ನಡ ಗಾದೆಗಳು) ಎಂಬ ಕೃತಿಯೂ ಮೇರಿ ಮಾರ್ತ್ ಷೆರ್ವುಡ್ ಬರೆದ ದ ಹಿಸ್ಟರಿ ಆಫ್ ಹೆನ್ರಿ ಅಂಡ್ ಹಿಸ್ ಬೇರರ್ ಎಂಬ ಕೃತಿಯೂ ಕ್ರಿಸ್ತಿಯನ್ ಗೋತ್ಲೋವ್ ಬಾರ್ತನು ಬರೆದ ಬೈಬಲ್ ಸ್ಟೋರೀಸ್ ಮತ್ತು ಕನ್ನಡ ಸ್ತೋತ್ರ ಪುಸ್ತಕ ಇಲ್ಲಿ ಪ್ರಕಾಶನಗೊಂಡವು.[೪೦] ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯ ಹಲ ಬಗೆಯ ಚಳುವಳಿಗಳಿಂದ ಪ್ರಭಾವಗೊಂಡಿದೆ. ಇವುಗಳಲ್ಲಿ ಪ್ರಮುಖವಾದುವು ನವೋದಯ. ನವ್ಯ, ನವ್ಯೋತ್ತರ, ದಲಿತ, ಬಂಡಾಯ ಎಂಬಿವುಗಳಾಗಿವೆ. ಪ್ರಸ್ತುತ ಕನ್ನಡ ಸಾಹಿತ್ಯ ಸಮಾಜದ ಎಲ್ಲಾ ವರ್ಗಗಳನ್ನೂ ತಲುಪುತ್ತಲಿದೆ. ಅಷ್ಟಲ್ಲದೆ ಕನ್ನಡದಲ್ಲಿ ಪ್ರಸಿದ್ಧರೂ ಶ್ರೇಷ್ಠರೂ ಆದ ಕುವೆಂಪು, ದ.ರಾ.ಬೇಂದ್ರೆ, ವಿ.ಕೃ. ಗೋಕಾಕ್ ಮುಂತಾದ ಕವಿಗಳೂ ಸಾಹಿತಿಗಳೂ ಬಾಳಿ ಬದುಕಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಎಂಟು ಸಾರಿ ಜ್ಞಾನಪೀಠ ಪುರಸ್ಕಾರ ದೊರೆತಿದೆ. [೪೧] ಭಾರತೀಯ ಭಾಷೆಗಳ ಕೃತಿಗಳಿಗೆ ದೊರಕುವ ಜ್ಞಾನಪೀಠ ಪುರಸ್ಕಾರವು ಎಂಟು ಬಾರಿ ಕನ್ನಡ ಭಾಷೆಗೆ ದೊರೆಯಿತು. [೪೨] ಹಲವು ಬಾರಿ ಕೇಂದ್ರ ಸಾಹಿತ್ಯ ಅಕಾದೆಮಿ ಪುರಸ್ಕಾರಗಳೂ ಕನ್ನಡ ಭಾಷೆಗೆ ಲಭ್ಯವಾಗಿವೆ. ದಿಲ್ಲಿಯ ಕೆ. ಕೆ. ಬಿರ್ಲಾ ಫೌಂಡೇಷನ್ ಕೊಡಮಾಡುವ ಸರಸ್ವತಿ ಸಮ್ಮಾನವೂ [೪೩] ಕನ್ನಡ ಭಾಷೆಗೆ ಲಭ್ಯವಾಗಿದೆ. ಎಸ್. ಎಲ್. ಭೈರಪ್ಪನವರ ಮತ್ತು ಶಿವರಾಮ ಕಾರಂತರ ಕೃತಿಗಳು ಭಾರತದ ಹದಿನಾಲ್ಕು ಭಾಷೆಗಳಲ್ಲಿ ಅನುವಾದಗೊಂಡಿವೆ.