ಸದಸ್ಯ:Shakir sha/sandbox
ಜಿ ಎಸ್ ಶಿವರುದ್ರಪ್ಪ -(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ)(ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩) ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರು. ಜೊತೆಗೆ ವಿಮರ್ಶಕ, ಸಂಶೋಧಕ, ನಾಟಕಕಾರ, ಉತ್ತಮ ಪ್ರಾಧ್ಯಾಪಕ, ಒಳ್ಳೆಯ ಆಡಳಿತ ಗಾರ. ಕುವೆಂಪು ಅವರ ಮೆಚ್ಚಿನ ಶಿಷ್ಯ. ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾದವರು. ನವೆಂಬರ್ ೧,೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು. ಜಿ.ಎಸ್.ಶಿವರುದ್ರಪ್ಪ ಅವರ ಕೃತಿಗಳು ಕವನ ಸಂಕಲನಗಳು ಚೆಲುವು-ಒಲವು, ದೇವಶಿಲ್ಪಿ/ಶಿಲ್ಪ, ದೀಪದ ಹೆಜ್ಜೆ, ಅನಾವರಣ, ತೆರೆದ ಬಾಗಿಲು/ತೆರೆದ ದಾರಿ, ಗೋಡೆ
ವಿಮರ್ಶೆ/ಗದ್ಯ ಪರಿಶೀಲನ, ವಿಮರ್ಶೆಯ ಪೂರ್ವ ಪಶ್ಚಿಮ, ಸೌಂದರ್ಯ ಸಮೀಕ್ಷೆ(ಇದು ಅವರ ಪಿಹೆಚ್‌ಡಿ ಮಹಾ ಪ್ರಬಂಧ), ಕಾವ್ಯಾರ್ಥ ಚಿಂತನ, ಗತಿಬಿಂಬ, ಅನುರಣನ, ಪ್ರತಿಕ್ರಿಯೆ, ಕನ್ನಡ ಸಾಹಿತ್ಯ ಸಮೀಕ್ಷೆ, ಮಹಾಕಾವ್ಯ ಸ್ವರೂಪ, ಕನ್ನಡ ಕವಿಗಳ ಕಾವ್ಯ ಕಲ್ಪನೆ
ಪ್ರವಾಸ ಕಥನ ಮಾಸ್ಕೋದಲ್ಲಿ ೨೨ ದಿನ -(ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ ಬಂದಿದೆ), ಇಂಗ್ಲೆಂಡಿನಲ್ಲಿ ಚತುರ್ಮಾಸ, ಅಮೆರಿಕದಲ್ಲಿ ಕನ್ನಡಿಗ, ಗಂಗೆಯ ಶಿಖರಗಳಲ್ಲಿ
ಜಿ.ಎಸ್.ಶಿವರುದ್ರಪ್ಪನವರು 23 ಡಿಸೆಂಬರ್ 2013ರಂದು ತಮ್ಮ ಬನಶಂಕರಿಯ ನಿವಾಸದಲ್ಲಿ ನಿಧನರಾದರು. ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಅಂದು ಸ್ವರ್ಗಸ್ಥರಾದರು. ಜಿ.ಎಸ್.ಶಿವರುದ್ರಪ್ಪನವರ ಆಣತಿಯಂತೆಯೆ ಅವರ ದೇಹವನ್ನು ಮರಣಾನಂತರ ಮಣ್ಣು ಮಾಡದೆ ಸುಡಲಾಯಿತು. ಬೆಂಗಳೂರು ವಿ.ವಿ. ಸಮೀಪವಿರುವ ಕಲಾಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನವನ್ನು ಸಕಲ ಸರ್ಕಾರಿ ಗೌರವ ಮರ್ಯಾದೆಯೊಂದಿಗೆ ದಿ. 24 ಡಿಸೆಂಬರ್ 2013ರಂದು ನೇರವೇರಿಸಲಾಯಿತು.
ಇತರೆ ಪ್ರಶಸ್ತಿಗಳು 1.ಪಂಪ ಪ್ರಶಸ್ತಿ, 2.ಮಾಸ್ತಿ ಪ್ರಶಸ್ತಿ, 3.ಅನಕೃ ಪ್ರತಿಷ್ಠಾನ ಪ್ರಶಸ್ತಿ, 4.ನಾಡೋಜ ಪ್ರಶಸ್ತಿ,