ಸದಸ್ಯ:Shoba Jayasimha/ನನ್ನ ಪ್ರಯೋಗಪುಟ

ಜಯಸಿಂಹ ಅದ ನಾನು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸ ಮಾಡುತ್ತಿದ್ದೇನೆ.ಬಿ.ಇ. ಕಂಪ್ಯೂಟರ್ ವಿಜ್ಙಾನ ಪದವಿ ಪಡೆದಿದ್ದೇನೆ.

  1. ಕರ್ನಾಟಕ
  2. ತಮಿಳ್ನಾಡು
  3. ದೆಹಲಿ
  4. ಬಾಂಬೆ
  5. ಕಲ್ಕತ್ತ
  6. ಮದ್ರಸ್ಡಾ
ಬಿ. ಆರ್ ಅಂಬೇಡ್ಕರ್ ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.
  1. ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಅಸ್ಪೃಶ್ಯ ಕುಟುಂಬದವರು.
  2. ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.
  3. ರಾಮಜಿ ಸಕ್ಪಾಲ್ ರವರಿಗೆ 14 ಮಕ್ಕಳಲ್ಲಿ ಬದುಕುಳಿದ್ದಿದ್ದು 5 ಜನ ಮಕ್ಕಳು , ಅವರು ಮಂಜುಳಾ, ತುಳಸಿ, ಬಲರಾಮ, ಆನಂದರಾವ್ ಮತ್ತು ಭೀಮರಾವ್. ಭೀಮರಾವ್ 2 ವರ್ಷದ ಬಾಲಕನಿದ್ದಾಗ ತಂದೆ ನೌಕರಿಯಿಂದ ನಿವೃತ್ತಿ ಹೊಂದಿದರು. ಇವರು 14 ವರ್ಷಗಳವರೆಗೆ ಮಿಲಿಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸಿದ್ದರು. ಇವರು ಮರಾಠಿ, ಹಿಂದಿ ಭಾಷೆಯಲ್ಲಿ ಪ್ರಬುದ್ಧ ಜ್ಞಾನ ಹೊಂದಿದ್ದರು.
  4. ಜೊತೆಗೆ ಆಂಗ್ಲ ಭಾಷೆಯನ್ನು ಬಲ್ಲವರಾಗಿದ್ದರು. ಮಕ್ಕಳಲ್ಲಿ ದೇಶಭಕ್ತಿ, ಜ್ಞಾನ, ಹಾಗೂ ಧರ್ಮದ ಬಗ್ಗೆ ತಿಳಿಹೇಳಿಕೊಡುವಲ್ಲಿ ಸಫಲರಾದರು. ಮುಂದೆ ಭೀಮರಾವ್ ರವರು ಉತ್ತಮ ಸಂಸ್ಕೃತಿ ಹೊಂದಲು ತಂದೆಯವರು ಹೇಳಿಕೊಟ್ಟ ನೀತಿ ಪಾಠ ಸಹಾಯಕವಾಯಿತು. ಇವರು ಕಬೀರ ಪಂಥದವರು, ಕಬೀರರ ಧೋಹೆಗಳು, ರಾಮಾಯಣ, ಮಹಾಭಾರತದ ಕತೆಗಳನ್ನು ಮಕ್ಕಳಿಗೆ ಮುಂ

ಜಾನೆ ಮತ್ತು ಸಾಯಂಕಾಲ ಹೇಳಿಕೊಡುತ್ತಿದ್ದರು.

ಅಂಬೇಡ್ಕರ್ ಒಬ್ಬ ಸಂವಿದಾನ ಶಿಲ್ಪಿ