ಇತಿವೃತ್ತ: ಕನ್ನಡ ಬರವಣಿಗೆಯ ಪ್ರಪ್ರಥಮ ಉದಾಹರಣೆ ದೊರಕಿರುವುದು ಹಲ್ಮಿಡಿ ಶಾಸನ ದಲ್ಲಿ (ಸು. ಕ್ರಿ.ಶ. ೪೫೦). ಪ್ರಸಿದ್ಧವಾದ ಬಾದಾಮಿ ಶಾಸನಗಳು ಪುರಾತನ ಕನ್ನಡ ಬರವಣಿಗೆಯ ಮತ್ತಷ್ಟು ಉದಾಹರಣೆಗಳನ್ನು ನೀಡುತ್ತವೆ. ಉಪಲಬ್ಧವಾಗಿರುವ ಪ್ರಥಮ ಕನ್ನಡ ಪುಸ್ತಕವೆಂದರೆ ೯ ನೇ ಶತಮಾನದ ಅಮೋಘವರ್ಷ ನೃಪತುಂಗನ ಕವಿರಾಜಮಾರ್ಗ. ಈ ಪುಸ್ತಕ ಕನ್ನಡ ಕಾವ್ಯ, ಕನ್ನಡ ನಾಡು, ಮತ್ತು ಕನ್ನಡಿಗರ ಬಗ್ಗೆ ಬರೆಯಲ್ಪಟ್ಟ ಒಟ್ಟಾರೆ ಸಾರಾಂಶವೆನ್ನಬಹುದು. ಇದಕ್ಕೆ ಹಿಂದೆ ಬರೆಯಲ್ಪಟ್ಟ ಕೆಲವು ಕನ್ನಡ ಪುಸ್ತಕಗಳ ಉಲ್ಲೇಖ ಈ ಪುಸ್ತಕದಲ್ಲಿ ಬಂದಿರುವ ಆಧಾರದ ಮೇಲೆ ಕನ್ನಡ ಸಾಹಿತ್ಯದ ಉಗಮ ಸುಮಾರು ಕ್ರಿ.ಶ. ೬-೭ನೇ ಶತಮಾನಗಳಲ್ಲಿ ಆದದ್ದಿರಬಹುದು. ಆದರೆ ಕವಿರಾಜಮಾರ್ಗದ ಹಿಂದಿನ ಯಾವ ಕೃತಿಗಳೂ ಇದುವರೆಗೆ ದೊರಕಿಲ್ಲ. ಕನ್ನಡ ಸಾಹಿತ್ಯದ ಚರಿತ್ರೆಯನ್ನು ಮೂರು ಘಟ್ಟಗಳಾಗಿ ವಿಂಗಡಿಸ ಬಹುದು: ಹಳೆಗನ್ನಡ, ನಡುಗನ್ನಡ ಹಾಗೂ ಆಧುನಿಕ ಕನ್ನಡ. ಹಳೆಗನ್ನ: ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನು ಹಳೆಗನ್ನಡ ಎಂದು ಗುರುತಿಸಬಹುದು. ಈ ಕಾಲದ ಸಾಹಿತ್ಯ ಮುಖ್ಯವಾಗಿ ಜೈನ ಧರ್ಮವನ್ನು ಅವಲಂಬಿಸಿದೆ. ಪಂಪ ಭಾರತ ಮತ್ತು ತನ್ನ ಇನ್ನೊಂದು ಮುಖ್ಯಕೃತಿಯಾದ ಆದಿಪುರಾಣದ ಮೂಲಕ ಪಂಪ ಕನ್ನಡ ಕಾವ್ಯಪರಂಪರೆಯ ದಿಗ್ಗಜರಲ್ಲಿ ಒಬ್ಬನಾಗಿದ್ದಾನೆ. ಪಂಪ ಭಾರತ ಸಂಸ್ಕೃತ ಮಹಾಭಾರತದ ಕನ್ನಡ ರೂಪಾಂತರ. ತನ್ನ ಮಾನವತಾವಾದ ಹಾಗೂ ಗಂಭೀರ ಲೇಖನಶೈಲಿಯ ಮೂಲಕ ಕನ್ನಡದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾಗಿದ್ದಾನೆ.'

ಇದು ಇಡೀ ಮಹಾಭಾರತದ ಒಂದು ಸಿಂಹಾವಲೋಕನ ದೃಷ್ಟಿ. ಮಹಾಭಾರತ ಯುದ್ಧದ ಕೊನೆಯ ದಿನದಲ್ಲಿ ಸ್ಥಿತವಾಗಿದ್ದರೂ ಸಿಂಹಾವಲೋಕನ ಕ್ರಮದಲ್ಲಿ ಇಡಿಯ ಮಹಾಭಾರತವನ್ನು ಪರಿಶೀಲಿಸುತ್ತದೆ. ಛಂದಸ್ಸಿನ ದೃಷ್ಟಿಯಿಂದ ಈ ಕಾಲದ ಕಾವ್ಯ ಚಂಪೂ ಶೈಲಿಯಲ್ಲಿದೆ (ಒಂದು ರೀತಿಯ ಗದ್ಯ ಮಿಶ್ರಿತ ಪದ್ಯ) ನಡುಗನ್ನಡಸಂಪಾದಿಸಿ ನಡುಗನ್ನಡ ಸಾಹಿತ್ಯದಲ್ಲಿ ಅನೇಕ ಹೊಸ ಸಾಹಿತ್ಯ ಪ್ರಕಾರಗಳು ಬೆಳಕಿಗೆ ಬಂದವು. ಇವುಗಳಲ್ಲಿ ಮುಖ್ಯವಾದವು ರಗಳೆ, ಸಾಂಗತ್ಯ ಮತ್ತು ದೇಸಿ. ಈ ಕಾಲದ ಸಾಹಿತ್ಯ ಜೈನ, ಹಿಂದೂ ಹಾಗೂ ಜಾತ್ಯತೀತ ಬೋಧನೆಗಳ ಮೇಲೆ ಆಧಾರಿತವಾಗಿದೆ. ಈ ಘಟ್ಟದ ಪ್ರಮುಖ ಲೇಖಕರಲ್ಲಿ ಇಬ್ಬರೆಂದರೆ ಹರಿಹರ ಮತ್ತು ರಾಘವಾಂಕ. ಇಬ್ಬರೂ ತಮ್ಮದೇ ಶೈಲಿಯಲ್ಲಿ ಕನ್ನಡ ಸಾಹಿತ್ಯದ ದಾರಿಯನ್ನು ಬೆಳಗಿದವರು.