ಸದಸ್ಯ:Vishnu567/sandbox
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಕೊಳ್ಳುವ ಶಕ್ತಿಯ ಮೇರೆಗೆ, ಪ್ರಪಂಚದ ನಾಲ್ಕನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಭಾರತ ದೇಶವು ಪ್ರಾಚೀನ ಸಿಂಧೂತಟದ ನಾಗರೀಕತೆಯ ತವರು ಮನೆಯಾಗಿದೆ. ಅನೇಕ ಐತಿಹಾಸಿಕ ವಾಣಿಜ್ಯ ಮಾರ್ಗಗಳು ಹಾಗು ಪ್ರಾಚೀನ ಸಾಮ್ರಾಜ್ಯಗಳು ಭಾರತ ದೇಶದಲ್ಲಿ ಉಗಮಿಸಿವೆ. ಪ್ರಪಂಚದ ನಾಲ್ಕು ಪ್ರಮುಖ ಧರ್ಮಗಳಾದ ಹಿಂದೂಧರ್ಮ, ಬೌದ್ಧ, ಜೈನ್ ಧರ್ಮ ಮತ್ತು ಸಿಖ್ ಧರ್ಮಗಳು ಭಾರತದಲ್ಲಿ ಆರಂಭವಾಗಿವೆ. ಝೋ ರಾಷ್ಟ್ರಿಯನಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮ ಕ್ರಿ. ಶ1 ನೇ ಸಹಸ್ರಮಾನದಲ್ಲಿ ಆಗಮಿಸಿ ಈ ಪ್ರದೇಶದ ಸಂಸ್ಕೃತಿಯನ್ನು ವೈವಿಧ್ಯಮಯವಾಗಿಸಿವೆ. ೧೮ನೇ ಶತಮಾನದಲ್ಲಿ ಭಾರತ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪೆನಿಯಿಂದ ಆಕ್ರಮಣಗೊಂಡು ಇಂಗ್ಲೇಂಡಿನ ಆಡಳಿತಕ್ಕೊಳಪಟ್ಟಿತು. ೧೯ನೇ ಶತಮಾನದ ಮಧ್ಯದಲ್ಲಿ ಭಾರತ ಅನೇಕ ಸ್ವಾತಂತ್ರ್ಯ ಹೋರಾಟದ ಫಲವಾಗಿ ಬ್ರಿಟೀಷರಿಂದ ಸ್ವತಂತ್ರವಾಯಿತು.ಭಾರತ ಎಂಬ ಹೆಸರು "ಭರತವರ್ಷ" ಎಂಬ ಹೆಸರಿನಿಂದ ಉಗಮಗೊಂಡದ್ದು. ಪುರಾತನ ಪೌರಾಣಿಕ ಆಕರಗಳಿಂದಲೂ ಈ ಹೆಸರು ಭಾರತಕ್ಕೆ ಸೂಚಿತವಾಗಿದೆ. ಋಷಭದೇವನ ಮಗ ಭರತ ಚಕ್ರವರ್ತಿಯಿಂದ ಅಥವಾ ಮಹಾರಾಜ ದುಶ್ಯಂತನ ಪುತ್ರನಾದ ಭರತ ಮಹಾರಾಜನ ಹೆಸರಿನಿಂದ ಬಂದದ್ದು. "ಇಂಡಿಯಾ" ಎಂಬ ಹೆಸರು ಸಿಂಧೂ ನದಿಯ ಇದರ ಪರ್ಷಿಯನ್ ರೂಪಾಂತರ "ಇಂಡಸ್" ಎಂಬುದರಿಂದ ಬಂದದ್ದು. ಭಾರತವನ್ನು ನಿರ್ದೇಶಿಸಲು ಉಪಯೋಗಿಸಲಾಗಿರುವ ಇತರ ಹೆಸರುಗಳಲ್ಲಿ ಒಂದು ಹಿಂದುಸ್ತಾನ.