ಸಿದ್ಧರಾಮ
sideshwara
ಸಿದ್ಧರಾಮ ೧೨ನೇ ಶತಮಾನದಲ್ಲಿ ಸೊನ್ನಲಿಗೆಯಲ್ಲಿದ್ದ ಪ್ರಸಿದ್ಧ ವಚನಕಾರ. ೧೨ನೇ ಶತಮಾನದಲ್ಲಿ ಶಿವಶರಣರು ಶ್ರಮದಾನ, ಸ್ವಯಂಸೇವೆಯನ್ನು ಕಾರ್ಯರೂಪಕ್ಕೆ ತಂದಿದ್ದರು. ಆ ಕಾಲಘಟ್ಟದ 'ಕಾಯಕ ಪ್ರತಿನಿಧಿ'ಯಾಗಿ ಸಿದ್ಧರಾಮ ನಿಲ್ಲತ್ತಾನೆ.
ಸಿದ್ಧರಾಮ | |
---|---|
![]() | |
ಜನನ | ಸಿದ್ಧರಾಮ /ಧೂಳಿಮಾಕಾಳ ೧೧೬೦ ಸೊನ್ನಲಿಗೆ |
ಅಂಕಿತನಾಮ | ಕಪಿಲಸಿದ್ಧ ಮಲ್ಲಿಕಾರ್ಜುನ |
ಸಿದ್ಧರಾಮನ ಹುಟ್ಟು/ಬಾಲ್ಯಸಂಪಾದಿಸಿ
- ಮುದ್ಧಗೌಡ ಮತ್ತು ಸುಗ್ಗವ್ವೆಗೆ ಸುಮಾರು ೫೦ವರ್ಷಗಳಾದ ಮೇಲೆ ತೇಜಸ್ವಿಯಾದ ಗಂಡು ಮಗುವೊಂದು ಜನಿಸುತ್ತದೆ. ಸಿದ್ಧರಾಮ ಮುದ್ಧಗೌಡ ಮತ್ತು ಸುಗ್ಗವ್ವೆಯರಲ್ಲಿ ತಾರುಣ್ಯದ ರಾಗ-ದ್ವೇಷ, ಕಾಮ-ಕ್ರೋಧಗಳು ವಿಜೃಂಭಿಸುವಾಗ ಹುಟ್ಟದೆ, ಅರಿಷಡ್ವರ್ಗಗಳೆಲ್ಲ ಶರೀರದಲ್ಲಿ ಆರುತ್ತಾ, ಪ್ರೇಮದಿಂದ ಪಕ್ವಗೊಂಡ ಅಪರ ವಯಸ್ಸಿನ ದೇಹದಲ್ಲಿ ಹುಟ್ಟುತ್ತಾನೆ. ಈತನ ಕಾಲ ೧೧೫೦(12ನೇ ಶತಮಾನ)
- ಮಗುವಿಗೆ ತಾಯಿ ಸಿದ್ಧರಾಮನೆಂಬ ಹೆಸರಿಡಬೇಕೆಂದರೆ, ತಂದೆ ಮಗನಿಗೆ 'ಧೂಳಿಮಾಕಾಳ'ನೆಂದು ಹೆಸರಿಡಲು ಆಲೊಚಿಸುತ್ತಾನೆ. ಸಿದ್ಧರಾಮ ಬಾಲ್ಯದಲ್ಲಿ ಮೌನದ ಅಪರಾವತಾರವೇ ಆಗಿದ್ದ. ಅವನೊಳಗಿನ ತೇಜಸ್ಸು 'ತಿಲದೊಳಗಿನ ತೈಲದಂತೆ, ಹಾಲಿನ ಮರೆಯ ತುಪ್ಪದಂತೆ' ಅಂತರಂಗದಲ್ಲಿ ಸುಪ್ತವಾಗಿದ್ದು, ಮೆಲ್ಲ ಮೆಲ್ಲನೆ ಮಾವಿನ ಮರದಡಿಯಲ್ಲಿ ಪಶುಪತಿಯ ಆರಾಧನೆಯೊಂದಿಗೆ ವಿಕಾಸಗೊಳ್ಳುತ್ತಾ ಸಾಗುತ್ತದೆ.
ಸಿದ್ಧರಾಮನ ಸತ್ವಪರೀಕ್ಷೆ/ಪವಾಡಸಂಪಾದಿಸಿ
- ಸೊನ್ನಲಿಗೆಯ ಜನ ಸಿದ್ಧರಾಮ ಪವಾಡ ಪುರುಷನೆಂದು ನಂಬುವುದರಲ್ಲೇ ಹೆಚ್ಚು ಖುಷಿ ಪಡುತ್ತಾರೆ.ಅವರ ದೃಷ್ಟಿಯಲ್ಲಿ ಸಿದ್ಧರಾಮ ದಿನಾ ರಾತ್ರಿ ಕೈಲಾಸಕ್ಕೆ ಹೋಗಿ, ಬೆಳಿಗ್ಗೆ ಅಲ್ಲಿಂದಲೇ ಬರೋದು.
- ಸಿದ್ಧರ ಸಿದ್ಧ ಕುಟಿಲ ವಿದ್ಯಾಸಾಗರ ಸಿದ್ಧರಾಮನ ಪವಾಡವನ್ನು ಕೇಳಿ ಬಂದು ಅವನನ್ನು ನೇರವಾಗಿ ಪರೀಕ್ಷಿಸುತ್ತಾನೆ. ಕುಟಿಲ ವಿದ್ಯಾಸಾಗರನ ಶಿಷ್ಯರು ಸಿದ್ಧರಾಮನ ಶಿಷ್ಯರನ್ನು ಸಾಯಿಸಲು ಗುಗ್ಗರಿಯಲ್ಲಿ ಭಯಂಕರ ವಿಷ ಬೆರೆಸಿಟ್ಟುರುವುದು ಸಿದ್ಧರಾಮನಿಗೆ ಗೊತ್ತಾಗುತ್ತದೆ. ಭಯಂಕರ ವಿಷ ಮಿಶ್ರಿತ ಆಹಾರವನ್ನು ಮಲ್ಲಿಕಾರ್ಜುನನ ಕೃಪೆಯಿಂದ ಸಿದ್ಧರಾಮ ಅಮೃತವನ್ನಾಗಿಸಿ ತನ್ನ ಶಿಷ್ಯರಿಗೆ ಅದನ್ನು ಹಂಚುತ್ತಾನೆ.
- ಮತ್ತೊಮ್ಮೆ ಸಿದ್ಧರಾಮ ಕೆಂಪಗೆ ಕಾದ ಪಂಚಲೋಹದ ಗುಂಡನ್ನು ಬರಿಗೈನಲ್ಲಿ ಹಿಡಿದು ತನ್ನ ಶಿಷ್ಯರಿಗೆ ತೋರಿಸುತ್ತಾನೆ.
ಸಿದ್ಧರಾಮನ ವಚನಸಂಪಾದಿಸಿ
ಹಸಿವುದೋರದ ಮುನ್ನ, ತೃಷೆದೋರದ ಮುನ್ನ
ವ್ಯಾಧಿ ವಿಪತ್ತುಗಳು ಬಂದಡರದ ಮುನ್ನ
ಕಪಿಲಸಿದ್ದ ಮಲ್ಲಿಕಾರ್ಜುನ ಲಿಂಗವ ಪೂಜಿಸೋ ಮುನ್ನ ಮುನ್ನ|