೨೦೧೧ ಐ.ಸಿ.ಸಿ ಕ್ರಿಕೆಟ್ ವಿಶ್ವ ಕಪ್

೨೦೧೧ರ ಐಸಿಸಿ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯು ಹತ್ತನೆಯ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿ. ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳು ಈ ಪಂದ್ಯಾವಳಿಯ ಆತಿಥ್ಯ ವಹಿಸಿದ್ದವು. ಪಂದ್ಯಾವಳಿಯಲ್ಲಿ ಹದಿನಾಲ್ಕು ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಭಾರತವು ಶ್ರೀಲಂಕಾ ತಂಡವನ್ನು ಮಣಿಸಿ ಈ ಪಂದ್ಯಾವಳಿಯನ್ನು ಗೆದ್ದುಕೊಂಡಿತು. ಭಾರತದ ಆಟಗಾರ ಯುವರಾಜ್ ಸಿಂಗ್ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದರು